CHITRADURGA NEWS | 12 SEPTEMBER 2026
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಐಮಂಗಲ ಗ್ರಾಮದ ಹತ್ತಿರದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಶನಿವಾರ ಸಮಾಜ ಕಲ್ಯಾಣ ಸಚಿವ ಕೆ.ಹೆಚ್.ಮುನಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಿಶ್ವಮಾನವ ವಸತಿ ಶಾಲೆಗೆ ಚಾಂಪಿಯನ್ ಪಟ್ಟ
ಈ ವೇಳೆ ಎಸ್.ಎಸ್.ಎಲ್.ಸಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವಂತೆ ಕಿವಿಮಾತು ಹೇಳಿದ ಸಚಿವರು, ವಸತಿ ಶಾಲೆಯಲ್ಲಿ ಪಿ.ಯು. ಶಿಕ್ಷಣ ಆರಂಭಿಸುವ ಭರವಸೆಯನ್ನು ನೀಡಿದರು.
“ಬಡತನದ ಹಿನ್ನೆಲೆ ಹೊಂದಿರುವ ಮಕ್ಕಳೇ ಇಲಾಖೆಯ ವಸತಿ ಶಾಲೆಯಲ್ಲಿ ಓದುವುದು. ನಿಮ್ಮ ತಂದೆ ತಾಯಂದಿರಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡುವ ಆರ್ಥಿಕ ಚೈತನ್ಯವಿಲ್ಲ. ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿ, ನೀಟ್ ಹಾಗೂ ಸಿಇಟಿ ಮೂಲಕ ಸರ್ಕಾರಿ ಕೋಟಾದಡಿ ವೈದ್ಯಕೀಯ ಹಾಗೂ ಇಂಜಿನಿಯರ್ ಸೀಟನ್ನು ಪಡೆಯುವ ಲಕ್ಷ್ಯ ಹೊಂದಬೇಕು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಎದುರಿಸಿ ಐ.ಎ.ಎಸ್, ಐ.ಪಿ.ಎಸ್ ಹಾಗೂ ಕೆ.ಎ.ಎಸ್ ಅಧಿಕಾರಿಗಳಾಗಿ ಸೇವೆ ಮಾಡುವ ಕನಸುಗಳನ್ನು ಕಾಣುವಂತೆ” ವಿದ್ಯಾರ್ಥಿನಿಯರಿಗೆ ಸಚಿವ ಕೆ.ಹೆಚ್. ಮುನಿಯಪ್ಪ ಪ್ರೇರಣೆ ನೀಡಿದರು.
ವಸತಿ ಶಾಲೆ ಹಾಗೂ ನಿಲಯಗಳಿಗೆ ಭೇಟಿ ನೀಡಿ ವರದಿ ನೀಡಲು ತಾಕೀತು:
ಅಧಿಕಾರಿಗಳು ಕಚೇರಿ ಕೆಲಸಗಳಿಗೆ ಸೀಮಿತವಾಗಬಾರದು. ಪ್ರತಿನಿತ್ಯ ಒಂದು ವಸತಿಶಾಲೆ ಅಥವಾ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನಾ ವರದಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್ ಅವರಿಗೆ ಸಚಿವ ಕೆ.ಹೆಚ್.ಮುನಿಯಪ್ಪ ತಾಕೀತು ಮಾಡಿದರು.
ಇದನ್ನೂ ಓದಿ: ಜೆಜೆಎಂ ಕಾಮಗಾರಿ ವಿಳಂಬ | 383 ಕಾಮಗಾರಿಗಳಿಗೆ ಕಾಲಾವಧಿ ವಿಸ್ತರಣೆ, ದಂಡ ವಿಧಿಸಲು ಪ್ರಸ್ತಾವನೆ | ಜಿ.ಪಂ. ಸಿಇಓ
ಈ ಕುರಿತು ಇಲಾಖೆ ಆಯುಕ್ತರಿಂದ ಸುತ್ತೋಲೆ ಹೊರಡಿಸಲಾಗುವುದು. ವಸತಿಶಾಲೆ ಹಾಗೂ ನಿಲಯಗಳಲ್ಲಿ ಅಧಿಕಾರಿ ಪರಿಶೀಲಿಸಬೇಕಾದ ತಪಸೀಲು ಪಟ್ಟಿಯನ್ನು ಸಹ ಸತ್ತೋಲೆಯೊಂದಿಗೆ ನೀಡಲಾಗುವುದು. ವಸತಿ ನಿಲಯ ಅಥವಾ ಶಾಲೆ ಮುಖ್ಯಸ್ಥರಿಗೆ ಯಾವುದೇ ಸುಳಿವು ನೀಡದೆ, ಅನಿರೀಕ್ಷಿತವಾಗಿ ಭೇಟಿ ನೀಡಬೇಕು. ಕಡ್ಡಾಯವಾಗಿ ವಾರಕ್ಕೆ ಒಂದು ದಿನ ಜಿಲ್ಲಾಧಿಕಾರಿ ಹಾಗೂ ಸಿಇಓಗಳು ಸಹ ಪರಿಶೀಲನೆ ನಡೆಸಬೇಕು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಸೂಚಿಸಿದರು.
ಕುಡಿಯುವ ನೀರು ಸರಬರಾಜಿಗೆ ಅನುದಾನ
ಐಮಂಗಲ ಬಹುಗ್ರಾಮ ಕುಡಿಯುವ ನೀರಿನ ಯೋಜನಯಿಂದ ವಸತಿ ಶಾಲೆ ನೀರು ಸರಬರಾಜು ಮಾಡಲು ವಿದ್ಯಾರ್ಥಿನಿಯರು ಮನವಿ ಮಾಡಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಕೆ.ಹೆಚ್.ಮುನಿಯಪ್ಪನವರು ಪೈಪ್ ಲೈನ್ ಕಾಮಗಾರಿ ಯೋಜನಾ ವರದಿಯನ್ನು ಸಿದ್ದಪಡಿಸುವಂತೆ ಸಿಇಓಗೆ ಸೂಚಿಸಿದರು. ಕಾಮಗಾರಿ ತಗಲು ವೆಚ್ಚಕ್ಕೆ ಇಲಾಖೆಯಿಂದ ಅನುದಾನ ನೀಡುವುದಾಗಿ ತಿಳಿಸಿದರು. ಇದೇ ವೇಳೆ ವಸತಿ ಶಾಲೆಯ ಬೋದನಾ ಕೊಠಡಿ, ಪ್ರಯೋಗಾಲಯ, ಡಾರ್ಮೆಂಡರ್, ಭೋಜನಾಲಯಗಳಿಗೆ ಸಚಿವರು ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ: ಹಿರಿಯೂರಿನಲ್ಲಿ ಸಮುದಾಯ ಭವನ, ವಸತಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ | ಸಚಿವ ಕೆ.ಹೆಚ್.ಮುನಿಯಪ್ಪ
ಸೊಪ್ಪು ತರಕಾರಿ ತೊಳೆದು ಬಳಸಲು ಸಲಹೆ
ವಸತಿ ಶಾಲೆಯ ಅಡುಗೆ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದ ಸಚಿವ ಕೆ.ಹೆಚ್.ಮುನಿಯಪ್ಪನವರು, ಸೊಪ್ಪು ತರಕಾರಿಗಳನ್ನು ತಪ್ಪದೇ ನೀರಿನಲ್ಲಿ ತೊಳೆದು ಬಳಸುವಂತೆ ಸಲಹೆ ನೀಡಿದರು. ಊಟದ ಮೆನುವಿನ ಆಧರಿಸಿ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಬೇಕು. ಮೊಟ್ಟೆ,ಬಾಳೆಯನ್ನು ವಿತರಿಸಬೇಕು ಎಂದರು.
ಈ ವೇಳೆ ಬಹಳ ವರ್ಷಗಳಿಂದ ವಸತಿ ಶಾಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಖಾಯಂ ಗೊಳಿಸಲು ಅಡುಗೆ ಸಿಬ್ಬಂದಿ ಸಚಿವರಲ್ಲಿ ಮನವಿ ಮಾಡಿದರು.
ಇಲಾಖೆಯಲ್ಲಿನ ಖಾಯಂ ಅಡುಗೆ ಸಿಬ್ಬಂದಿಗೆ ಸೇವಾ ಹಿರಿತನದ ಆಧಾರದಲ್ಲಿ ಬಡ್ತಿ ನೀಡಲಾಗುತ್ತದೆ. ನಂತರ ಭರ್ತಿ ಮಾಡುವ ಹುದ್ದೆಗಳಲ್ಲಿ ಕ್ರೈಸ್ ಅಡಿ ಈಗಾಗಲೇ ಕೆಲಸ ಮಾಡುವ ಅಡುಗೆ ಸಿಬ್ಬಂದಿಗೆ ಆದ್ಯತೆ ನೀಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಪಿ.ಯು.ಶಿಕ್ಷಣ ಆರಂಭಕ್ಕೆ ಸಿದ್ದತೆಗೆ ಸೂಚನೆ
ಸದ್ಯ ಇರುವ ವಸತಿ ಶಾಲೆಯ ಕಟ್ಟದ ಮೇಲ್ಬಾಗದಲ್ಲಿಯೇ ಇನ್ನಷ್ಟು ಕೊಠಡಿಗಳನ್ನು ನಿರ್ಮಿಸಿ ಪಿ.ಯು. ಶಿಕ್ಷಣ ಆರಂಭಿಸಲು ಯೋಜನೆಯೊಂದನ್ನು ಸಿದ್ದಪಿಡಿಸಿ ಇಲಾಖೆ ಪ್ರಸ್ತಾವನೆ ಸಲ್ಲಿಸುವಂತೆ ವಸತಿ ಶಾಲೆ ಪ್ರಾಂಶುಪಾಲರಿಗೆ ಸಚಿವ.ಕೆ.ಹೆಚ್.ಮುನಿಯಪ್ಪ ಸೂಚಿಸಿದರು.
ಇದನ್ನೂ ಓದಿ: ಸೆ.24ಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಿತ್ರದುರ್ಗಕ್ಕೆ | ಗೋನೂರು ಕೆರೆಗೆ ಬಾಗೀನ
ವಸತಿ ಶಾಲೆಯ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿದ ಅವರು, ಎಲ್ಲಾ ವಿದ್ಯಾರ್ಥಿಗಳನ್ನು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣ ಮಾಡುವ ಗುರಿಯನ್ನು ಪ್ರಾಂಶುಪಾಲರಿಗೆ ನೀಡಿ, ಗಣ್ಯರ ಭೇಟಿ ಪುಸ್ತಕದಲ್ಲಿ ಸಹಿ ಮಾಡಿದರು. ಭೇಟಿ ನೆನಪಿಗಾಗಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸಚಿವರೊಂದಿಗೆ ಪೋಟೋ ತೆಗೆಸಿಕೊಂಡರು.
ಈ ವೇಳೆ ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ವಸತಿ ಶಾಲೆ ಪ್ರಾಂಶುಪಾಲ ಆರ್.ರಮೇಶ್ ಸೇರಿದಂತೆ ಮತ್ತಿತರರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

