CHITRADURGA NEWS | 15 SEPTEMBER 2026
ಚಿತ್ರದುರ್ಗ: ನಗರದ ವಿದ್ಯಾನಗರದ ವಿದ್ಯಾ ಗಣಪತಿ ಸಭಾಂಗಣದಲ್ಲಿ 18ನೇ ವರ್ಷದ ಗಣೇಶೋತ್ಸವದ ಅಂಗವಾಗಿ ವಿ ಬಾಯ್ಸ್ ತಂಡದ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಮಂಗಳವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಇದನ್ನೂ ಓದಿ: ಶಾಂತಿಯುತ ಗೌರಿ ಗಣೇಶ ಹಬ್ಬ ಆಚರಿಸಲು ಪೊಲೀಸ್ ಇಲಾಖೆ ಮನವಿ
ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ನಡೆದ ಶಿಬಿರವನ್ನು ಸಮೃದ್ಧಿ ಡೆವಲಪರ್ಸ್ ಹಾಗೂ ಸಮೃದ್ಧಿ ಟ್ರೇಡರ್ಸ್ ಮಾಲೀಕ ಅನಿಲ್ಕುಮಾರ್ ಚಿಕ್ಕಂದವಾಡಿ ಉದ್ಘಾಟಿಸಿ ಶುಭ ಹಾರೈಸಿದರು.
ಅಭಿಷೇಕ್ ಚಿಕ್ಕಂದವಾಡಿ ಮಾತನಾಡಿ, ಗಣೇಶೋತ್ಸವದ ಸಂದರ್ಭದಲ್ಲಿ ರಕ್ತದಾನದಂತಹ ಸೇವಾ ಕಾರ್ಯವನ್ನು ಆಯೋಜಿಸಿರುವುದು ಶ್ಲಾಘನೀಯ. ರಕ್ತದಾನದಿಂದ ಅನೇಕ ಜೀವಗಳನ್ನು ಉಳಿಸಲು ಹಾಗೂ ಅಗತ್ಯವಿರುವವರಿಗೆ ಆರೋಗ್ಯ ಸೇವೆ ಒದಗಿಸಲು ನೆರವಾಗುತ್ತದೆ. ಇಂತಹ ಉತ್ತಮ ಕಾರ್ಯಕ್ಕೆ ಮುಂದಾಗಿರುವ ವಿ ಬಾಯ್ಸ್ ತಂಡದ ಯುವಕರನ್ನು ಅಭಿನಂದಿಸಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಚೇರ್ಮನ್ ಗಾಯತ್ರಿ ಶಿವರಾಮ್ ಅವರ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ ಕಾರ್ಯದರ್ಶಿ ಮಜರುಲ್ಲ, ಉಪಾಧ್ಯಕ್ಷ ಅರುಣ್ ಕುಮಾರ್, ನಿರ್ದೇಶಕರಾದ ಶಿವರಾಮ್, ಜ್ಞಾನಮೂರ್ತಿ ಹಾಗೂ ಮಲ್ಲಿಕಾರ್ಜುನ್ ಭಾಗವಹಿಸಿದ್ದರು.
ಗಣೇಶೋತ್ಸವದ ಅಂಗವಾಗಿ ನಡೆದ ಶಿಬಿರದಲ್ಲಿ ಹುಸೇನ್ ಸಾಬ್ ಮೊದಲಿಗರಾಗಿ ರಕ್ತದಾನ ಮಾಡುವ ಮೂಲಕ ಭಾವೈಕ್ಯತೆ ಮೆರೆದರು.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಅದ್ದೂರಿ ಚಾಲನೆ
ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಯಪ್ರಕಾಶ್ ರೆಡ್ಡಿ, ಉಪಾಧ್ಯಕ್ಷ ಅನಂತರಾಜ್, ಕಾರ್ಯದರ್ಶಿ ಸಿದ್ದೇಶ್, ಸಹ ಕಾರ್ಯದರ್ಶಿ ವೀಣಾ, ಖಜಾಂಚಿ ವೇಣುಗೋಪಾಲ್ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು. ರಕ್ತದಾನಿಗಳಿಗೆ ರೆಡ್ ಕ್ರಾಸ್ ಸಂಸ್ಥೆಯ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ವಿ ಬಾಯ್ಸ್ ತಂಡದೊಂದಿಗೆ ಹಲವು ನಿರ್ದೇಶಕರ ಮಕ್ಕಳು ಕೂಡ ರಕ್ತದಾನ ಮಾಡಿದ್ದು ವಿಶೇಷವಾಗಿತ್ತು. ಬಸವೇಶ್ವರ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಪವನ್ ಕುಮಾರ್ ಹಾಗೂ ಸಿಬ್ಬಂದಿ ಶಿಬಿರದಲ್ಲಿ ಸೇವೆ ಸಲ್ಲಿಸಿದರು. ಒಟ್ಟು 35 ಯುನಿಟ್ ರಕ್ತ ಸಂಗ್ರಹಿಸಲಾಯಿತು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

