CHITRADURGA NEWS | 16 September 2026
ಚಿತ್ರದುರ್ಗ: ಮದ್ಯಪಾನ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜನರಲ್ಲಿ ವ್ಯಾಪಕ ಅರಿವು ಮೂಡಿಸಲು ರಾಜ್ಯದ ಮಠಾಧೀಶರ ನೇತೃತ್ವದಲ್ಲಿ ದುಂಡುಮೇಜಿನ ಸಭೆ ಆಯೋಜಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಚರ್ಚಿಸಲು ಇದೇ ಸೆಪ್ಟೆಂಬರ್ 23ಕ್ಕೆ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿ ಶ್ರೀಮಠದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಶರಣಪ್ಪ ಸಲಾದಪುರ ತಿಳಿಸಿದರು.
ಇದನ್ನೂ ಓದಿ: ಹಿರಿಯ ನಾಗರಿಕರಿಗೆ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡಿನಲ್ಲಿ ಸಮಾಜಮುಖಿ ಚಿಂತನೆಯುಳ್ಳ ಮಠಾಧೀಶರ ಮಾತುಗಳಿಗೆ ಜನರ ಮೇಲೆ ಅಪಾರ ಪ್ರಭಾವವಿದೆ. ಅವರ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವುದು ಎಂದರು.
ಸೆಪ್ಟೆಂಬರ್ 23ರಂದು ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀಗಳ ಸಮ್ಮುಖದಲ್ಲಿ ದುಂಡುಮೇಜಿನ ಪೂರ್ವಭಾವಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಬೃಹತ್ ಪ್ರಮಾಣದಲ್ಲಿ ಆಯೋಜಿಸಲು ಉದ್ದೇಶಿಸಿರುವ ದುಂಡುಮೇಜಿನ ಸಭೆಯ ರೂಪುರೇಷೆ, ಕಾರ್ಯಕ್ರಮದ ಸ್ಥಳ ಹಾಗೂ ದಿನಾಂಕವನ್ನು ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.
ಈ ಸಭೆಗೆ ಮಂಡಳಿಯ ವತಿಯಿಂದ ರಾಜ್ಯದ ವಿವಿಧ ಮಠಾಧೀಶರಿಗೆ ಆಹ್ವಾನ ನೀಡಲಾಗುತ್ತಿದ್ದು, ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಅವರು ಮನವಿ ಮಾಡಿದರು.
ಇದನ್ನೂ ಓದಿ: ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರಕ್ಕೆ ರಾಘವೇಂದ್ರ ಕುಷ್ಟಗಿ ಆಯ್ಕೆ
ಮದ್ಯಮುಕ್ತ ಹಾಗೂ ಆರೋಗ್ಯಕರ ಸಮಾಜ ಕಟ್ಟುವ ಕೆಲಸ ಕೇವಲ ಸರ್ಕಾರದ ಕರ್ತವ್ಯವಷ್ಟೇ ಅಲ್ಲ, ಇದು ನಮ್ಮೆಲ್ಲರ ಜಂಟಿ ಹೊಣೆಗಾರಿಕೆಯಾಗಿದೆ. ಮುಂದಿನ ಪೀಳಿಗೆಗೆ ಆರೋಗ್ಯಪೂರ್ಣ ಹಾಗೂ ಸುಸ್ಥಿರ ವಾತಾವರಣ ಬಿಟ್ಟು ಹೋಗುವುದು ನಮ್ಮ ಕರ್ತವ್ಯ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮದ್ಯವರ್ಜನ ಶಿಬಿರಗಳ ಮೂಲಕ ಸಮಾಜದಲ್ಲಿ ತಂದಿರುವ ಬದಲಾವಣೆಯ ಮಾದರಿಯಲ್ಲೇ ರಾಜ್ಯಾದ್ಯಂತ ಈ ಜಾಗೃತಿ ಚಟುವಟಿಕೆಯನ್ನು ತೀವ್ರಗೊಳಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ರೂಪಾ, ಸಲಹೆಗಾರರಾದ ಎಂ.ಎಸ್.ನಂದೀಶ್, ಜಿಲ್ಲಾ ವಾರ್ತಾಧಿಕಾರಿ ಎಂ.ಜುಂಜಣ್ಣ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

