CHITRADURGA NEWS | 17 SEPTEMBER 2026
ಚಿತ್ರದುರ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ನಗರ ಘಟಕದ ವತಿಯಿಂದ ನಗರದ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 17 | ಹತ್ತಿ ರೇಟ್ ಎಷ್ಟಿದೆ?
ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹದ ವಾತಾವರಣ ಕಂಡುಬಂದಿತು.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ದೇಶಾದ್ಯಂತ ಒಂದು ತಿಂಗಳ ಕಾಲ ‘ಸೇವಾ ಸಂಕಲ್ಪ’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 25 ವರ್ಷಗಳಿಂದ ಸಂವಿಧಾನಾತ್ಮಕ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಪ್ರಧಾನಿಯಾಗಿ 12 ವರ್ಷಗಳ ಆಡಳಿತದಲ್ಲಿ 200ಕ್ಕೂ ಹೆಚ್ಚು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ದೀನದಲಿತರು, ಬಡವರು, ಮಹಿಳೆಯರು, ಬೀದಿ ಬದಿ ವ್ಯಾಪಾರಿಗಳು, ಪೌರಕಾರ್ಮಿಕರು ಹಾಗೂ ಸಮಾಜದ ಶೋಷಿತ ವರ್ಗಗಳ ಸಬಲೀಕರಣಕ್ಕೆ ವಿವಿಧ ಯೋಜನೆಗಳ ಮೂಲಕ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಭೋವಿ ಯುವಕ-ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ | ಅರ್ಜಿ ಆಹ್ವಾನ
ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿಯೂ ಹಲವು ಸುಧಾರಣೆಗಳನ್ನು ಕೈಗೊಳ್ಳಲಾಗಿದೆ. ಹೊಸ ಐಐಟಿ ಹಾಗೂ ಏಮ್ಸ್ ಸಂಸ್ಥೆಗಳ ಸ್ಥಾಪನೆಯ ಮೂಲಕ ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣಕ್ಕೆ ಉತ್ತೇಜನ ನೀಡಲಾಗಿದೆ. ಕರ್ನಾಟಕದಲ್ಲಿ ದೀನದಲಿತರ ಮಕ್ಕಳಿಗೆ ಉಚಿತವಾಗಿ 6,000ಕ್ಕೂ ಹೆಚ್ಚು ಎಂಜಿನಿಯರಿಂಗ್ ಸೀಟುಗಳು ಹಾಗೂ 600ಕ್ಕೂ ಹೆಚ್ಚು ವೈದ್ಯಕೀಯ ಮತ್ತು ಸ್ನಾತಕೋತ್ತರ ಸೀಟುಗಳ ಹೆಚ್ಚಳದಿಂದ ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗಿದೆ ಎಂದು ಕಾರಜೋಳ ಹೇಳಿದರು.
ವಿಕಸಿತ ಭಾರತದ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಧಾನಿ ಮೋದಿ ಶ್ರಮಿಸುತ್ತಿದ್ದಾರೆ. ಅವರ ಜನ್ಮದಿನದ ಅಂಗವಾಗಿ ದೇಶದ ಜನರು ದೀಪಾವಳಿಯಂತೆ ದೀಪ ಬೆಳಗಿಸುವ ಮೂಲಕ ಪ್ರಧಾನಿಯವರಿಗೆ ಆಶೀರ್ವಾದ ನೀಡಬೇಕು ಎಂದು ಅವರು ಮನವಿ ಮಾಡಿದರು.
ಇದನ್ನೂ ಓದಿ: ಮದ್ಯ-ಮಾದಕ ವಸ್ತುಗಳ ವಿರುದ್ಧ ಜಾಗೃತಿ | ಸೆ.23ರಂದು ಸಾಣೇಹಳ್ಳಿಯಲ್ಲಿ ಪೂರ್ವಭಾವಿ ಸಭೆ
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ರೇಖಾ, ಮಾಧುರಿ ಗೀರೀಶ್, ಡಾ.ಸಿದ್ದಾರ್ಥ ಗುಂಡಾರ್ಪಿ, ಲೋಕೇಶ್, ಪರಶುರಾಮ್, ಸಂಪತ್ ಕುಮಾರ್, ನಾಗರಾಜ್, ಬಸಮ್ಮ, ಭಾರ್ಗವಿ ದ್ರಾವಿಡ್, ಮುರಾರ್ಜಿ, ಚಂದ್ರು ಸೇರಿದಂತೆ ಹಲವರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

