CHITRADURGA NEWS | 19 SEPTEMBER 2026
ಚಿತ್ರದುರ್ಗ: ಚಿತ್ರನಟ ಪ್ರಕಾಶ್ ರಾಜ್ ಅವರ ‘ನಿರ್ದಿಗಂತ’ ತಂಡದ ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಪ್ರದರ್ಶನ ಸೆ.19ರಂದು ಶನಿವಾರ ಸಂಜೆ 6 ಗಂಟೆಗೆ ನಗರದ ತರಾಸು ರಂಗಮಂದಿರದಲ್ಲಿ ನಡೆಯಲಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಸವಕೇಂದ್ರ ಮುರುಘಾಮಠ, ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ದುರ್ಗದ ಸಿರಿ ಕಲಾ ತಂಡದ ಸಹಯೋಗದಲ್ಲಿ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.
ಇದನ್ನೂ ಓದಿ: SIR | ಚಿತ್ರದುರ್ಗ ಜಿಲ್ಲೆಯಲ್ಲಿ 64,611 ಮತದಾರರಿಗೆ ನೋಟಿಸ್ ಜಾರಿ
ಕಾರ್ಯಕ್ರಮದಲ್ಲಿ ಬಸವಕೇಂದ್ರ ಮುರುಘಾಮಠದ ಡಾ.ಬಸವಕುಮಾರ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ, ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ದುರ್ಗದ ಸಿರಿ ಕಲಾ ತಂಡದ ಮಹಾಂತರೆಡ್ಡಿ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ವಿನಾಯಕ ತೊಡರನಾಳು ಭಾಗವಹಿಸಲಿದ್ದಾರೆ.
ನಾಟಕ ಪ್ರದರ್ಶನಕ್ಕೆ ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಘಟಕ ಚಿಕ್ಕಪ್ಪನಹಳ್ಳಿ ಷಣ್ಮುಖ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

