CHITRADURGA NEWS | 20 SEPTEMBER 2026
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಚೆಕ್ ಡ್ಯಾಂ, ಬ್ರಿಡ್ಜ್ ಕಂ ಬ್ಯಾರೇಜ್‍ಗಳಿಗೆ 0.25 ಟಿ.ಎಂ.ಸಿ ಪ್ರಮಾಣದ ನೀರನ್ನು ಸಂಗ್ರಹಿಸಲು ವಾಣಿವಿಲಾಸ ಸಾಗರ (ವಿ.ವಿ.ಸಾಗರ) ಜಲಾಶಯದಿಂದ ವೇದಾವತಿ ನದಿಗೆ ಇದೇ ಸೆಪ್ಟೆಂಬರ್ 19 ರಿಂದ ನೀರನ್ನು ಹರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಸಾರ್ವಜನಿಕರಿಗೆ ವಿಶ್ವೇಶ್ವರಯ್ಯ ಜಲ ನಿಗಮ ಮುನ್ನೆಚ್ಚರಿಕೆ ಸೂಚನೆ ನೀಡಿದೆ.
ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆಯಡಿ ರೈತರಿಗೆ ಪಂಪ್‌ಸೆಟ್, ಬಿಡಿಭಾಗ ವಿತರಣೆ
ಪ್ರಾದೇಶಿಕ ಆಯುಕ್ತರು ಹಾಗೂ ಕಂದಾಯ ಇಲಾಖೆ ಆಯುಕ್ತರ ಆದೇಶದಂತೆ ನೀರು ಹರಿಸಲಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮವಾಗಿ ನದಿ, ಚೆಕ್ ಡ್ಯಾಂ, ಬ್ರಿಡ್ಜ್ ಕಂ ಬ್ಯಾರೇಜ್ ಹಾಗೂ ಹಳ್ಳಗಳ ಪಾತ್ರಗಳಲ್ಲಿ ಜನರು ಸಂಚರಿಸುವುದು, ಈಜಾಡುವುದು ಮತ್ತು ಜಾನುವಾರುಗಳನ್ನು ನದಿ ಒಳಗೆ ಬಿಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸೂಚನೆಗಳನ್ನು ಉಲ್ಲಂಘಿಸುವುದು, ಸರ್ಕಾರದ ಆಸ್ತಿಯಾದ ಕಟ್ಟಡಗಳನ್ನು ಹಾನಿಗೊಳಿಸುವುದು ಹಾಗೂ ಅನಧಿಕೃತವಾಗಿ ಪಂಪ್‍ಸೆಟ್‍ಗಳನ್ನು ಅಳವಡಿಸಿ ನೀರನ್ನು ಎತ್ತುವುದು ನೀರಾವರಿ ಕಾಯ್ದೆಯಡಿ ಕಾನೂನು ಬಾಹಿರವಾಗಿದೆ.
ಇದನ್ನೂ ಓದಿ: ಸೇವಾ ಸಂಕಲ್ಪ ಅಭಿಯಾನ | ಚಿತ್ರದುರ್ಗದಲ್ಲಿ ರಕ್ತದಾನ ಶಿಬಿರ
ನಿಯಮ ಉಲ್ಲಂಘಿಸುವವರ ವಿರುದ್ಧ ನೀರಾವರಿ ಕಾಯ್ದೆ ಮತ್ತು ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭದ್ರಾ ಮೇಲ್ದಂಡೆ ಯೋಜನಾ ವೃತ್ತದ ಅಧೀಕ್ಷಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

