CHITRADURGA NEWS | 21 September 2026
ಚಿತ್ರದುರ್ಗ: ಬಾಪೂಜಿ ವಿದ್ಯಾಸಂಸ್ಥೆ ಕಾರ್ಯದರ್ಶಿ, ಅಖಿಲ ಭಾರತೀಯ ಶರಣ ಸಾಹಿತ್ಯ ಪರಿಷತ್ ರಾಜ್ಯ ಉಪಾಧ್ಯಕ್ಷರಾಗಿದ್ದ ಕೆ.ಎಂ.ವೀರೇಶ್(66) ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇದನ್ನೂ ಓದಿ: ದಿನ ಭವಿಷ್ಯ | ಸೆಪ್ಟೆಂಬರ್ 21 | ಮನೆಯಲ್ಲಿ ಶುಭ ಕಾರ್ಯಗಳು, ಬಾಲ್ಯದ ಗೆಳೆಯರ ಭೇಟಿ
ಜಿಲ್ಲೆಯ ಸಾಂಸ್ಕೃತಿಕ ವಲಯದಲ್ಲಿ ಸದಾ ಸಕ್ರೀಯರಾಗಿದ್ದ ಕೆ.ಎಂ.ವೀರೇಶ್ ಅವರು, ಸಾಹಿತ್ಯ, ಸಂಸ್ಕೃತಿ ಇನ್ನಿತರೆ ಕಾರ್ಯಕ್ರಮಗಳ ರೂವಾರಿ, ಕೊಡುಗೈ ದಾನಿಯಾಗಿಯೂ ಹೆಸರಾದವರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅವರು, ಚಿತ್ರದುರ್ಗದಲ್ಲಿ ನಡೆದಿದ್ದ 75 ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನೆರವೇರಸಿದ್ದರು.ಮುರುಘಾ ಮಠದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ, ಪಿಳ್ಳೆಕೆರೆನಹಳ್ಳಿಯಲ್ಲಿ ಬಾಪೂಜಿ ವಿದ್ಯಾಸಂಸ್ಥೆ ಆರಂಭಿಸಿ ಹಲವು ಕೋರ್ಸ್ ಗಳ ಮೂಲಕ ಬಡ ಮಕ್ಕಳಿಗೆ ಶಿಕ್ಷಣದ ವಿಚಾರದಲ್ಲಿ ನೆರವಾದವರು.
ಮೊನ್ನೆ ತಾನೇ ತರಾಸು ರಂಗಮಂದಿರದಲ್ಲಿ ನಡೆದ ಪಂಚತಂತ್ರ ನಾಟಕ ಕಾರ್ಯಕ್ರಮದಲ್ಲೂ ಭಾಗವಹಿಸಿ ಲವಲವಿಕೆಯಿಂದ ಇದ್ದ ವೀರೇಶ್ ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ.
ಇದನ್ನೂ ಓದಿ: ತ್ರಿಫಲವು ಮೂಲವ್ಯಾಧಿಗೆ ಪ್ರಯೋಜನಕಾರಿಯೇ ತಿಳಿಯಿರಿ
ಇಂದು ಸೋಮವಾರ ಬೆಳಗ್ಗೆ 7 ರಿಂದ ಮಧ್ಯಾಹ್ನ 3 ಗಂಟೆವರೆಗೆ ಬಾಪೂಜಿ ವಿದ್ಯಾಸಂಸ್ಥೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಆನಂತರ ಕೂಡ್ಲಿಗಿ ತಾಲೂಕು ಕಾನಮಡಗು ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

