CHITRADURGA NEWS | 23 SEPTEMBER 2026
ಚಿತ್ರದುರ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿಗೆ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಅರ್ಹ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 17 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಭದ್ರಾ ನೀರು ನಮ್ಮೂರ ಕೆರೆಗಳಿಗೂ ಹರಿಸಿ | ಕ್ಯಾದಿಗೆರೆ, ಜೆ.ಎನ್.ಕೋಟೆ ರೈತರ ಆಗ್ರಹ
ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕಿರು ಆರ್ಥಿಕ ಚಟುವಟಿಕೆಗಳಿಗೆ ಗರಿಷ್ಠ ರೂ.1.00 ಲಕ್ಷ ಘಟಕ ವೆಚ್ಚದಲ್ಲಿ ರೂ.50,000 ಸಹಾಯಧನ ಹಾಗೂ ರೂ.50,000 ಸಾಲ ಸೌಲಭ್ಯ ನೀಡಲಾಗುತ್ತದೆ. ಹೈನುಗಾರಿಕೆ ಯೋಜನೆಗೆ ರೂ.1.25 ಲಕ್ಷ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ ರೂ.4.00 ಲಕ್ಷದವರೆಗೆ ಸಹಾಯಧನ ಲಭ್ಯವಿದೆ. ಫಾಸ್ಟ್ ಫುಡ್ ಟ್ರಕ್/ಮೊಬೈಲ್ ಕಿಚನ್ ಯೋಜನೆಯಡಿ ಶೇ. 75 (ಗರಿಷ್ಠ ರೂ.4.00 ಲಕ್ಷ) ಮತ್ತು ಉದ್ಯಮಶೀಲತಾ ಅಭಿವೃದ್ಧಿ ಯೋಜನೆಗೆ ಗರಿಷ್ಠ ರೂ.2.00 ಲಕ್ಷ ಸಹಾಯಧನ ನೀಡಲಾಗುವುದು.
ಮಹಿಳಾ ಸ್ವ-ಸಹಾಯ ಸಂಘಗಳಿಗೆ ಮೈಕ್ರೋ ಕ್ರೆಡಿಟ್ ಯೋಜನೆಯಡಿ ರೂ.2.50 ಲಕ್ಷ ಸಹಾಯಧನ ಮತ್ತು ರೂ.2.50 ಲಕ್ಷ ಸಾಲ ಸಿಗಲಿದೆ. ಸಣ್ಣ ರೈತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ನೀರಾವರಿ ಸೌಲಭ್ಯ ಹಾಗೂ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಭೂ ಒಡೆತನ ಯೋಜನೆಯಡಿ ಜಮೀನು ಖರೀದಿಸಲು ಸಾಲ ಮತ್ತು ಸಹಾಯಧನ ನೀಡಲಾಗುತ್ತದೆ.
ಇದನ್ನೂ ಓದಿ: ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಪ್ರತಿಭಟನೆ
ಅರ್ಹ ಅಭ್ಯರ್ಥಿಗಳು 18.09.2026 ರಿಂದ 17.10.2026 ರವರೆಗೆ ಗ್ರಾಮ ಒನ್, ಕರ್ನಾಟಕ ಒನ್ ಫೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಸರಸ್ವತಿಪುರಂ ಮುಖ್ಯರಸ್ತೆ, ಚಿತ್ರದುರ್ಗ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

