CHITRADURGA NEWS | 26 SEPTEMBER 2026
ಹೊಸದುರ್ಗ: ಹೊಸದುರ್ಗ ತಾಲ್ಲೂಕಿನ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆ.27ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಹೊಸದುರ್ಗ 220/66 ಕೆವಿ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಹೊಸದುರ್ಗ, ನೀರಗುಂದ, ಬಾಗೂರು, ಹಾಲುರಾಮೇಶ್ವರ ಹಾಗೂ ಮಡದಕೆರೆ ಸೇರಿದಂತೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಅಲ್ಲದೆ, 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿಯೂ ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಸಂಬಂಧಪಟ್ಟ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಹೊಸದುರ್ಗ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
ಇದನ್ನೂ ಓದಿ: ಜೈನ್, ಬೌದ್ಧ, ಸಿಖ್ ಧಾರ್ಮಿಕ ಸೇವಕರಿಗೆ ಮಾಸಿಕ ಗೌರವಧನ | ಅರ್ಜಿ ಆಹ್ವಾನ
ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

