CHITRADURGA NEWS | 27 SEPTEMBER 2026
ಚಿತ್ರದುರ್ಗ: ಅಲೆಮಾರಿ ಹಾಗೂ ಅರೆಅಲೆಮಾರಿ ಜೋಗಿ ಸಮುದಾಯದವರಿಗೆ ಮದುವೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ಸಮುದಾಯ ಭವನ ನಿರ್ಮಿಸಲು ₹3 ಕೋಟಿ ಅನುದಾನ ನೀಡುವಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಗಿದೆ.
ಇದನ್ನೂ ಓದಿ: ಸೆ.30ರಂದು ಚಿತ್ರದುರ್ಗದಲ್ಲಿ ಮಾದಿಗ ಮುನ್ನಡೆ-2 ಜಿಲ್ಲಾ ಸಮಾವೇಶ
ಜೋಗಿ ಸಮುದಾಯವು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಸಮುದಾಯದ ಹಲವು ಕುಟುಂಬಗಳು ಕೃಷಿ, ಕೂಲಿ ಕೆಲಸ, ಭಿಕ್ಷಾಟನೆ, ಡಬ್ಬ-ಬೀಗ ರಿಪೇರಿ ಹಾಗೂ ಕಿನ್ನರಿ ನುಡಿಸುವ ಮೂಲಕ ಜೀವನ ನಡೆಸುತ್ತಿವೆ. ಶೈಕ್ಷಣಿಕವಾಗಿ ಹಿಂದುಳಿದಿರುವ ಸಮುದಾಯಕ್ಕೆ ರಾಜ್ಯದಲ್ಲಿ ಸಮುದಾಯ ಭವನ ಅಥವಾ ಶಿಕ್ಷಣ ಕೇಂದ್ರಗಳಂತಹ ಮೂಲಸೌಕರ್ಯಗಳ ಕೊರತೆಯಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಸರ್ಕಾರವು ಜೋಗಿ ಸಮುದಾಯವನ್ನು ಹಿಂದುಳಿದ ಹಾಗೂ ಅಲೆಮಾರಿ-ಅರೆಅಲೆಮಾರಿ ಸಮುದಾಯವೆಂದು ಪರಿಗಣಿಸಿ ಪ್ರವರ್ಗ-1ರಲ್ಲಿ ಸೇರ್ಪಡೆ ಮಾಡಿದೆ. ಆರ್ಥಿಕವಾಗಿ ದುರ್ಬಲವಾಗಿರುವ ಸಮುದಾಯದ ಅಭಿವೃದ್ಧಿಗೆ ಮೂಲಸೌಕರ್ಯ ಕಲ್ಪಿಸುವ ಅಗತ್ಯವಿದೆ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಚಿಕ್ಕಪುರ ಗ್ರಾಮದ ರಿ.ಸ.ನಂ.101ರಲ್ಲಿ ಸಂಘಕ್ಕೆ ಷರತ್ತಿನ ಆಧಾರದ ಮೇಲೆ ಸರ್ಕಾರಕ್ಕೆ ಶುಲ್ಕ ಪಾವತಿಸಿ 4 ಎಕರೆ 12 ಗುಂಟೆ ಜಮೀನು ಮಂಜೂರು ಮಾಡಲಾಗಿದೆ. ಈ ಜಾಗದಲ್ಲಿ ಸಮುದಾಯ ಭವನ ನಿರ್ಮಾಣವಾದರೆ ಜೋಗಿ ಸಮುದಾಯದ ಮದುವೆ ಹಾಗೂ ಇತರ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗಲಿದೆ.
ಇದನ್ನೂ ಓದಿ: ಎಸ್ಐಆರ್ ವಿರುದ್ಧ ಸೆ.28ರಂದು ಕಾಂಗ್ರೆಸ್ ಪ್ರತಿಭಟನೆ
ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಹಾಗೂ ಸಾಮಾಜಿಕ ಅಭಿವೃದ್ಧಿಗೆ ನೆರವಾಗುವ ನಿಟ್ಟಿನಲ್ಲಿ ₹3 ಕೋಟಿ ಅನುದಾನ ಮಂಜೂರು ಮಾಡುವಂತೆ ಮನವಿಯಲ್ಲಿ ಕೋರಲಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

