CHITRADURGA NEWS | 29 September 2025
ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಗಾಗಿ ಕರ್ನಾಟಕಕ್ಕೆ ಬಂದಿದ್ದು, ಸೆಪ್ಟಂಬರ್ 30 ರಂದು ಬಂದಿದ್ದರು. ಈ ಹಿನ್ನೆಲೆಯಲ್ಲಿ ಶಿಕಾರಿಪುರದ ಈಸೂರು ಗ್ರಾಮದಲ್ಲಿ ಸಾಂಕೇತಿಕವಾಗಿ ಭಾರತ್ ಜೋಡೋ ಯಾತ್ರೆ ಆರಂಭಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ತಿಳಿಸಿದರು.
ಇದನ್ನೂ ಓದಿ: ಅ.3ರ ಹಿಂದೂ ಮಹಾಗಣಪತಿ ಶೋಭಾಯಾತ್ರೆ | 4 ಲಕ್ಷ ಜನರ ನಿರೀಕ್ಷೆ, ಬಿಗಿ ಭದ್ರತೆ | ಎಸ್ಪಿ ಕುಶಾಲ್ ಚೌಕ್ಸೆ
ದೇಶದಲ್ಲಿ ಸಂವಿಧಾನ ಬಾಹಿರವಾಗಿ ನಡೆದುಕೊಳ್ಳುತ್ತಿರುವ ಚುನಾವಣಾ ಆಯೋಗದ ವಿರುದ್ಧ ಜಾಗೃತಿ ಮೂಡಿಸಲಾಗುವುದು. ಹಬ್ಬದ ನಂತರದ ದಿನಗಳಲ್ಲಿ ರಾಜ್ಯದ 69 ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ನಡೆಸಲಾಗುತ್ತದೆ ಎಂದರು.
ಡಿ.ಕೆ.ಶಿವಕುಮಾರ್ ಆಸ್ತಿ ಹೆಚ್ಚಾಗಿರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ವಿಚಾರವನ್ನು ಚಾರ್ಟೆಡ್ ಅಕೌಂಟೆಂಟ್ ಅಥವಾ ಐಟಿಯವರು ಲೆಕ್ಕ ಹಾಕಬೇಕು. ಕುಮಾರಸ್ವಾಮಿ ಚಾರ್ಟೆಡ್ ಅಕೌಂಟೆಂಟ್ ಅಲ್ಲವಲ್ಲ ಎಂದರು.
ಗ್ಯಾರೆಂಟಿಗೆ ವಾರೆಂಟಿ ಮುಗಿದಿದೆ ಎಂಬ ಜೆಡಿಎಸ್ ಹೇಳಿಕೆಗೆ ಪ್ರತಿಕ್ರಿಯಿಸಿ, ಆ ಪಕ್ಷಕ್ಕೆ ವಾರೆಂಟಿ ಇದೆಯಾ ಎಂದು ಪ್ರಶ್ನಿಸಿದ ಹರಿಪ್ರಸಾದ್, ನಾವು ಜನರು ಸ್ವಾಭಿಮಾನದಿಂದ ಬದುಕಲಿ ಎಂದು ಗ್ಯಾರೆಂಟಿ ಕೊಟ್ಟಿದ್ದೇವೆ. ಧೈರ್ಯ ಇದ್ದರೆ ಗ್ಯಾರೆಂಟಿ ಬಂದ್ ಮಾಡಲು ಹೇಳಲಿ ಎಂದು ಸವಾಲು ಹಾಕಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕುರಿತ ಪ್ರಶ್ನೆಗೆ, ಹಿರಿಯೂರು ಉಪಚುನಾವಣೆ ನಂತರ ಈ ಬಗ್ಗೆ ನಿರ್ಧರಿಸಲಾಗುವುದು. ಅಲ್ಲೀವರೆಗೆ ಎಂ.ಕೆ.ತಾಜ್‌ಪೀರ್ ಅವರೇ ಕ್ಯಾಪ್ಟನ್ ಎಂದು ಹೇಳಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

