CHITRADURGA NEWS | 01 October 2026
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಲಾರಿಗೆ ರಾಜಹಂಸ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗುರುವಾರ ಚಿತ್ರದುರ್ಗ ಹೊರವಲಯದ ನಾಮಕಲ್ ಗ್ಯಾರೇಜ್ ಬಳಿ ನಡೆದಿದೆ.
ಮೃತರನ್ನು ರಾಜಹಂಸ ಬಸ್ ಚಾಲಕ ನಾಗರಾಜ (45) ಎಂದು ಗುರುತಿಸಲಾಗಿದೆ. ಚಿತ್ರದುರ್ಗದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಬಸ್, ನಾಮಕಲ್ ಗ್ಯಾರೇಜ್ ಬಳಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ಕಾಂಗ್ರೆಸ್ನ ಕೀಳುಮಟ್ಟದ ರಾಜಕೀಯಕ್ಕೆ ಜನರೇ ಉತ್ತರ ನೀಡಲಿದ್ದಾರೆ | ಬಿ.ವೈ.ವಿಜಯೇಂದ್ರ
ಘಟನೆಯಲ್ಲಿ ಬಸ್ಸಿನಲ್ಲಿದ್ದ 12 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಮಾಹಿತಿ ತಿಳಿದು ಬಡಾವಣೆ ಠಾಣೆಯ ಪಿಎಸ್ಐ ಸಚಿನ್ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

