CHITRADURGA NEWS | 04 OCTOBER 2026
ಚಿತ್ರದುರ್ಗ: ಶಾಲಾ ಶಿಕ್ಷಣ ಇಲಾಖೆಯು ಆಯೋಜಿಸಿದ್ದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಚಿತ್ರದುರ್ಗ ತಾಲ್ಲೂಕಿನ ಗೂಳಯ್ಯನಹಟ್ಟಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಒಟ್ಟು 12 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಅದ್ದೂರಿ ಶೊಭಾಯಾತ್ರೆ
ಕ್ರೀಡಾಕೂಟದ 14 ವರ್ಷದೊಳಗಿನವರ ವಿಭಾಗದಲ್ಲಿ ಈ ಶಾಲೆಯ ವಿದ್ಯಾರ್ಥಿಗಳು 4×100 ಮೀ. ರಿಲೇ ಹಾಗೂ 80 ಮೀ. ಹರ್ಡಲ್ಸ್ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಜೊತೆಗೆ 100 ಮೀ. ಮತ್ತು 200 ಮೀ. ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಅಂತೆಯೇ 16 ವರ್ಷದೊಳಗಿನವರ ವಿಭಾಗದಲ್ಲಿ 4×100 ಮೀ. ಹಾಗೂ 4×400 ಮೀ. ರಿಲೇ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ: ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಈ ಅತ್ಯುತ್ತಮ ಸಾಧನೆಗೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ್, ಶಾಲೆಯ ಪ್ರಾಚಾರ್ಯ ಎನ್.ಮಂಜುನಾಥರೆಡ್ಡಿ, ದೈಹಿಕ ಶಿಕ್ಷಣ ಶಿಕ್ಷಕ ಚಿನ್ನಯ್ಯ ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

