CHITRADURGA NEWS | 04 October 2026
ಚಿತ್ರದುರ್ಗ: ಚಿತ್ರದುರ್ಗ ನಗರದ ವಿವಿಧ ಹೋಟೆಲ್ ಹಾಗೂ ಜ್ಯೂಸ್ ಅಂಗಡಿಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳ ತಂಡವು ಭಾನುವಾರ ದಿಢೀರ್ ದಾಳಿ ನಡೆಸಿ, ಆಹಾರದ ಗುಣಮಟ್ಟ ಹಾಗೂ ನೈರ್ಮಲ್ಯ ಪರಿಶೀಲಿಸಿತು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಬರದ ತೀವ್ರತೆ ಕಣ್ಣಾರೆ ಕಂಡ ಕೇಂದ್ರ ತಂಡ
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಜಿಲ್ಲಾ ಅಂಕಿತ ಅಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಪರಿಶೀಲನೆ ನಡೆಸಿತು.
ಚಿತ್ರದುರ್ಗ ನಗರದ ವೆಂಕಟೇಶ್ವರ ವೆಜ್ ಮತ್ತು ನಾನ್ ವೆಜ್ ಹೋಟೆಲ್, ರೆಡ್ಡಿ ನಾಟಿ ಸ್ಟೈಲ್ ನಾನ್ ವೆಜ್ ಮಿಲ್ಟ್ರಿ ಹೋಟೆಲ್ ಹಾಗೂ ಇಮ್ರಾನ್ ಉಲ್ಲಾ ಫ್ರೈಟ್ ಜ್ಯೂಸ್ ಅಂಗಡಿಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ಅಡುಗೆ ಮನೆಯ ಸ್ವಚ್ಛತೆ, ಸಿದ್ಧಪಡಿಸಿದ ಆಹಾರದ ಶುಚಿತ್ವ ಹಾಗೂ ಸುರಕ್ಷತೆ ಪರಿಶೀಲಿಸಿದರು.
ಆಹಾರ ತಯಾರಿಕೆಗೆ ಬಳಸಲಾಗುವ ಅಡುಗೆ ಎಣ್ಣೆಯ ತಪಾಸಣೆ ನಡೆಸಿದ್ದಲ್ಲದೆ, ಮಸಾಲೆ ಪದಾರ್ಥಗಳ ಗುಣಮಟ್ಟವನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಯಿತು. ಪ್ರತಿಯೊಂದು ಮಳಿಗೆಯ ಬಳಿ ವ್ಯಾಪಾರ ಪರವಾನಗಿ ಪತ್ರವಿದೆಯೇ ಎಂಬುದನ್ನೂ ಪರಿಶೀಲಿಸಲಾಯಿತು.
ಇದನ್ನೂ ಓದಿ: ಹಿಂದುಳಿದ ವರ್ಗಗಳ ನಿಗಮಗಳ ಸಾಲಸೌಲಭ್ಯಕ್ಕೆ ಅರ್ಜಿ | ಅ.15ರವರೆಗೆ ವಿಸ್ತರಣೆ
ಈ ದಿಢೀರ್ ಕಾರ್ಯಾಚರಣೆಯ ವೇಳೆಯಲ್ಲಿ ಚಿತ್ರದುರ್ಗ ತಾಲ್ಲೂಕಿನ ಆಹಾರ ಸುರಕ್ಷತಾ ಅಧಿಕಾರಿ ಡಾ. ಬಿ.ವಿ.ಗಿರೀಶ್, ಚಳ್ಳಕೆರೆ ತಾಲ್ಲೂಕಿನ ಆಹಾರ ಸುರಕ್ಷತಾ ಅಧಿಕಾರಿ ಡಾ. ಎನ್.ಕಾಶಿ ಹಾಗೂ ಹಿರಿಯೂರು ತಾಲ್ಲೂಕಿನ ಆಹಾರ ಸುರಕ್ಷತಾ ಅಧಿಕಾರಿ ಎಂ.ಜಿ. ನಾಗೇಶ್ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

