CHITRADURGA NEWS | 04 October 2026
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯಲ್ಲಿರುವ ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ 9 ಮತ್ತು 11ನೇ ತರಗತಿಗಳ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಹೋಟೆಲ್ಗಳಲ್ಲಿ ನೈರ್ಮಲ್ಯ ಪರಿಶೀಲನೆ | ಅಧಿಕಾರಿಗಳ ದಿಢೀರ್ ದಾಳಿ
ನವೋದಯ ವಿದ್ಯಾಲಯಕ್ಕೆ ‘ಲ್ಯಾಟರಲ್ ಎಂಟ್ರಿ ಸೆಲೆಕ್ಷನ್ ಟೆಸ್ಟ್ (LEST) – 2027′ ರ ಆನ್ಲೈನ್ ನೋಂದಣಿ ಪ್ರಕ್ರಿಯೆಯು ಸೆಪ್ಟೆಂಬರ್ 1 ರಿಂದ ಆರಂಭವಾಗಿತ್ತು. ಇದೀಗ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ವಿಸ್ತರಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಜಾಲತಾಣದ ಲಿಂಕ್ಗಳಿಗೆ ಭೇಟಿ ನೀಡುವ ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
9ನೇ ತರಗತಿ ಪ್ರವೇಶಕ್ಕಾಗಿ https://cbseitms.nic.in/2026/nvsix_9 ಹಾಗೂ 11ನೇ ತರಗತಿ ಪ್ರವೇಶಕ್ಕಾಗಿ https://cbseitms.nic.in/2026/nvsxi_11 ಲಿಂಕ್ ಬಳಸಬಹುದಾಗಿದೆ ಎಂದು ಉಡುವಳ್ಳಿಯ ಪಿಎಂ ಶ್ರೀ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

