By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Yogish Sahyadri
    ಪದವೀಧರರಿಗಾಗಿ ಯುವಜಯ ಫಸ್ಟ್ ಜಾಬ್-2026 ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
    22 seconds ago
    ಮುಂಬರುವ ಚುನಾವಣೆಯಲ್ಲಿ ರಾಜ್ಯ–ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ | ಆರ್.ಅಶೋಕ್ ವಿಶ್ವಾಸ
    47 minutes ago
    ಪದವೀಧರ ಶಿಕ್ಷಕರ ಸಂಘ | ಸುಂದರ ರಾಜ್ ಅವಿರೋಧ ಆಯ್ಕೆ
    2 hours ago
    Walnuts
    ಯಾವುದೇ ಕಾಯಿಲೆ ಇರಲ್ಲಿ ಈ ಬೀಜ ತಿಂದರೆ ಸಾಕು, ಬೇಗ ಚೇತರಿಸಿಕೊಳ್ಳಬಹುದಂತೆ
    12 hours ago
    ಮಹಿಳಾ ಪತ್ರಿಕೋದ್ಯಮ ಪದವೀಧರರಿಗೆ ಇಂಟರ್ನ್‌ಶಿಪ್ ಅವಕಾಶ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    6 days ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    13 hours ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    4 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 07 | ವ್ಯವಹಾರಗಳಲ್ಲಿ ಹೂಡಿಕೆ, ಅರೋಗ್ಯದಲ್ಲಿ ಎಚ್ಚರ ವಹಿಸಿ
    13 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 06 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 05 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಶುಭವಾರ್ತೆಗಳು
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 04 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 03 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯೊಂದಿಗೆ ಅನಿರೀಕ್ಷಿತ ವಿವಾದಗಳು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 07 | ರಾಗಿ ರೇಟ್ ಎಷ್ಟಿದೆ?
    3 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 06 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 05 | ಶೇಂಗಾ, ರಾಗಿ, ಮೆಕ್ಕೆಜೋಳ ರೇಟ್….
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    1 week ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    4 days ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    13 hours ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • Life Style
    Life StyleShow More
    Vessel
    ಯಾವ ಪಾತ್ರೆಯಲ್ಲಿ ತಿನ್ನುವುದು ನಿಮ್ಮ ದೇಹಕ್ಕೆ ಹೆಚ್ಚು ಪ್ರಯೋಜನಕಾರಿ ತಿಳಿಯಿರಿ
    13 hours ago
    papaya
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯ ತಿನ್ನುವುದರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ?
    1 day ago
    wake up in the morning
    ಬೆಳಿಗ್ಗೆ ಎದ್ದಾಗ ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯ ಹಾಳಾಗುತ್ತದೆಯಂತೆ
    2 days ago
    Banana and orange
    ಬಾಳೆಹಣ್ಣು ಮತ್ತು ಕಿತ್ತಳೆ, ಬಿಪಿ ನಿಯಂತ್ರಿಸಲು ಯಾವುದು ಉತ್ತಮ?
    3 days ago
    Parijata
    ಪಾರಿಜಾತ ಕಷಾಯ ನಿಮ್ಮ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿಯೇ? 
    3 days ago
Reading: ಮುಂಬರುವ ಚುನಾವಣೆಯಲ್ಲಿ ರಾಜ್ಯ–ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ | ಆರ್.ಅಶೋಕ್ ವಿಶ್ವಾಸ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುಂಬರುವ ಚುನಾವಣೆಯಲ್ಲಿ ರಾಜ್ಯ–ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ | ಆರ್.ಅಶೋಕ್ ವಿಶ್ವಾಸ

News Desk Chitradurga News
Last updated: 7 October 2026 19:28
News Desk Chitradurga News
47 minutes ago
Share
SHARE

CHITRADURGA NEWS | 07 October 2026

ಚಿತ್ರದುರ್ಗ: ದೇಶದ ಹೊರಗಿನ ಭದ್ರತೆ ಸುಭದ್ರವಾಗಿದ್ದರೂ, ದೇಶದೊಳಗಿನ ಸಾಂವಿಧಾನಿಕ ಸಂಸ್ಥೆಗಳಿಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು.

ಇದನ್ನೂ ಓದಿ: ಪದವೀಧರ ಶಿಕ್ಷಕರ ಸಂಘ | ಸುಂದರ ರಾಜ್ ಅವಿರೋಧ ಆಯ್ಕೆ

ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಬುಧವಾರ ಬಿಜೆಪಿ ವತಿಯಿಂದ ಆಯೋಜಿಸಿದ್ದ ‘ಸೇವಾ ಜ್ಯೋತಿ ಯಾತ್ರೆ’ ಹಾಗೂ ‘ವಿಕಸಿತ ಭಾರತ ಸಂಕಲ್ಪ ಸಭೆ’ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಗೃಹ ಸಚಿವರ ನೇತೃತ್ವದಲ್ಲಿ ದೇಶದಲ್ಲಿ ನಕ್ಸಲಿಸಂ ಹಾಗೂ ಭಯೋತ್ಪಾದನಾ ಚಟುವಟಿಕೆಗಳನ್ನು ನಿಯಂತ್ರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಬಲಿಷ್ಠ ಸ್ಥಾನ ಪಡೆದುಕೊಂಡಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದು ಹಾಗೂ ತ್ರಿವಳಿ ತಲಾಕ್ ನಿಷೇಧ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ ಎಂದು ಹೇಳಿದರು.

ಸಿಬಿಐ, ಈಡಿ, ಚುನಾವಣಾ ಆಯೋಗ ಹಾಗೂ ನ್ಯಾಯಾಂಗದಂತಹ ಸ್ವಾಯತ್ತ ಸಂಸ್ಥೆಗಳ ಬಗ್ಗೆ ಕಾಂಗ್ರೆಸ್ ಅಪನಂಬಿಕೆ ಮೂಡಿಸುತ್ತಿದೆ ಎಂದು ಆರೋಪಿಸಿದ ಅವರು, ಎಸ್‌ಐಆರ್‌ ಕುರಿತು ಕಾಂಗ್ರೆಸ್ ಸುಳ್ಳು ವದಂತಿ ಹರಡುತ್ತಿದೆ ಎಂದರು. ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವುದಕ್ಕೆ ಮತದಾರರ ಸ್ಥಳಾಂತರ ಸೇರಿದಂತೆ ಹಲವು ಕಾರಣಗಳಿವೆ ಎಂದು ಹೇಳಿದರು.

ಬೆಲೆ ಏರಿಕೆಯಿಂದ ಜನರಿಗೆ ಹೊರೆ

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಜನರು ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ವಿದ್ಯುತ್, ಹಾಲು ಹಾಗೂ ಬಸ್ ದರಗಳನ್ನು ಹೆಚ್ಚಿಸಲಾಗಿದೆ. ರೈತರ ಹಿತದೃಷ್ಟಿಯಿಂದ ಹಾಲಿನ ದರ ಹೆಚ್ಚಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದ್ದರೂ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಪ್ರತಿ ಲೀಟರ್‌ಗೆ ₹3 ಹೆಚ್ಚುವರಿ ಸಬ್ಸಿಡಿ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 07 | ರಾಗಿ ರೇಟ್ ಎಷ್ಟಿದೆ?

ಹಾಲು, ಬಸ್ ದರ, ಮನೆ ತೆರಿಗೆ ಹಾಗೂ ತುಪ್ಪದ ಮೇಲಿನ ತೆರಿಗೆ ಸೇರಿದಂತೆ ವಿವಿಧ ಮೂಲಗಳಿಂದ ಪ್ರತಿಯೊಂದು ಕುಟುಂಬದಿಂದ ಅಂದಾಜು ₹6 ಸಾವಿರ ಸಂಗ್ರಹಿಸಲಾಗುತ್ತಿದೆ. ಆದರೆ ಮಹಿಳೆಯರಿಗೆ ₹2 ಸಾವಿರ ನೀಡಲಾಗುತ್ತಿದ್ದು, ಉಳಿದ ಹಣ ದುರುಪಯೋಗವಾಗುತ್ತಿದೆ ಎಂದು ಆರೋಪಿಸಿದರು. ಬೆಲೆ ಏರಿಕೆ ಜನರ ಹಿತಕ್ಕಾಗಿ ಅಲ್ಲ ಎಂದು ದೂರಿದರು.

ಚುನಾವಣಾ ಆಯೋಗದ ವಿರುದ್ಧದ ಆರೋಪಗಳನ್ನು ಬೀದಿಯಲ್ಲಿ ಪ್ರತಿಭಟಿಸುವ ಬದಲು ಸಂಸತ್ತಿನಲ್ಲಿ ನಿಯಮಾನುಸಾರ ಚರ್ಚಿಸಬೇಕು. ಚುನಾವಣಾ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಲು ಸಂವಿಧಾನಾತ್ಮಕ ಪ್ರಕ್ರಿಯೆ ಅನುಸರಿಸಬೇಕಾಗುತ್ತದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಸ್ವಾರ್ಥವಿಲ್ಲದೆ ದೇಶ ಸೇವೆ ಮಾಡುತ್ತಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಹಾಗೂ ಎಲ್.ಕೆ. ಅಡ್ವಾಣಿ ಅವರಂತಹ ನಾಯಕರ ನಿಸ್ವಾರ್ಥ ಸೇವೆಯ ಪರಂಪರೆಯನ್ನು ಬಿಜೆಪಿ ಮುಂದುವರಿಸುತ್ತಿದೆ ಎಂದರು.

ಇದನ್ನೂ ಓದಿ: ಮಹಿಳಾ ಪತ್ರಿಕೋದ್ಯಮ ಪದವೀಧರರಿಗೆ ಇಂಟರ್ನ್‌ಶಿಪ್ ಅವಕಾಶ

ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಬಲವಾಗಿದ್ದು, ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ಎನ್‌ಡಿಎ ಮೈತ್ರಿಕೂಟದಡಿ ಒಗ್ಗಟ್ಟಿನಿಂದ ಎದುರಿಸಲಾಗುವುದು. ರಾಜ್ಯದಲ್ಲಿನ ಆಡಳಿತದ ವಿರುದ್ಧ ಜನರು ಹಾಗೂ ಗುತ್ತಿಗೆದಾರರಲ್ಲಿ ಅಸಮಾಧಾನವಿದ್ದು, ಮುಂಬರುವ ಚುನಾವಣೆಯಲ್ಲಿ ರಾಜ್ಯ ಹಾಗೂ ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದು ಆರ್.ಅಶೋಕ್ ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ದಾವಣಗೆರೆ ವಿಭಾಗ ಸಹಪ್ರಭಾರಿ ಎ.ಮುರಳಿ, ಮುಖಂಡರಾದ ರಾಜಣ್ಣ, ಮಾಧ್ಯಮ ವಕ್ತಾರ ನಾಗರಾಜ್ ಬೇದ್ರೆ, ಪಾಪನಾಯ್ಕ್, ಅನಿಲ್ ಕುಮಾರ್, ಡಾ.ಮಂಜುನಾಥ್ ಸೇರಿದಂತೆ ಬಿಜೆಪಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇದನ್ನೂ ಓದಿ: ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ್ ಸ್ವಾಗತಿಸಿದರು. ಮಾಧುರಿ ಗಿರೀಶ್ ಪ್ರತಿಜ್ಞಾ ವಿಧಿ ಬೋಧಿಸಿದರು. ವೆಂಕಟೇಶ್ ಯಾದವ್ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣವನ್ನು ವರ್ಚುವಲ್ ಮೂಲಕ ವೀಕ್ಷಿಸಲಾಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಬಿಜೆಪಿ, ಆರ್.ಅಶೋಕ್, ಎನ್ ಡಿಎ, ಚುನಾವಣೆ, Chitradurga, Chitradurga News, BJP, R. Ashok, NDA, Elections,
Share This Article
Facebook Email Print
Previous Article ಪದವೀಧರ ಶಿಕ್ಷಕರ ಸಂಘ | ಸುಂದರ ರಾಜ್ ಅವಿರೋಧ ಆಯ್ಕೆ
Next Article Yogish Sahyadri ಪದವೀಧರರಿಗಾಗಿ ಯುವಜಯ ಫಸ್ಟ್ ಜಾಬ್-2026 ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
Leave a Comment

Leave a Reply Cancel reply

Your email address will not be published. Required fields are marked *

Yogish Sahyadri
ಪದವೀಧರರಿಗಾಗಿ ಯುವಜಯ ಫಸ್ಟ್ ಜಾಬ್-2026 ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
ಮುಖ್ಯ ಸುದ್ದಿ
ಪದವೀಧರ ಶಿಕ್ಷಕರ ಸಂಘ | ಸುಂದರ ರಾಜ್ ಅವಿರೋಧ ಆಯ್ಕೆ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಅಕ್ಟೋಬರ್ 07 | ರಾಗಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Walnuts
ಯಾವುದೇ ಕಾಯಿಲೆ ಇರಲ್ಲಿ ಈ ಬೀಜ ತಿಂದರೆ ಸಾಕು, ಬೇಗ ಚೇತರಿಸಿಕೊಳ್ಳಬಹುದಂತೆ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up