CHITRADURGA NEWS | 13 OCTOBER 2026
ಚಿತ್ರದುರ್ಗ: ರಾಷ್ಟ್ರಮಟ್ಟದ ಇನ್‌ಸ್ಪೈರ್ ಅವಾರ್ಡ್ ವಸ್ತು ಪ್ರದರ್ಶನ ಹಾಗೂ ಮಾದರಿ ಸ್ಪರ್ಧೆಗೆ ಚಿತ್ರದುರ್ಗ ಜಿಲ್ಲೆಯ ಐವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ನವದೆಹಲಿಯಲ್ಲಿ ಅ. 12ರಿಂದ 14ರವರೆಗೆ ನಡೆಯುವ ಸ್ಪರ್ಧೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.
ಇದನ್ನೂ ಓದಿ: ಕೃತಕ ಬುದ್ಧಿಮತ್ತೆ ಬಳಕೆಯಲ್ಲಿ ಎಚ್ಚರಿಕೆ ಅಗತ್ಯ | ಎಸ್.ಬಿ. ಪಾಟೀಲ್
ಹೊಸದುರ್ಗ ತಾಲ್ಲೂಕಿನ ಕಬ್ಬಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹರೀಶ್, ಆರ್. ಸಿಂಚನ, ಹೆಚ್. ಅನುಷಾ, ಚಿತ್ರದುರ್ಗ ನಗರದ ವಿದ್ಯಾವಿಕಾಸ ವಿದ್ಯಾಸಂಸ್ಥೆಯ ಎಸ್. ಹರ್ಷವರ್ಧನ ಹಾಗೂ ಚಳ್ಳಕೆರೆ ನಗರದ ಮಹಾತ್ಮ ಗಾಂಧಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಬಿ.ಎಂ. ಶ್ರೇಯಸ್ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ ಎಂದು ನೋಡಲ್ ಅಧಿಕಾರಿ ಟಿ. ರಾಮಣ್ಣ ತಿಳಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ, ಸೃಜನಶೀಲತೆ ಹಾಗೂ ನವೀನ ಆವಿಷ್ಕಾರಗಳ ಆಸಕ್ತಿಯನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಿರುವ ಈ ಸ್ಪರ್ಧೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ತಮ್ಮ ಮಾದರಿಗಳನ್ನು ಪ್ರದರ್ಶಿಸಲಿದ್ದಾರೆ.
ಕಬ್ಬಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಾರ್ಗದರ್ಶಿ ಶಿಕ್ಷಕ ಆರ್. ನಾಗರಾಜು ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.
ಇದನ್ನೂ ಓದಿ: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಆರಂಭ | ಕ್ವಿಂಟಾಲ್‌ಗೆ ₹8,343 ನಿಗದಿ
ಜಿಲ್ಲೆಯ ಐವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದು ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಯಾಗಿದ್ದು, ವಿದ್ಯಾರ್ಥಿಗಳ ಭಾಗವಹಿಸುವಿಕೆ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಡಯಟ್ ಪ್ರಾಚಾರ್ಯ ಎಸ್. ನಾಗಭೂಷಣ್ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

