CHITRADURGA NEWS | 15 OCTOBER 2026
ಚಿತ್ರದುರ್ಗ: ನಾಡಿನ ಇತಿಹಾಸ, ಕಲೆ ಹಾಗೂ ಸಾಂಸ್ಕøತಿಕ ವೈಭವ ಸಾರುವ ನಿಟ್ಟಿನಲ್ಲಿ ಬರುವ ನವೆಂಬರ್ 01ರಂದು ಕನ್ನಡ ರಾಜ್ಯೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ರಮ್ಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸುವ ಹಿನ್ನಲೆಯಲ್ಲಿ ಜರುಗಿದ ಪೂರ್ವಭಾವಿ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಇದಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಸ್ವಾಗತ, ಮೆರವಣಿಗೆ, ಸಾಂಸ್ಕøತಿಕ ಕಾರ್ಯಕ್ರಮಗಳ ಹಾಗೂ ವೇದಿಕೆ ಸಮಿತಿಗಳನ್ನು ರಚಿಸಲಾಗಿದೆ. ಇದರನ್ವಯ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಯೋಜಿಸಲಾಗುವುದು. ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 7.30 ಗಂಟೆಗೆ ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಬಳಿಕ ಬೆಳಿಗ್ಗೆ 09 ಗಂಟೆಗೆ ಪೊಲೀಸ್ ಕವಾಯತು ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಗುವುದು ಎಂದರು.
ಇದನ್ನೂ ಓದಿ: ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ನಗರಸಭೆ ಕಾರ್ಯಾಚರಣೆ | 31 ಜನರಿಗೆ ದಂಡ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ನೇತೃತ್ವದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳ ಸಮಿತಿ ರಚನೆ ಮಾಡಲಾಗಿದ್ದು, ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆಹಾರ ಇಲಾಖೆ ವತಿಯಿಂದ ಮಕ್ಕಳಿಗೆ ಸಿಹಿವಿತರಣೆಗೆ ಕ್ರಮ ಕೈಗೊಳ್ಳಬೇಕು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ, ಸೇವೆ ಹಾಗೂ ವಯೋಮಿತಿಯನ್ನೂ ಪರಿಗಣಿಸಿ ಸಮಾಜಕ್ಕೆ ಕೊಡುಗೆ ನೀಡಿದ ಜಿಲ್ಲೆಯ ಮಹನೀಯರನ್ನು ಗೌರವ ಸನ್ಮಾನ ಮಾಡಲು ಉಪವಿಭಾಗಾಧಿಕಾರಿಗಳ ನೇತೃತ್ವದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ರಚಿಸಲಾಗಿದ್ದು, ಸಾಧಕರ ಆಯ್ಕೆ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಎಲ್ಲಾ ಸಮಿತಿಗಳು ಅಚ್ಚುಕಟ್ಟಾಗಿ ನಿರ್ವಹಿಸಿ, ರಾಜ್ಯೋತ್ಸವವನ್ನು ಆಚರಣೆಯನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಇದನ್ನೂ ಓದಿ: ನೇರ ರೈಲು ಮಾರ್ಗದ ಸುರಕ್ಷತೆ ಪರಿಶೀಲನೆ | 15 ಕಿ.ಮೀ ಮಾರ್ಗ ಸಂಚಾರಕ್ಕೆ ಸಿದ್ಧ
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಡಿಎಆರ್ ಡಿವೈಎಸ್ಪಿ ಶ್ರೀನಿವಾಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಎಂ.ಜೆ.ಮಹೇಶ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

