CHITRADURGA NEWS | 16 OCTOBER 2026
ಚಿತ್ರದುರ್ಗ: ಡೆಂಗೀ ಹಾಗೂ ಚಿಕೂನ್ಗುನ್ಯ ನಿಯಂತ್ರಣಕ್ಕೆ ಸಾರ್ವಜನಿಕರ ಸಹಭಾಗಿತ್ವ ಹಾಗೂ ಸಹಕಾರ ಅತ್ಯಗತ್ಯವಾಗಿದೆ.
ಇದನ್ನೂ ಓದಿ: ವಿಬಿ ರಾಮ್ ಜಿ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ | ಕೂಲಿಕಾರರಿಗೆ ಸಕಾಲದಲ್ಲಿ ವೇತನ ಪಾವತಿಸಲು ಸೂಚನೆ
ಡೆಂಗೀ ಹಾಗೂ ಚಿಕೂನ್ಗುನ್ಯಾ ಜ್ವರಗಳು ಸೋಂಕು ಹೊಂದಿದ ಈಡೀಸ್ ಈಜಿಪ್ಟ್ ಎಂಬ ಸೊಳ್ಳೆಯ ಕಡಿತದಿಂದ ಬರುತ್ತವೆ. ಈ ಸೊಳ್ಳೆಗಳು ನಿಂತ ಸ್ವಚ್ಛ ನೀರಿನಲ್ಲಿ ಹುಟ್ಟುತ್ತವೆ ಮತ್ತು ಸಾಧಾರಣವಾಗಿ ಹಗಲಿನಲ್ಲಿ ಕಚ್ಚುತ್ತವೆ. ಈಡೀಸ್ ಈಜಿಪ್ಟ್ ಸೊಳ್ಳೆಯು ತನ್ನ ಜೀವನ ಚಕ್ರವನ್ನು ಪೂರ್ಣಗೊಳಿಸಲು ಸುಮಾರು 8 ರಿಂದ 10 ದಿನಗಳನ್ನು ತೆಗೆದುಕೊಳ್ಳುತ್ತದೆ. ಇದರ ಮೊದಲ 3 ಹಂತಗಳಾದ ಮೊಟ್ಟೆ, ಲಾರ್ವ ಮತ್ತು ಪ್ಯೂಪಾ ಪ್ರಕ್ರಿಯೆಯು ನೀರಿನಲ್ಲಿ ನಡೆಯುತ್ತದೆ.
ಹಠಾತ್ತನೆ ಬರುವ ಅಧಿಕ ಜ್ವರ, ತೀವ್ರ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರತರ ನೋವು, ಮೈ ನೋವು, ಕೀಲುಗಳಲ್ಲಿ ನೋವು, ವಾಕರಿಕೆ ಮತ್ತು ವಾಂತಿ ಈ ರೋಗದ ಪ್ರಮುಖ ಲಕ್ಷಣಗಳಾಗಿವೆ. ಸಿಮೆಂಟ್ ತೊಟ್ಟಿಗಳು, ಪ್ಲಾಸ್ಟಿಕ್ ತೊಟ್ಟಿಗಳು, ಬಕೆಟ್ಗಳು, ಡ್ರಂಗಳು, ಬ್ಯಾರಲ್ಗಳು, ಖಾಲಿ ಡಬ್ಬಗಳು, ಏರ್ಕೂಲರ್ಗಳು, ಗಡಿಗೆ, ಗಡಿಗೆ ತುಂಡುಗಳು, ತೆಂಗಿನ ಚಿಪ್ಪುಗಳು, ಹಳೆಯ ಹಾಗೂ ಒಡೆದ ಟೈರ್ಗಳು ಮತ್ತು ಹೂವಿನ ಕುಂಡಗಳ ತಟ್ಟೆಗಳು ಮುಂತಾದ ಸ್ವಚ್ಛ ನೀರು ನಿಲ್ಲುವ ಸ್ಥಳಗಳಲ್ಲಿ ಈ ಸೊಳ್ಳೆಗಳು ಹೇರಳವಾಗಿ ಉತ್ಪತ್ತಿಯಾಗುತ್ತವೆ.
ಎಲ್ಲಾ ನೀರಿನ ತೊಟ್ಟಿಗಳು, ಡ್ರಂ, ಬ್ಯಾರಲ್ಗಳು, ಏರ್ ಕೂಲರ್ ಇತ್ಯಾದಿಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಛಪಡಿಸಿ, ಮತ್ತೆ ಭರ್ತಿ ಮಾಡಿಕೊಳ್ಳುವುದು ಅಥವಾ ಮುಚ್ಚಳದಿಂದ ಮುಚ್ಚುವುದು ಅತ್ಯಗತ್ಯವಾಗಿದೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ನ.1ರಂದು ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆ | ಜಿಲ್ಲಾಧಿಕಾರಿ ಎಸ್.ರಮ್ಯಾ ಸೂಚನೆ
ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸುವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು ಮತ್ತು ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡ ಸೊಳ್ಳೆ ನಿಯಂತ್ರಣ ಕ್ರಮಗಳಿಗೆ ಸಹಕಾರ ನೀಡುವುದು ಅವಶ್ಯ. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಯನ್ನು ಬಳಸುವುದು ಹಾಗೂ ಹಗಲಿನಲ್ಲಿ ಸೊಳ್ಳೆಗಳ ಕಚ್ಚುವಿಕೆಯಿಂದ ದೂರವಿರುವುದು ಉತ್ತಮ.
ರೋಗದ ಲಕ್ಷಣ ಕಂಡೊಡನೆ ಉಚಿತ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

