CHITRADURGA NEWS | 17 OCTOBER 2026
ಚಿತ್ರದುರ್ಗ: ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ನ. 01 ರಂದು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಲಾಗಿದ್ದು, ಅರ್ಹ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಲಿಡ್ಕರ್ ಚರ್ಮ ಉತ್ಪನ್ನಗಳ ಖರೀದಿಗೆ ಶೇ.20ರಷ್ಟು ಹಬ್ಬದ ರಿಯಾಯಿತಿ
ಕ್ರೀಡೆ, ಕೃಷಿ, ಸಮಾಜ ಸೇವೆ, ಶಿಕ್ಷಣ ಮತ್ತು ಸಾಹಿತ್ಯ, ಸಂಗೀತ, ರಂಗಭೂಮಿ, ಜಾನಪದ, ಮಾಧ್ಯಮ ಮತ್ತು ಛಾಯಾಗ್ರಹಣ, ವೈದ್ಯಕೀಯ ಮತ್ತು ಸಂಶೋಧನೆ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಹಾಗೂ ಸಾಧನೆ ಮಾಡಿರುವ ಅರ್ಹ ಸಾಧಕರು, ತಮ್ಮ ಸ್ವ-ವಿವರದೊಂದಿಗೆ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಇದೇ ಅಕ್ಟೋಬರ್ 27ರಂದು ಸಂಜೆ 05 ಗಂಟೆಯ ಒಳಗಾಗಿ ಡಾ.ಬಿ.ಎಂ.ಗುರುನಾಥ, ಸಹಾಯಕ ನಿರ್ದೇಶಕರು ಹಾಗೂ ರಾಜ್ಯೋತ್ಸವ ಸನ್ಮಾನ ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿಗಳು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ತ.ರಾ.ಸು. ರಂಗಮಂದಿರ, ಚಿತ್ರದುರ್ಗ ಇವರಿಗೆ ಕಚೇರಿ ವೇಳೆಯಲ್ಲಿ ಸಲ್ಲಿಸುವಂತೆ ಉಪವಿಭಾಗಾಧಿಕಾರಿ ಹಾಗೂ ರಾಜ್ಯೋತ್ಸವ ಸನ್ಮಾನ ಆಯ್ಕೆ ಸಮಿತಿಯ ಅಧ್ಯಕ್ಷರಾದ ಡಾ.ಕೆ.ಜೆ.ಕಾಂತರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

