CHITRADURGA NEWS | 21 OCTOBER 2026
ಚಿತ್ರದುರ್ಗ: ಜಿಲ್ಲೆಯಲ್ಲಿ ಮೊದಲ ಬಾರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ರಾಜ್ಯೋತ್ಸದ ಅಂಗವಾಗಿ ನವೆಂಬರ್ 15 ಭಾನುವಾರ ರಾಜ್ಯಮಟ್ಟದ ಕವಿಗೋಷ್ಠಿ ಏರ್ಪಡಿಸಲಾಗಿದೆ.
ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ವಾಲ್ಮೀಕಿ ಜಯಂತಿ ಸರಳ ಆಚರಣೆಗೆ ಸೂಚನೆ
ರೋಟರಿ ಬಾಲ ಭವನದಲ್ಲಿ ನಡೆಯುವ ಈ ಕವಿಗೋಷ್ಠಿಗೆ ಕವನಗಳು ಕನ್ನಡ ನಾಡು,ನುಡಿ,ಭಾಷೆ, ಸಂಸ್ಕೃತಿ ವಿಷಯನ್ನು ಹೊಂದಿದ್ದು, ಒಂದು ಪುಟ ಮೀರದಂತಿರಬೇಕು.
ಪ್ರತಿ ಜಿಲ್ಲೆಯಿಂದ ಇಬ್ಬರು ಕವಿಗಳನ್ನು ಆಯ್ಕೆ ಮಾಡಲಾಗುವುದು. ಗೋಷ್ಠಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಂಸನಾ ಪತ್ರ, ಕನ್ನಡ ಶಾಲು, ಸ್ಮರಣಿಕೆ ನೀಡಲಾಗುವುದು. ಆಯ್ದ ಐದು ಜನ ಕವಿಗಳಿಗೆ ವಿಶೇಷ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು.
ಭಾಗವಹಿಸಲು ಇಚ್ಛಿಸುವ ಕವಿಗಳು ತಮ್ಮ ಕವನವನ್ನು ವಾಟ್ಸಪ್ ಅಥವಾ ಇಮೇಲ್ ಮೂಲಕ ಕಳಿಸಬಹುದು. ಕವನಗಳನ್ನು ಕಳಿಸಲು ನವಂಬರ್ 7 ಅಂತಿಮ ದಿನಾಂಕವಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿಗೆ ಚಿತ್ರದುರ್ಗದ ಕೋಲಾಟ ಕಲಾವಿದ ನರಸಪ್ಪ ಆಯ್ಕೆ
ಹೆಚ್ಚಿನ ಮಾಹಿತಿಗೆ ಮೊ. 9449510078, 9972155177, 9972240239, 9449759219, 9538418943 ಸಂಪರ್ಕಿಸಲು ಕೋರಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

