CHITRADURGA NEWS | 29 OCTOBER 2026
ಚಿತ್ರದುರ್ಗ: ಚಿತ್ರದುರ್ಗ ಮೆಡಿಕಲ್ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ (ಸಿ.ಎಂ.ಸಿ.ಆರ್.ಐ) ಕ್ಯಾಂಪಸ್ನಲ್ಲಿರುವ ಸರ್ಕಾರಿ ಬಿ.ಎಸ್ಸಿ. ನರ್ಸಿಂಗ್ ಕಾಲೇಜಿನಲ್ಲಿ 2026-27ನೇ ಸಾಲಿನ ಬಿ.ಎಸ್ಸಿ. ನರ್ಸಿಂಗ್ ಕೋರ್ಸ್ನ ಪ್ರವೇಶಾತಿಗೆ ಕೆಇಎ ವತಿಯಿಂದ ಕೌನ್ಸೆಲಿಂಗ್ ನಡೆಸಿ ನಂತರ ಭರ್ತಿಯಾಗದೆ ಉಳಿದಿರುವ 01 ಸೀಟನ್ನು ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುವುದು.
ಇದನ್ನೂ ಓದಿ: ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ | ಕೆ.ಎಂ.ಸುರೇಶ್ ಭರ್ಜರಿ ಗೆಲುವು
ಕೆಇಎನಲ್ಲಿ ನೋಂದಾಯಿಸಿಕೊಂಡಿರುವ ಮತ್ತು ಸಿಇಟಿ ನೋಂದಣಿ ಸಂಖ್ಯೆ ಹೊಂದಿರುವ ಅರ್ಹ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಪಾರದರ್ಶಕವಾಗಿ ಸರ್ಕಾರದ ಆದೇಶದ ಪ್ರಕಾರ ಪ್ರಾಂಶುಪಾಲರ ಹಂತದಲ್ಲಿ ಸೀಟು ಹಂಚಿಕೆ ಮಾಡಲಾಗುತ್ತದೆ. ಇದಕ್ಕಾಗಿ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು, ನೋಡೆಲ್ ಅಧಿಕಾರಿಗಳು ಹಾಗೂ ಪ್ರಾಂಶುಪಾಲರನ್ನು ಒಳಗೊಂಡ ಸಮಿತಿಯ ಮೂಲಕ ಆಫ್ಲೈನ್ ಕೌನ್ಸೆಲಿಂಗ್ ನಡೆಸಲಾಗುವುದು.
ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 31 ರಂದು ಮಧ್ಯಾಹ್ನ 1 ಗಂಟೆಯೊಳಗೆ ಚಿತ್ರದುರ್ಗ ಸಮೀಪದ ಜಿ.ಆರ್.ಹಳ್ಳಿಯ, ದಾವಣಗೆರೆ ವಿಶ್ವವಿದ್ಯಾಲಯ ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರ ಆವರಣದಲ್ಲಿ ಸರ್ಕಾರಿ ಬಿ.ಎಸ್ಸಿ. ನರ್ಸಿಂಗ್ ಕಾಲೇಜಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಕೌನ್ಸೆಲಿಂಗ್ ನಡೆಸಿ ಮಧ್ಯಾಹ್ನ 1.00 ಗಂಟೆಯ ನಂತರ ಸೀಟು ಹಂಚಿಕೆ ಮಾಡಲಾಗುವುದು.
ಇದನ್ನೂ ಓದಿ: ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಸೀಟು ಹಂಚಿಕೆ ಆಗಿರುವ ಅಭ್ಯರ್ಥಿಗಳು ಅದೇ ದಿನದಂದು ಸಂಜೆ 5.00 ಗಂಟೆಯ ಒಳಗೆ ಕಾಲೇಜಿಗೆ ಭೇಟಿ ನೀಡಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಕೆಲಸದ ಸಮಯದಲ್ಲಿ ನೇರವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ನರ್ಸಿಂಗ್ ಕಾಲೇಜು ಮುಖ್ಯ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

