CHITRADURGA NEWS | 01 NOVEMBER 2026
ಚಿತ್ರದುರ್ಗ: ನಗರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಜನಾಂಗ ಹಾಗೂ ದಿವ್ಯಾಂಗ ವಿಕಲಚೇತನರಿಗೆ 2021-22ನೇ ಸಾಲಿನಿಂದ 2026-27ನೇ ಸಾಲಿನವರೆಗೆ ನಗರಸಭಾ ನಿಧಿ ಅನುದಾನದಡಿ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳು ನಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಹಾಸನಾಂಬೆ ಜಾತ್ರೆಗೆ ಚಿತ್ರದುರ್ಗದಿಂದ ವಿಶೇಷ ಬಸ್ ಸೌಲಭ್ಯ
ವಿದ್ಯಾರ್ಥಿಗಳಿಗೆ ವಿಶೇಷ ಆರ್ಥಿಕ ನೆರವು, ವೃತ್ತಿ ನಿರತ ವಕೀಲರಿಗೆ ಪುಸ್ತಕ ಖರೀದಿಸಲು, ಎಂ.ಬಿ.ಬಿ.ಎಸ್. ಮತ್ತು ಬಿ.ಇ. ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಸಲು ಸಹಾಯಧನ ನೀಡಲಾಗುವುದು. ದಿವ್ಯಾಂಗ ವಿಕಲಚೇತನರಿಗೆ ತ್ರಿಚಕ್ರ ವಾಹನ ಖರೀದಿಸಿ ವಿತರಿಸುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಹಾಗೂ ಅರ್ಹರು ನ.18 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಈ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯೂರು ನಗರಸಭೆಯ ಆಡಳಿತಾಧಿಕಾರಿಗಳು ಹಾಗೂ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

