CHITRADURGA NEWS | 1 NOVEMBER 2026
ಚಿತ್ರದುರ್ಗ: ಚಿತ್ರದುರ್ಗ ಸೇರಿದಂತೆ ನಾಲ್ಕು ಜಿಲ್ಲೆಗಳ ವ್ಯಾಪ್ತಿಗೆ ಒಳಪಡುವ ಭದ್ರಾ ಮೇಲ್ದಂಡೆ ಯೋಜನೆಯನ್ನು ಅನುಷ್ಠಾನಗೊಳಿಸಿ, ಮಧ್ಯ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ನೀರು ತಲುಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಹೇಳಿದರು.
ಇಲ್ಲಿನ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವ ಸಂದೇಶ ನೀಡಿದರು.
ಇದನ್ನೂ ಓದಿ:ಚಿತ್ರದುರ್ಗ ಜಿಲ್ಲೆಯ 35 ಸಾಧಕರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಗೆ ಈಗಾಗಲೇ 3 ಟಿಎಂಸಿ ನೀರು ಹರಿಸಲಾಗಿದ್ದು, ಶೀಘ್ರವೇ ಹೆಚ್ಚುವರಿಯಾಗಿ 1 ಟಿಎಂಸಿ ನೀರು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ತೆಂಗು, ಅಡಿಕೆ ತೋಟಗಳು ಒಣಗಿ ರೈತರು ತೀವ್ರ ಆತಂಕದಲ್ಲಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಹರಿಸಲಾದ 3 ಟಿಎಂಸಿ ನೀರು ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಹಾಗೂ ಚಳ್ಳಕೆರೆ ತಾಲೂಕಿನ ಕೆಲವು ಕೆರೆಗಳನ್ನು ತಲುಪಿದೆ. ಆದರೆ ಚಳ್ಳಕೆರೆ ಹಾಗೂ ಹಿರಿಯೂರು ತಾಲೂಕಿನ ಕೊನೆಯ ಭಾಗದ ಕೆರೆಗಳಿಗೆ ಇನ್ನೂ ನೀರು ತಲುಪಬೇಕಿದೆ. ಈ ಹಿನ್ನಲೆಯಲ್ಲಿ ತಕ್ಷಣವೇ 1 ಟಿಎಂಸಿ ಹೆಚ್ಚುವರಿ ನೀರು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿ, ಅನುಮೋದನೆ ಪಡೆಯಲಾಗಿದೆ. ಶೀಘ್ರವೇ ನೀರು ಹರಿಯುವ ವಿಶ್ವಾಸವಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
ಬೆಳೆದು ನಿಂತಿರುವ ತೋಟಗಳನ್ನು ಉಳಿಸಿಕೊಳ್ಳುವುದು ನಮಗೆ ಸವಾಲಾಗಿದೆ. ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ರೈತ ಮುಖಂಡರು ನಮ್ಮ ಜಿಲ್ಲೆಯ ಕುಡಿಯುವ ನೀರಿನ ಅಭಾವದ ಭೀಕರ ಪರಿಸ್ಥಿತಿ ಅರ್ಥೈಸಿಕೊಳ್ಳಬೇಕು ಸಚಿವರು ಮನವಿ ಮಾಡಿದರು.
ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದೊಂದಿಗೆ ಜಿಲ್ಲೆಯ ಮೂಲಸೌಕರ್ಯ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಉದ್ಯೋಗ ಸೃಷ್ಠಿ ಹಾಗೂ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.
ಇದನ್ನೂ ಓದಿ:ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದು, ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಸನ್ನದ್ಧವಾಗಿದೆ. ರಾಜ್ಯದ 220ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈಗಾಗಲೇ ಅಧಿಕಾರಿಗಳ ತಂಡ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದ್ದು, ಕೇಂದ್ರ ಸರ್ಕಾರಕ್ಕೆ ರೂ.7148 ಕೋಟಿ ಪರಿಹಾರಧನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಬರ ಪರಿಹಾರಕ್ಕಾಗಿ ರೂ.227 ಕೋಟಿ ಅನುದಾನ ಕೋರಲಾಗಿದೆ. ಬರಹಿನ್ನಲೆಯಲ್ಲಿ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರು ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಹೇಳಿದರು.

ಪ್ರತಿಯೊಬ್ಬರೂ ಭಾಷಾಭಿಮಾನ ಬೆಳೆಸಿಕೊಳ್ಳಬೇಕು: ಕನ್ನಡ ನಾಡು, ನುಡಿ ಹಾಗೂ ಸಂಸ್ಕøತಿಯನ್ನು ಎತ್ತಿಹಿಡಿಯುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ. ವಿಶಾಲ ಕರ್ನಾಟಕ ಏಕೀಕರಣಗೊಂಡಂತೆ, ಕನ್ನಡಿಗರ ಮನಸ್ಸುಗಳ ಏಕೀಕರಣವೂ ಆಗಬೇಕಿದೆ ಎಂದು ಸಚಿವ ಟಿ.ರಘುಮೂರ್ತಿ ಹೇಳಿದರು.
ಇದನ್ನೂ ಓದಿ:ಚರ್ಮ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯ | ಅರ್ಜಿ ಆಹ್ವಾನ
ನಾಡು-ನುಡಿಯ ಅಭಿಮಾನ ಪ್ರತಿಯೊಬ್ಬರಲ್ಲೂ ಇರಬೇಕು. ವಿದ್ಯಾರ್ಥಿಗಳು ಕನ್ನಡ ಭಾಷೆ ಹಾಗೂ ಸಂಸ್ಕøತಿಯನ್ನು ಮರೆಯಬಾರದು. ಹೆತ್ತ ತಾಯಿ ಮತ್ತು ಮಾತೃ ಭಾಷೆ ಕನ್ನಡ ನಮಗೆ ಎಂದಿಗೂ ಪೂಜನೀಯ. ಕನ್ನಡ ಉಳಿಸಿ, ಬೆಳೆಸಿ, ಪ್ರೀತಿಸುವ ಶಪಥವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದರು.
ಇಡೀ ದೇಶದಲ್ಲಿಯೇ ಹಿಂದಿ ಭಾಷೆಯನ್ನು ಹೊರತುಪಡಿಸಿದರೆ, ಅತಿ ಹೆಚ್ಚು ಎಂಟು ಜ್ಞಾನಪೀಠ ಪ್ರಶಸ್ತಿಗಳು ಒಲಿದು ಬಂದಿರುವುದು ನಮ್ಮ ಹೆಮ್ಮೆಯ ಕನ್ನಡ ಭಾಷೆಗೆ ಮಾತ್ರ. ಇದು ನಮ್ಮ ಸಾಹಿತ್ಯ ಹಾಗೂ ಭಾಷೆಯ ಶ್ರೇಷ್ಠತೆಗೆ ಹಿಡಿದ ಕನ್ನಡಿಯಾಗಿದೆ. ನಾವು ಎಲ್ಲೇ ಇರಲಿ, ನಮ್ಮ ಮಾತೃಭಾಷೆಯಾದ ಕನ್ನಡವನ್ನು ಪ್ರೀತಿಸಬೇಕು ಮತ್ತು ಗೌರವಿಸಬೇಕು ಎಂದರು.
ಇದನ್ನೂ ಓದಿ:ಲ್ಯಾಪ್ಟಾಪ್, ತ್ರಿಚಕ್ರ ವಾಹನ ಖರೀದಿಗೆ ಸಹಾಯಧನ
ಮಕ್ಕಳು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲೇ ಪೂರೈಸುವುದರಿಂದ ಉದ್ಯೋಗ ಹಾಗೂ ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲು ಯಾವುದೇ ಅಡ್ಡಿಯಾಗುವುದಿಲ್ಲ. ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲೇ ವ್ಯಾಸಂಗ ಮಾಡಿ ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಾಧನೆ ಮೆರೆದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸನ್ಮಾನಿಸಿ ಗೌರವಿಸಿದರು.
ಇದನ್ನೂ ಓದಿ:ಹಾಸನಾಂಬೆ ಜಾತ್ರೆಗೆ ಚಿತ್ರದುರ್ಗದಿಂದ ವಿಶೇಷ ಬಸ್ ಸೌಲಭ್ಯ
ಚಿತ್ರದುರ್ಗ ನಗರದ ಸರ್ಕಾರಿ ಕೋಟೆ ಪ್ರೌಢಶಾಲೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳು, ಮಹಾರಾಣಿ ಶಾಲಾ ವಿದ್ಯಾರ್ಥಿಗಳು ಹಾಗೂ ಗಾರ್ಡಿಯನ್ ಏಂಜಲ್ಸ್ ಶಾಲಾ ವಿದ್ಯಾರ್ಥಿಗಳು ಕನ್ನಡ ನಾಡು-ನುಡಿ ಸಂಸ್ಕøತಿ ಹಾಗೂ ಮಹತ್ವ ಸಾರುವಂತಹ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇವಸ್ಥಾನದಿಂದ ಶ್ರೀ ಭುವನೇಶ್ವರಿ ಭಾವಚಿತ್ರ ಹಾಗೂ ಕಲಾತಂಡಗಳು ಹಾಗೂ ಸ್ತಬದ್ಧಚಿತ್ರಗಳೊಂದಿಗೆ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಸಲಾಯಿತು.
ಇದನ್ನೂ ಓದಿ:ಚಿತ್ರದುರ್ಗ ಜಿಲ್ಲೆಯಲ್ಲಿ 216 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕಾರ್ಯಕ್ರಮದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಲ್ಲಾಧಿಕಾರಿ ಎಸ್.ರಮ್ಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ತಹಶೀಲ್ದಾರ್ ಬೀಬೀ ಫಾತೀಮಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

