CHITRADURGA NEWS | 14 November 2026
ಚಿತ್ರದುರ್ಗ: ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಮೃತ ಮಹೋತ್ಸವದ ಅಂಗವಾಗಿ ಚಿತ್ರದುರ್ಗ ತಾಲೂಕಿನ 75 ಸಾಧಕರಿಗೆ ಶಿವಸಂಚಾರ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ತಿಳಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 14 | ಹತ್ತಿ ರೇಟ್ ಎಷ್ಟಿದೆ?
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.22 ಭಾನುವಾರ ಬೆಳಗ್ಗೆ 11 ಗಂಟೆಗೆ ತರಾಸು ರಂಗಮಂದಿರದಲ್ಲಿ ಶಿವಸಂಚಾರ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಚಿತ್ರದುರ್ಗ ತಾಲೂಕಿನ 38 ಗ್ರಾಮ ಪಂಚಾಯಿತಿ ಹಾಗೂ ನಗರ ವ್ಯಾಪ್ತಿಯ 35 ವಾರ್ಡ್ಗಳಿಂದ ತಲಾ ಒಬ್ಬ ಸಾಧಕರನ್ನು ವಿವಿಧ ಕ್ಷೇತ್ರಗಳಿಂದ ಆಯ್ಕೆ ಮಾಡಿ ಸನ್ಮಾನಿಸಲಾಗುವುದು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಉದ್ಘಾಟಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅಧ್ಯಕ್ಷತೆ ವಹಿಸುವರು.
ಇದನ್ನೂ ಓದಿ:
ಮುಖ್ಯ ಅತಿಥಿಗಳಾಗಿ ಸಂಸದ ಗೋವಿಂದ ಕಾರಜೋಳ, ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಎಂ.ಚಂದ್ರಪ್ಪ, ಶಿವಗಂಗಾ ಬಸವರಾಜ್, ಸಮರ್ಥ್ ಮಲ್ಲಿಕಾರ್ಜುನ್, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ವೈನ್ಬೋರ್ಡ್ ಅಧ್ಯಕ್ಷ ಡಾ.ಯೋಗೇಶ್ ಬಾಬು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಕಾಂಗ್ರೆಸ್ ಮುಖಂಡ ಹನುಮಲಿ ಷಣ್ಮುಖಪ್ಪ, ಸಾವಯವ ಕೃಷಿ ಮಾಜಿ ಅಧ್ಯಕ್ಷ ಬಿ.ಸೋಮಶೇಖರ್, ಉದ್ಯಮಿ ಶ್ರೀನಿವಾಸ್ ಶಿವಗಂಗಾ, ಭರಮಸಾಗರದ ಎಸ್ಎಂಎಲ್ ತಿಪ್ಪೇಸ್ವಾಮಿ, ಭೀಮಸಮುದ್ರ ಉದ್ಯಮಿ ಶಂಕರಮೂರ್ತಿ ಭಾಗವಹಿಸುವರು ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ 75 ಜನ ಸಾಧಕರು ಕುಳಿತುಕೊಳ್ಳುವಂತೆ ವೇದಿಕೆ ಹಾಗೂ ಗಣ್ಯರ ವೇದಿಕೆ ನಿರ್ಮಾಣ ಮಾಡಲಾಗುವುದು. ಮದಕರಿ ನಾಯಕ ವೃತ್ತದಿಂದ ಶ್ರೀಗಳನ್ನು ಸಾರೋಟಿನಲ್ಲಿ ಕರೆದೊಯ್ಯಲಾಗುವುದು ಎಂದು ತಿಳಿಸಿದರು.
ಮೆದೆಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ರಂಗಭೂಮಿ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ಸಾಣೇಹಳ್ಳಿ ಶ್ರೀಗಳನ್ನು ಜಾತ್ಯಾತೀತವಾಗಿ ಕಾಂತರಾಜ್ ಅವರ ನೇತೃತ್ವದಲ್ಲಿ ಸನ್ಮಾನಿಸುತ್ತಿರುವುದು ಸಂತಸ ತಂದಿದೆ. ಈ ಕಾರ್ಯಕ್ರಮಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ:
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

