CHITRADURGA NEWS | 15 NOVEMBER 2026
ಚಿತ್ರದುರ್ಗ: ರೈತರ ಕೃಷಿಗೆ ನೀರಿನ ಲಭ್ಯತೆ ಹೆಚ್ಚಿಸಿ ಅಂತರ್ಜಲ ಮಟ್ಟ ಸುಧಾರಿಸುವ ಉದ್ದೇಶದಿಂದ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು.
ಇದನ್ನೂ ಓದಿ: ಪ್ರೈಮರಿ ಓದಿದ ಶಾಲೆಗೆ ಭೇಟಿ ಕೊಟ್ಟ ಮಿನಿಸ್ಟರ್
ತಾಲೂಕಿನ ಜೋಡಿ ಚಿಕ್ಕೇನಹಳ್ಳಿ ಮತ್ತು ದೇವಪುರದಹಟ್ಟಿ ಗ್ರಾಮಗಳ ಹಳ್ಳಗಳಿಗೆ ಒಟ್ಟು ₹4.52 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಮಳೆಗಾಲದಲ್ಲಿ ಹರಿದು ಹೋಗುವ ನೀರನ್ನು ಚೆಕ್ ಡ್ಯಾಂ ಮೂಲಕ ಸಂಗ್ರಹಿಸಿ ಭೂಮಿಗೆ ಇಂಗಿಸುವುದರಿಂದ ಅಂತರ್ಜಲ ಮಟ್ಟ ಹೆಚ್ಚಲಿದೆ. ಇದರಿಂದ ರೈತರ ಕೊಳವೆಬಾವಿ, ತೆರೆದ ಬಾವಿಗಳಲ್ಲಿ ನೀರಿನ ಲಭ್ಯತೆ ಹೆಚ್ಚುವುದರೊಂದಿಗೆ ಬೇಸಿಗೆಯ ನೀರಿನ ಸಮಸ್ಯೆಯೂ ಕಡಿಮೆಯಾಗಲಿದೆ ಎಂದರು.
ಜೋಡಿ ಚಿಕ್ಕೇನಹಳ್ಳಿಯಲ್ಲಿ ₹2.40 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ಮತ್ತು ಕ್ಯಾಸ್ಕೇಡ್ ನಿರ್ಮಾಣ ಹಾಗೂ ದೇವಪುರದಹಟ್ಟಿಯಲ್ಲಿ ₹2.12 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುವುದು. ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಳಪೆ ಕಾಮಗಾರಿ ಕಂಡುಬಂದರೆ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಇದನ್ನೂ ಓದಿ: ಇ-ಸ್ವತ್ತು ಅರ್ಜಿ ವಿಲೇವಾರಿಗೆ ವಾರ್ಡ್ವಾರು ವೇಳಾಪಟ್ಟಿ | ಜಿಲ್ಲಾಧಿಕಾರಿ
ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಭೀಮರಾಜ್, ತಹಸೀಲ್ದಾರ್ ಫಾತಿಮಾ, ತಾಲೂಕು ಪಂಚಾಯಿತಿ ಇಒ ಜಯಸಿಂಹ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

