CHITRADURGA NEWS | 15 November 2026
ಹೊಳಲ್ಕೆರೆ: ಮಳೆ-ಬೆಳೆಯಿಲ್ಲದೆ ರೈತರು ಸಂಕಷ್ಟ ಎದುರಿಸುತ್ತಿದ್ದು, ಸಮೃದ್ಧ ಮಳೆ ಸುರಿದು ರೈತರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿ ಮಾರುತಿ ನಿವೃತ್ತ ನೌಕರರ ಸಂಘದ ವತಿಯಿಂದ ಮಲ್ಲಾಡಿಹಳ್ಳಿ ಸಮೀಪದ ಕೆಂಗುಂಟೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಗೋ ಪೂಜೆ ನೆರವೇರಿಸಲಾಯಿತು.
ಇದನ್ನೂ ಓದಿ: ಗಾಯತ್ರಿ ಜಲಾಶಯದ ಬಳಿ ನೂತನ ಗೋಶಾಲೆ | ಜಿಲ್ಲಾಧಿಕಾರಿ ರಮ್ಯಾ ಚಾಲನೆ
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಲ್.ಬಿ.ರಾಜಪ್ಪ ಕೆಂಗುಂಟೆ ಮಾತನಾಡಿ, ಮಳೆಯ ಕೊರತೆಯಿಂದ ತೋಟಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಗೋವುಗಳಲ್ಲಿ ಕೋಟ್ಯಂತರ ದೇವತೆಗಳು ನೆಲೆಸಿದ್ದಾರೆ ಎಂಬ ನಂಬಿಕೆಯ ಹಿನ್ನೆಲೆಯಲ್ಲಿ ಗೋ ಪೂಜೆ ನೆರವೇರಿಸಲಾಗಿದೆ. ಭಗವಂತನು ಸಮೃದ್ಧ ಮಳೆ ಕರುಣಿಸಿ ರೈತರ ಬದುಕು ಹಸನಾಗಿಸಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.
ಗೋ ಪೂಜೆಯಲ್ಲಿ ಎಲ್.ರಂಗಪ್ಪ ಹಾಗೂ ಡಾ.ಎಸ್.ಪಿ.ರವಿ ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

