CHITRADURGA NEWS | 16 NOVEMBER 2026
ಚಿತ್ರದುರ್ಗ: ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಆಸ್ಪತ್ರೆಯಲ್ಲಿ (ಜಿಲ್ಲಾ ಆಸ್ಪತ್ರೆ) ಚಿಕಿತ್ಸೆಗಾಗಿ ದಾಖಲಾಗಿದ್ದ ಸುಮಾರು 35 ರಿಂದ 40 ವರ್ಷದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅನಾಮಧೇಯ ವ್ಯಕ್ತಿ ನ.13 ರಂದು ಮೃತ ಪಟ್ಟಿದ್ದು, ಮೃತದೇಹವನ್ನು ಜಿಲ್ಲಾ ಆಸ್ಪತ್ರೆ ಶವಗಾರ ಕೊಠಡಿ ಸಂಸ್ಕರಣಾ ಘಟಕದಲ್ಲಿ ಇರಿಸಲಾಗಿದೆ.
ಇದನ್ನೂ ಓದಿ:ಅಡಿಕೆ ಧಾರಣೆ | 16 ನವೆಂಬರ್ | ಯಾವ ಅಡಿಕೆ ರೇಟ್ ಎಷ್ಟಾಯ್ತು
ಮೃತ ವ್ಯಕ್ತಿ 5.9 ಅಡಿ ಎತ್ತರ, ದುಂಡು ಮುಖ, ಸಾಧಾರಣ ಮೈಕಟ್ಟು, ತಲೆಯಲ್ಲಿ 3 ಇಂಚು ಕಪ್ಪು ಕೂದಲು, ಬಿಳಿ ಬಣ್ಣದ ಕುರುಚಲು ಗಡ್ಡ ಇರುತ್ತದೆ. ಎಡಗೈ ಮೇಲೆ NR ಎಂಬ ಅಚ್ಚೆ ಗುರುತು ಇದೆ. ಹಸಿರು ಬಣ್ಣದ ಟೀ ಶರ್ಟ್, ಕೆಂಪು ಮತ್ತು ಬಿಳಿ ಚೆಕ್ಸ್ ಬಣ್ಣದ ಟವಲ್ ಇರುತ್ತದೆ. ಗುರುತು ಪತ್ತೆಯಾದವರು ಚಿತ್ರದುರ್ಗ ನಗರ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

