CHITRADURGA NEWS | 16 NOVEMBER 2026
ಚಿತ್ರದುರ್ಗ: ಹಿರಿಯೂರಿನಲ್ಲಿ ಇದೇ ನ.21 ರಂದು ಶನಿವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪ್ರಜಾಸೇವಾ ಆಂದೋಲನ ಸಭೆ ಜರುಗಲಿದೆ. ಇದಕ್ಕೂ ಮುನ್ನವೇ ಅರ್ಜಿ ನಮೂನೆಗಳನ್ನು ಸಾರ್ವಜನಿಕರಿಗೆ ವ್ಯವಸ್ಥಿತವಾಗಿ ಹಂಚಿಕೆ ಮಾಡಿ, ಸ್ವೀಕೃತವಾಗುವ ಅರ್ಜಿಗಳ ವಿಲೇವಾರಿ ಪ್ರಯತ್ನಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸೂಚಿಸಿದರು.
ಇದನ್ನೂ ಓದಿ: ಜಿಲ್ಲೆಯ ವಿವಿಧ ಕ್ಷೇತ್ರದ ಸಾಧಕರೊಂದಿಗೆ ರಾಜ್ಯಪಾಲೆ ಸುಧಾ ಯಾದವ್ ಸಮಾಲೋಚನೆ
ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆಯ ನಡೆಸಿ ಅವರು ಮಾತನಾಡಿದರು.
ಹಿರಿಯೂರು ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಪ್ರಜಾಸೇವಾ ಆಂದೋಲನ ಹಮ್ಮಿಕೊಂಡಿರುವ ಕುರಿತು, ಡಂಗೂರ ಸಾರುವ ಮೂಲಕ ಜನರಗೆ ಪ್ರಚಾರ ಪಡಿಸಬೇಕು. ಈ ಹಿಂದೆ ಹಿರಿಯೂರಿನಲ್ಲಿ ಸೆ.5 ರಂದು ಪ್ರಜಾಸೇವಾ ಆಂದೋಲನೆ ಚಾಲನೆ ನೀಡುವುದರೊಂದಿಗೆ, ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಹೀಗೆ ಸ್ವೀಕೃತವಾಗಿದ್ದ ಅರ್ಜಿಗಳ ಪೈಕಿ ಎಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.
ಯಾವ ಅರ್ಜಿಗಳ ವಿಲೇವಾರಿ ತಡವಾಗಿದೆ. ಅದಕ್ಕೆ ಕಾರಣವೇನು ಎಂಬುದನ್ನು ಪಟ್ಟಿ ಮಾಡಿ ಮಾಹಿತಿ ಒದಗಿಸಬೇಕು. ಈಗಾಗಲೇ ಪ್ರಜಾಸೇವಾ ಆಂದೋಲನ ಸೇರಿದಂತೆ, ಐ.ಪಿ.ಜಿ.ಆರ್.ಎಸ್. ಪೋರ್ಟ್ಲ್ನಲ್ಲಿ ಸ್ವೀಕೃತವಾಗಿರುವ ಅರ್ಜಿಗಳಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಹಂತದಲ್ಲೇ ಪರಿಹಾರ ಒದಗಬಹುದಾದರೆ, ಕೂಡಲೇ ಅಧಿಕಾರಿಗಳು ಸ್ಪಂದಿಸಿ ಜನರ ಕೆಲಸ ಮಾಡಿಕೊಡಬೇಕು.
ಇದನ್ನೂ ಓದಿ: ಎಚ್.ಡಿ.ಪುರ ದೇವಾಲಯದ ಬಳಿ ಪಾಳೇಗಾರರ ಕಾಲದ ಶಾಸನ ಪತ್ತೆ
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜರುಗುವ ಪ್ರಜಾಸೇವಾ ಆಂದೋಲನದ ಹಿನ್ನಲೆಯಲ್ಲಿ ಹಿರಿಯೂರು ತಾಲ್ಲೂಕಿನ ಎಲ್ಲ ಗ್ರಾಮ ಹಾಗೂ ನಗರ ಪ್ರದೇಶದಲ್ಲಿ ಮನೆ ಮನೆಗಳಿಗೆ ಭೇಟಿ ನೀಡಿ, ಅರ್ಜಿಗಳನ್ನು ವಿತರಿಸಿ, ಮರಳಿ ಅರ್ಜಿಗಳನ್ನು ಸ್ವೀಕರಿಸುವ ಕೆಲಸವಾಗಬೇಕು. ವೇದಿಕೆ ಕಾರ್ಯಕ್ರಮದ ಸ್ಥಳದಲ್ಲಿ ಸಾರ್ವಜನಿಕರಿಗೆ ನೆರಳು ಹಾಗೂ ಸೂಕ್ತ ಆಸನದ ವ್ಯವಸ್ಥೆ ಕಲ್ಪಿಸಬೇಕು. ಸ್ಥಳದಲ್ಲಿ ಇಲಾಖೆವಾರು ಕೌಂಟರ್ ತೆರೆಯಬೇಕು. ಬರಗಾಲದ ಹಿನ್ನಲೆಯಲ್ಲಿ ಸಾಕಷ್ಟು ಜನರು ಕುಡಿಯುವ ನೀರಿನ ಸಮಸ್ಯೆ ಹೊತ್ತು ಬರುತ್ತಾರೆ.
ಇದರೊಂದಿಗೆ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಸಲ್ಲಿಕೆಯಾಗುತ್ತವೆ. ಅಧಿಕಾರಿಗಳು ಇದಕ್ಕೆ ಸಿದ್ದರಿದ್ದು, ತತಕ್ಷಣವೇ ಪರಿಹಾರ ನೀಡಬೇಕು ಎಂದು ಸಚಿವ ಟಿ.ರಘುಮೂರ್ತಿ ಸೂಚಿಸಿದರು.
ಇದನ್ನೂ ಓದಿ: ಚಿಕಿತ್ಸೆಗಾಗಿ ದಾಖಲಾಗಿದ್ದ ಅನಾಮಧೇಯ ವ್ಯಕ್ತಿ ಸಾವು | ಗುರುತು ಪತ್ತೆಗೆ ಮನವಿ
ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ರಮ್ಯಾ, ಜಿ.ಪಂ.ಸಿಇಓ ಡಾ.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ಜಿ.ಪಂ.ಉಪಕಾರ್ಯದರ್ಶಿ ಬಾಬು, ಸಿಪಿಓ ಗಾಯಿತ್ರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಹಿರಿಯೂರು ತಹಶೀಲ್ದಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

