CHITRADURGA NEWS | 18 NOVEMBER 2026
ಚಿತ್ರದುರ್ಗ: ಜಿಲ್ಲೆಯ ರೈತರ ತೋಟಗಳನ್ನು ಉಳಿಸುವ ಉದ್ದೇಶದಿಂದ ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಭದ್ರಾ ಮೇಲ್ದಂಡೆ ಯೋಜನಾ ವಲಯ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿ ಮುಖ್ಯ ಎಂಜಿನಿಯರ್ ರವಿಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 18 | ಮೆಕ್ಕೆಜೋಳ, ಶೇಂಗಾ ರೇಟ್….
ಈ ಸಂದರ್ಭದಲ್ಲಿ ರೈತ ಮುಖಂಡರು ಮಾತನಾಡಿ, ಮಳೆಯ ಕೊರತೆಯಿಂದ ಜಿಲ್ಲೆಯ ಆರು ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. ನಿರಂತರ ಬರದಿಂದ ರೈತರ ತೋಟಗಳು ಒಣಗುತ್ತಿದ್ದು, ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ಹಿನ್ನೆಲೆಯಲ್ಲಿ ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ ನೀರು ಹರಿಸುವ ಮೂಲಕ ರೈತರ ತೋಟಗಳನ್ನು ಉಳಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಧ್ಯ ಕರ್ನಾಟಕದ ಬಯಲುಸೀಮೆ ಪ್ರದೇಶವಾಗಿರುವ ಚಿತ್ರದುರ್ಗ ಜಿಲ್ಲೆಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಭದ್ರಾ ಮೇಲ್ದಂಡೆ ಯೋಜನೆ ಆರಂಭವಾಗಿ 24 ವರ್ಷಗಳು ಕಳೆದಿವೆ. ಆದರೆ, ಕಾಮಗಾರಿಗಳು ನಿರೀಕ್ಷಿತ ವೇಗದಲ್ಲಿ ಸಾಗದೆ ಆಮೆಗತಿಯಲ್ಲಿ ನಡೆಯುತ್ತಿವೆ. ಇದರಿಂದ ಜಿಲ್ಲೆಯ ರೈತರಿಗೆ ಯೋಜನೆಯ ಪ್ರಯೋಜನ ತಲುಪುವುದು ವಿಳಂಬವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಯೋಜನೆಯ ಕಾಮಗಾರಿಗಳನ್ನು ತ್ವರಿತಗೊಳಿಸಿ ಜಿಲ್ಲೆಗೆ ಶೀಘ್ರ ನೀರು ಹರಿಸಲು ಕ್ರಮ ಕೈಗೊಳ್ಳಬೇಕು. ರೈತರ ಹಿತದೃಷ್ಟಿಯಿಂದ ನಿರ್ಲಕ್ಷ್ಯ ಧೋರಣೆ ಮುಂದುವರಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಸಿಗಲಿದೆ ಪರಿಹಾರ | ನ.21ಕ್ಕೆ ಹಿರಿಯೂರಿಗೆ ಸಿಎಂ
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಕೆ.ಟಿ. ತಿಪ್ಪೇಸ್ವಾಮಿ, ರೆಡ್ಡಿಹಳ್ಳಿ ವೀರಣ್ಣ, ಚಿಕ್ಕಬ್ಬಿಗೆರೆ ನಾಗರಾಜ್, ಆರ್.ಬಿ. ನಿಜಲಿಂಗಪ್ಪ, ಡಿ.ಎಸ್. ಹಳ್ಳಿ ಮಲ್ಲಿಕಾರ್ಜುನ್, ಕಾಂತರಾಜ್, ಸಿದ್ರಾಮಣ್ಣ, ತಿಮ್ಮಣ್ಣ, ಮಲ್ಲಿಕಾರ್ಜುನ್, ಕೊಟ್ರಬಸಪ್ಪ, ತಿಪ್ಪೇಸ್ವಾಮಿ, ಮಾರುತಿ, ಸದಾಶಿವ, ಸಿದ್ದಣ್ಣ, ರಾಮರೆಡ್ಡಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

