CHITRADURGA NEWS | 19 NOVEMBER 2026
ಚಿತ್ರದುರ್ಗ: ನಗರದ ಹಲವು ರಸ್ತೆಗಳು ತಗ್ಗು-ಗುಂಡಿಗಳಿಂದ ಕೂಡಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ (ಕೆ.ಕೆ.ಎನ್.ಎಸ್.ಎಸ್.) ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಬುಧವಾರ ಮೆದೇಹಳ್ಳಿ ರಸ್ತೆಯ ವೆಂಕಟೇಶ್ವರ ಟಾಕೀಸ್ ತಿರುವಿನಲ್ಲಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ:
ನಗರದ ವೆಂಕಟೇಶ್ವರ ಟಾಕೀಸ್ ಮುಂಭಾಗದಿಂದ ಗೋಪಾಲಪುರ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಚಾರಕ್ಕೆ ಅಯೋಗ್ಯವಾಗಿದೆ. ಅದೇ ರೀತಿ ಎಸ್.ಪಿ. ಕಚೇರಿ ಮುಂಭಾಗದಿಂದ ಆದಿಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್ ಅವರ ಮನೆಯವರೆಗಿನ ರಸ್ತೆ, ರೀಜನಲ್ ಸ್ಕೂಲ್ ಮುಂಭಾಗದ ರಸ್ತೆ ಹಾಗೂ ಪ್ರಸನ್ನ ಟಾಕೀಸ್ ರಸ್ತೆಗಳ ಕಾಮಗಾರಿಗಳು ಅಪೂರ್ಣಗೊಂಡಿವೆ ಎಂದು ದೂರಿದರು.
ತಗ್ಗು-ಗುಂಡಿಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಸವಾರರು ಸಂಚರಿಸುವಾಗ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಳ್ಳುತ್ತಿದ್ದಾರೆ. ರಸ್ತೆಗಳಲ್ಲಿನ ಧೂಳಿನಿಂದ ಸಾರ್ವಜನಿಕರು ವಿವಿಧ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದು, ರಸ್ತೆ ಬದಿಯ ಮನೆಗಳ ನಿವಾಸಿಗಳಿಗೂ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಈ ರಸ್ತೆಗಳಿಗೆ ಸಿ.ಸಿ. ರಸ್ತೆ ನಿರ್ಮಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ:
ಮುಂದಿನ ಒಂದು ತಿಂಗಳೊಳಗೆ ಕಾಮಗಾರಿ ಆರಂಭಿಸಿ ಸಾರ್ವಜನಿಕರ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿ ಧರಣಿ ಸ್ಥಳದಲ್ಲೇ ಊಟ, ತಿಂಡಿ ಸೇವಿಸುವ ಮೂಲಕ ಪ್ರತಿಭಟನೆ ನಡೆಸಿದರು. ನಿಗದಿತ ಅವಧಿಯಲ್ಲಿ ಕಾಮಗಾರಿ ಆರಂಭಿಸದಿದ್ದರೆ, ಸಂಚಾರಕ್ಕೆ ಯೋಗ್ಯವಲ್ಲದ ಈ ರಸ್ತೆಗಳಲ್ಲೇ ಗುಡಿಸಲುಗಳನ್ನು ನಿರ್ಮಿಸಿ ವಾಸ್ತವ್ಯ ಹೂಡುವ ಮೂಲಕ ಹೋರಾಟ ನಡೆಸಬೇಕಾಗುತ್ತದೆ ಎಂದು ಜಿಲ್ಲಾಡಳಿತ, ನಗರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಗಣೇಶ್ ಎಚ್ಚರಿಕೆ ನೀಡಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

