CHITRADURGA NEWS | 19 NOVEMBER 2026
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಅಂತ್ಯೋದಯ ಮತ್ತು ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿದಾರರ ಕುಟುಂಬದ ಎಲ್ಲ ಸದಸ್ಯರು ಕೂಡಲೆ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮನವಿ ಮಾಡಿದೆ.
ಇದನ್ನೂ ಓದಿ:
05 ವರ್ಷ ಪೂರೈಸಿದ ಒಟ್ಟು 8,94,600 ಫಲಾನುಭವಿಗಳಲ್ಲಿ ಈಗಾಗಲೇ 7,78,318 ಜನರು ಇ-ಕೆವೈಸಿ ಮಾಡಿಸಿದ್ದಾರೆ. ಇನ್ನೂ 1,16,282 ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳಬೇಕಿದೆ.
01 ವರ್ಷ ಪೂರೈಸಿದ ಒಟ್ಟು 3,44,105 ಫಲಾನುಭವಿಗಳಲ್ಲಿ 16,716 ಫಲಾನುಭವಿಗಳು ಇ-ಕೆವೈಸಿ ಮಾಡಿಸಿದ್ದು, ಬಾಕಿ ಇರುವ 3,27,389 ಫಲಾನುಭವಿಗಳು ಈ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ಇದುವರೆಗೂ ಒಮ್ಮೆಯೂ ಇ-ಕೆವೈಸಿ ಮಾಡಿಸದವರು ಒಟ್ಟು 23,976 ಫಲಾನುಭವಿಗಳಲ್ಲಿ ಕೇವಲ 9,542 ಜನರು ಮಾತ್ರ ಇ-ಕೆವೈಸಿ ಮಾಡಿಸಿದ್ದು, ಉಳಿದ 14,434 ಫಲಾನುಭವಿಗಳು ಇನ್ನು ಮುಂದೆ ಮಾಡಿಸಿಕೊಳ್ಳಬೇಕಿದೆ.
ಇ-ಕೆವೈಸಿ ಬಾಕಿ ಇರುವ ಪಡಿತರ ಫಲಾನುಭವಿಗಳ ಪಟ್ಟಿಯು ನ್ಯಾಯಬೆಲೆ ಅಂಗಡಿಗಳಲ್ಲಿ ಲಭ್ಯವಿರುತ್ತದೆ. ಇದರ ಜೊತೆಗೆ ಅನ್ನ ಸೇವಾ ಮೊಬೈಲ್ ಆಪ್ ಮೂಲಕ ಫಲಾನುಭವಿಗಳು ತಾವಿದ್ದಲ್ಲಿಯೇ ಇ-ಕೆವೈಸಿ ಮಾಡಿಕೊಳ್ಳುವ ಸೌಲಭ್ಯವನ್ನೂ ಇಲಾಖೆ ಕಲ್ಪಿಸಿದೆ.
ಇದನ್ನೂ ಓದಿ:
ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ. ಆದ್ದರಿಂದ ನವೆಂಬರ್ 30ರೊಳಗೆ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ, ಚಾಲ್ತಿಯಲ್ಲಿರುವ ಮೊಬೈಲ್ ಹಾಗೂ ರೇಷನ್ ಕಾರ್ಡ್ ತೆಗೆದುಕೊಂಡು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಇ-ಕೆವೈಸಿ ಮಾಡಲು ಯಾವುದೇ ಶುಲ್ಕವಿರುವುದಿಲ್ಲ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

