CHITRADURGA NEWS | 20 NOVEMBER 2026
ಚಿತ್ರದುರ್ಗ: ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಸಣ್ಣಪುಟ್ಟ ದುರಸ್ತಿ ಹಾಗೂ ನಿರ್ವಹಣಾ ಕಾಮಗಾರಿಗಳ ಜವಾಬ್ದಾರಿ ನೇರವಾಗಿ ಆಯಾ ಗ್ರಾಮ ಪಂಚಾಯಿತಿ ಮಟ್ಟದ ‘ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ’ಗಳಿಗೆ ವಹಿಸುವ ಮೂಲಕ ರಾಜ್ಯದಲ್ಲೇ ವಿನೂತನ ಪ್ರಯೋಗಕ್ಕೆ ಜಿಲ್ಲಾ ಪಂಚಾಯಿತಿ ಮುಂದಾಗಿದೆ ಎಂದು ಜಿ.ಪಂ ಸಿಇಒ ಡಾ. ಎಸ್. ಆಕಾಶ್ ತಿಳಿಸಿದರು.
ಇದನ್ನೂ ಓದಿ: ದಿನ ಭವಿಷ್ಯ | ನವೆಂಬರ್ 20 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪರಿಶ್ರಮಕ್ಕೆ ತಕ್ಕ ಮನ್ನಣೆ
ನಗರದ ಜಿಲ್ಲಾ ಪಂಚಾಯಿತಿಯ ‘ನೀರ್ ಲ್ಯಾಬ್’ನಲ್ಲಿ ಗುರುವಾರ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವಬ್ಯಾಂಕ್ ನೆರವಿನ ಯೋಜನೆಯಡಿ ಜಿಲ್ಲೆಗೆ ರೂ.6 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಈ ಪೈಕಿ ರೂ.5.50 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.
ಬಲ್ಕ್‍ಫ್ಲೋಮೀಟರ್ (ರೂ.60 ರಿಂದ 75 ಸಾವಿರ), ಎಲೆಕ್ಟ್ರೋಫ್ಯೂಷನ್ ಮಷಿನ್ ಖರೀದಿ (ರೂ.75 ಸಾವಿರ), ಓವರ್‍ಹೆಡ್ ಟ್ಯಾಂಕ್ ಪುನಶ್ಚೇತನ (ರೂ.93 ಸಾವಿರ) ಹಾಗೂ ನೀರು ಶುದ್ಧೀಕರಣ ಘಟಕಗಳ ದುರಸ್ತಿಯಂತಹ ಸಣ್ಣ ಕಾಮಗಾರಿಗಳ ವೆಚ್ಚ ರೂ.1 ಲಕ್ಷಕ್ಕಿಂತ ಕಡಿಮೆ ಇರುತ್ತದೆ. ಇಂತಹ ಸಣ್ಣ ಕೆಲಸಗಳಿಗೆ ಜಿಲ್ಲಾ ಮಟ್ಟದಲ್ಲಿ ಟೆಂಡರ್ ಕರೆದರೆ ಬಿಡ್ಡರ್‍ಗಳು ಭಾಗವಹಿಸದೆ, ಮರು ಟೆಂಡರ್ ಹೆಸರಿನಲ್ಲಿ ತಿಂಗಳುಗಟ್ಟಲೆ ಕಾಲಹರಣವಾಗುತ್ತಿದೆ. ಇದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದರು.
ಪ್ರಾಯೋಗಿಕವಾಗಿ ಮೊದಲ ಹಂತದಲ್ಲಿ ಎಲೆಕ್ಟ್ರೋಫ್ಯೂಷನ್ ಮಷಿನ್ ಹಾಗೂ ಬಲ್ಕ್‍ಫ್ಲೋಮೀಟರ್ ಮೀಟರ್ ಖರೀದಿ ಮತ್ತು ಅಳವಡಿಕೆ ಜವಾಬ್ದಾರಿಯನ್ನು ವಿಡಬ್ಲ್ಯೂಎಸ್‍ಸಿ ಸಮಿತಿಗಳಿಗೆ ನೀಡಲಾಗಿದೆ. ಸಮಿತಿಯ ಅಧ್ಯಕ್ಷರು ಮತ್ತು ಪಿಡಿಒ ಅವರ ಜಂಟಿ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾಯಿಸಲಾಗುತ್ತಿದೆ. ಕೆಟಿಪಿಪಿ ಕಾಯ್ದೆ ಅನ್ವಯ ಕೊಟೇಷನ್ ಪಡೆದು, ಒಂದು ವಾರದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಈಗಾಗಲೇ ಕಾರ್ಯಾಗಾರ ನಡೆಸಿ ಸೂಚಿಸಲಾಗಿದೆ ಎಂದರು.
ಇದನ್ನೂ ಓದಿ: ವಿದ್ಯಾ ವಿಕಾಸ ಸಂಸ್ಥೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ | ವಿದ್ಯಾರ್ಥಿನಿಯರಿಗೆ ಕನ್ನಡ ಮಾಣಿಕ್ಯ ಪ್ರಶಸ್ತಿ ಗೌರವ
ಓವರ್‍ಹೆಡ್ ಟ್ಯಾಂಕ್ ದುರಸ್ತಿಯಂತಹ ಕಾಮಗಾರಿಗಳಿಗೆ ತಾಂತ್ರಿಕ ಪರಿಣತಿ ಅಗತ್ಯವಿರುವುದರಿಂದ ಸದ್ಯಕ್ಕೆ ಇಂಜಿನಿಯರ್‍ಗಳ ಮೂಲಕ ನಿರ್ವಹಿಸಲಾಗುತ್ತಿದೆ. ಆದರೆ, ಮುಂದಿನ ದಿನಗಳಲ್ಲಿ ಈ ಕೆಲಸಗಳನ್ನೂ ಸಮಿತಿಗಳಿಗೆ ವಹಿಸಲಾಗುವುದು. ಆಯಾ ವ್ಯಾಪ್ತಿಯ ಸೆಕ್ಷನ್ ಆಫೀಸರ್‍ಗಳು ವಿಡಬ್ಲ್ಯೂಎಸ್‍ಸಿ ಸಭೆಗಳಲ್ಲಿ ಕಡ್ಡಾಯವಾಗಿ ಭಾಗವಹಿಸಿ, ಅಂದಾಜು ಪಟ್ಟಿ ತಯಾರಿಕೆ ಸೇರಿದಂತೆ ಎಲ್ಲಾ ತಾಂತ್ರಿಕ ಸಲಹೆಗಳನ್ನು ನೀಡಬೇಕು ಎಂದು ಸಿಇಒ ಡಾ. ಆಕಾಶ್ ನಿರ್ದೇಶನ ನೀಡಿದರು.
ಗ್ರಾಮೀಣ ಭಾಗದ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳ ದುರಸ್ತಿ ಹಾಗೂ ಸಮರ್ಪಕ ನಿರ್ವಹಣೆಯ ಜವಾಬ್ದಾರಿಯನ್ನು ಆಯಾ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳೇ ವಹಿಸಿಕೊಳ್ಳಬೇಕು. ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳಿಗೆ ಹೆಚ್ಚಿನ ಜವಾಬ್ದಾರಿ ನೀಡುವ ಮುನ್ನ ಅವರ ಸಾಮಥ್ರ್ಯ ವೃದ್ಧಿಸುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಸಮಿತಿಯ ಸದಸ್ಯರು ಹಾಗೂ ಪಿಡಿಒಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ ಆಯೋಜಿಸಲಾಗುವುದು. ಜೆ-ಪಾಲ್’ ಸಂಸ್ಥೆಯ ತಾಂತ್ರಿಕ ನೆರವಿನೊಂದಿಗೆ ಈ ತರಬೇತಿ ನೀಡಲಾಗುವುದು’ ಎಂದು ತಿಳಿಸಿದರು.
ಜೆಜೆಎಂ ಕಾಮಗಾರಿಗಳ ಅಂದಾಜು ವೆಚ್ಚ ಪರಿಷ್ಕರಣೆಗೆ ಆಕ್ಷೇಪ:
ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಟೆಂಡರ್ ಮೊತ್ತಕ್ಕಿಂತ ಪರಿಷ್ಕøತ ಅಂದಾಜು ವೆಚ್ಚದಲ್ಲಿ ಏರಿಕೆಯಾಗಿರುವುದಕ್ಕೆ ಜಿ.ಪಂ. ಸಿಇಒ ಡಾ. ಎಸ್. ಆಕಾಶ್ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಇದನ್ನೂ ಓದಿ: ಹಿರಿಯೂರು ಉಪಚುನಾವಣೆಗೆ ರೈತ ಸಂಘದ ಅಭ್ಯರ್ಥಿ ಕಣಕ್ಕೆ
ಚಿತ್ರದುರ್ಗ ತಾಲ್ಲೂಕಿನ ಲಕ್ಷ್ಮಿಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಜೆಎಂ ಕಾಮಗಾರಿಯ ವೆಚ್ಚ ಪರಿಷ್ಕರಣೆ ಕುರಿತು ಚರ್ಚಿಸಿದ ಸಿಇಒ, ಜಿಎಸ್‍ಟಿ ಹೊರತುಪಡಿಸಿ ರೂ.91.89 ಲಕ್ಷಕ್ಕೆ ಟೆಂಡರ್ ಗುತ್ತಿಗೆ ನೀಡಲಾಗಿದೆ. ಆದರೆ, ಇದೀಗ ಜಿಎಸ್‍ಟಿ, ಬೋರ್‍ವೆಲ್ ಶುಲ್ಕ ಹಾಗೂ ಇತರೆ ವೆಚ್ಚಗಳ ಹೆಸರಿನಲ್ಲಿ ಒಟ್ಟು ಮೊತ್ತ ರೂ.1.25 ಕೋಟಿಗೆ ಏರಿಕೆಯಾಗಿದೆ. ಇತರೆ ವೆಚ್ಚದಡಿ ರೂ.26.75 ಲಕ್ಷ ಹೆಚ್ಚುವರಿಯಾಗಿ ಸೇರಿಸಿರುವುದು ಏಕೆ? ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿತ್ರದುರ್ಗ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಪ್ರಶ್ನಿಸಿದರು.
ಟೆಂಡರ್ ಪ್ರಕ್ರಿಯೆಯಲ್ಲಿ ಜಿಎಸ್‍ಟಿ ಮತ್ತು ಬೋರ್‍ವೆಲ್ ಶುಲ್ಕಗಳು ಸೇರಿರುವುದಿಲ್ಲ. ಕಾಮಗಾರಿ ಪೂರ್ಣಗೊಂಡ ಬಳಿಕ ಶೇ 18ರಷ್ಟು ಜಿಎಸ್‍ಟಿ (ರೂ.17.79 ಲಕ್ಷ), ಬೋರ್‍ವೆಲ್ ಶುಲ್ಕ (ರೂ.4.86 ಲಕ್ಷ) ಹಾಗೂ ಬೆಸ್ಕಾಂ ಸೇರಿದಂತೆ ಇತರೆ ವೆಚ್ಚಗಳನ್ನು ಒಟ್ಟುಗೂಡಿಸಿ ಪರಿಷ್ಕøತ ವೆಚ್ಚ ಸಿದ್ಧಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಅಮರನಾಥ ಜೈನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪ್ಯಾನಾಯ್ಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್, ಜಿಲ್ಲಾ ವಾರ್ತಾಧಿಕಾರಿ ಎಂ.ಜುಂಜಣ್ಣ, ಜಲವಿಜ್ಞಾನಿ ಮತ್ತು ಮಳೆ ನೀರು ಕೊಯ್ಲು ತಜ್ಞ ಡಾ.ದೇರಾಜರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

