CHITRADURGA NEWS | 20 NOVEMBER 2026
ಚಿತ್ರದುರ್ಗ: ಲೇಖಕ ರವಿ ಹಂಜ್ ಪುಸ್ತಕಕ್ಕೆ ‘ಬಸವ ಮಂಟಪ’ ಎಂಬ ಹೆಸರಿಟ್ಟು ಬಸವಣ್ಣನವರನ್ನು ಅವಮಾನಿಸುವ ರೀತಿಯಲ್ಲಿ ಪೂರ್ವಗ್ರಹ ಪೀಡಿತವಾಗಿ ಕೃತಿ ರಚಿಸಿರುವುದು ಕ್ಷಮಿಸಲಾರದ ಅಪರಾಧ. ಸರ್ಕಾರ ತಕ್ಷಣವೇ ಕೃತಿಯನ್ನು ಮುಟ್ಟುಗೋಲು ಹಾಕಿಕೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಕೃತಿಯಿಂದ ಲಕ್ಷಾಂತರ ಜನರ ಭಾವನೆ ಮತ್ತು ಆತ್ಮಗೌರವಕ್ಕೆ ಧಕ್ಕೆಯಾಗಿದೆ. ಕೂಡಲೇ ಕೃತಿಯನ್ನು ಹಿಂಪಡೆಯಬೇಕು” ಎಂದರು.
ಇದನ್ನೂ ಓದಿ:ಹಿರಿಯೂರು ಉಪಚುನಾವಣೆ | ಬಿಜೆಪಿ – ಜಡಿಎಸ್ ನಡುವೆ ಗೊಂದಲ ಇಲ್ಲ | ಎನ್ಡಿಎ ಅಭ್ಯರ್ಥಿ ಕಣಕ್ಕೆ | ಸಿ.ಟಿ.ರವಿ
ಕೃತಿ ಬಿಡುಗಡೆ ಸಮಾರಂಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಹಾಗೂ ಶ್ರೀ ಸರ್ಪಭೂಷಣ ಸ್ವಾಮೀಜಿ ಭಾಗವಹಿಸಿದ್ದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಆ ಕಾರ್ಯಕ್ರಮಕ್ಕೆ ನನಗೂ ಆಹ್ವಾನವಿತ್ತು. ಆದರೆ, ಪುಸ್ತಕದಲ್ಲಿ ಏನಿದೆ ಎಂಬುದನ್ನು ಪೂರ್ಣವಾಗಿ ಓದದೆ ಕಾರ್ಯಕ್ರಮಕ್ಕೆ ಹೋದವರ ಬಗ್ಗೆ ಮಾತನಾಡುವುದಕ್ಕಿಂತ, ಪೂರ್ವಗ್ರಹ ಪೀಡಿತ ಉದ್ದೇಶದಿಂದ ಕೃತಿ ಬರೆದವರ ಬಗ್ಗೆ ಮಾತನಾಡುವುದು ಸೂಕ್ತ ಎಂದು ಹೇಳಿದರು.
ಗೋಹತ್ಯೆ ನಿಷೇಧ ಮತ್ತು ಮತಾಂತರ ನಿಷೇಧ ಕಾಯ್ದೆ ರದ್ದತಿಗೆ ವಿರೋಧ:
ನಮ್ಮ ಸರ್ಕಾರ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಚಿತ್ರದುರ್ಗದಿಂದಲೇ ಆರಂಭವಾದ ಮತಾಂತರ ನಿಷೇಧ ಕಾಯ್ದೆಯನ್ನು ಹಾಲಿ ಸರ್ಕಾರ ಹಿಂಪಡೆಯಲು ಹೊರಟಿರುವುದು ಸಮಾಜದಲ್ಲಿ ಮತ್ತೆ ಕ್ಷೋಭೆ ಉಂಟು ಮಾಡಲಿದೆ ಎಂದು ಬಸವರಾಜ ಬೊಮ್ಮಾಯಿ ಎಚ್ಚರಿಸಿದರು.
ಇದನ್ನೂ ಓದಿ:ಚನ್ನಗಿರಿ, ತೀರ್ಥಹಳ್ಳಿ, ಶಿವಮೊಗ್ಗ ಸೇರಿ ರಾಜ್ಯದ ಅಡಿಕೆ ಧಾರಣೆ
ಗೋಹತ್ಯೆ ನಿಷೇಧ ಕಾನೂನು ಬಂದ ಮೇಲೆ ಸಾಕಷ್ಟು ಗೋಹತ್ಯೆ ನಿಂತಿದೆ. ಗೋವುಗಳನ್ನು ರಕ್ಷಿಸಬೇಕಾದ ಸರ್ಕಾರವೇ ಗೋಹತ್ಯೆಗೆ ಪ್ರಚೋದನೆ ನೀಡುವುದು ಮತ್ತು ಒಂದು ಧರ್ಮದ ಭಾವನೆಗಳಿಗೆ ಧಕ್ಕೆ ತರುವುದು ಸಂವಿಧಾನ ವಿರೋಧಿ ನಡೆಯಾಗಿದೆ. ಸರ್ಕಾರ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

