CHITRADURGA NEWS | 20 NOVEMBER 2026
ಚಿತ್ರದುರ್ಗ: ಉಪಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರಿ ಕಾರ್ಯಕ್ರಮಗಳನ್ನು ಕೇವಲ ಹಿರಿಯೂರಿಗೆ ಸೀಮಿತಗೊಳಿಸಿ ಸುಳ್ಳು ಆಶ್ವಾಸನೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮಾಡುತ್ತಿರುವ ಈ ಪ್ರವಾಸಗಳಿಂದ ಕ್ಷೇತ್ರಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದರು.
ಇದನ್ನೂ ಓದಿ:
ಇದೇ ವೇಳೆ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ ಬಿಡುಗಡೆ ಕುರಿತು ಮಾತನಾಡಿ, ಸಿಡಬ್ಲ್ಯೂಸಿ ಅನುಮೋದನೆ ಬಂದ ತಕ್ಷಣ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಹಣಕಾಸು ಸಚಿವರು ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಭೇಟಿಯ ನಂತರವೂ ಈ ಬಗ್ಗೆ ಸಭೆ ನಡೆಸಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದಷ್ಟು ಬೇಗ 6,000 ಕೋಟಿ ರೂ. ಅನುದಾನ ಮಂಜೂರಾಗಿ ಬಿಡುಗಡೆಯಾಗುವ ವಿಶ್ವಾಸವಿದೆ ಎಂದು ತಿಳಿಸಿದರು.
ಕಾವೇರಿ ನೀರು ಹಂಚಿಕೆ:
ಕಾವೇರಿ ವಿವಾದದ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿ, ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ರಾಜ್ಯದ ಜಲಾನಯನ ಪ್ರದೇಶದಲ್ಲಿ ಬರಗಾಲವಿದ್ದು, ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆಯಾಗಲಿದೆ. ಡಿಸೆಂಬರ್ ಬಂದರೂ ತಮಿಳುನಾಡಿಗೆ 2,000 ಕ್ಯೂಸೆಕ್ ನೀರು ಬಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಸರಿಯಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ಇದನ್ನೂ ಓದಿ:
ಪಕ್ಷದ ಅಧ್ಯಕ್ಷರ ಆಯ್ಕೆ:
ಬಿಜೆಪಿ ರಾಜ್ಯಾಧ್ಯಕ್ಷರ ಮುಂದುವರಿಕೆ ಕುರಿತ ಎಂ.ಪಿ. ರೇಣುಕಾಚಾರ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ವಿಚಾರ ಸದ್ಯ ಹೈಕಮಾಂಡ್ ಅಂಗಳದಲ್ಲಿದ್ದು, ವರಿಷ್ಠರೇ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಪ್ರತಿಕ್ರಿಯಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

