By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಚಾಲನೆ
    ಕುಮಟ – ಕಡಮಡಿಗಿ ರಸ್ತೆ ಅಭಿವೃದ್ಧಿಗೆ 4 ಕೋಟಿ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
    2 hours ago
    ಸಂಸದ ಗೋವಿಂದ ಕಾರಜೋಳ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
    ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಿರಿಯೂರಲ್ಲಿ ಪುಂಗಿ ಊದಿದ್ದಾರೆ | ಸಂಸದ ಗೋವಿಂದ ಕಾರಜೋಳ
    2 hours ago
    75 ಸಾಧಕರಿಗೆ ಶಿವಸಂಚಾರ ಪುರಸ್ಕಾರ
    ಎಲೆಮರೆಯ ಸಾಧಕರಿಗೆ ಗೌರವ ಸಲ್ಲಿಸುವುದು ಶ್ರೇಷ್ಠ ಕಾರ್ಯ | ಟಿ.ರಘುಮೂರ್ತಿ
    2 hours ago
    NPS – OPS ವಿಚಾರದಲ್ಲಿ ಸೂಕ್ತ ನಿರ್ಧಾರ | ಹಬ್ಬಕ್ಕೆ ಮುಂಗಡ 50 ಸಾವಿರ | ಡಿ.ಕೆ.ಶಿವಕುಮಾರ್
    14 hours ago
    CM D.K.Shivakumar Ministers T Raghumurthy and Cheluavarayaswamy in program
    ಭದ್ರಾ ಮೇಲ್ದಂಡೆಗೆ 2 ಟಿಎಂಸಿ ನೀರಿನ ವಿಚಾರ | ನೀರಾವರಿ ಸಚಿವ ಚೆಲುವರಾಯಸ್ವಾಮಿ ಏನು ಹೇಳಿದ್ರು ?
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಅಕ್ರಮ ಸಂಬಂಧಕ್ಕೆ ಅಡ್ಡಿ | ಪತಿಯ ಹತ್ಯೆ | ಅತ್ತೆ, ಪ್ರಿಯಕರ, ಪತ್ನಿ ಬಂಧನ
    5 days ago
    ಜಿಲ್ಲಾಸ್ಪತ್ರೆ
    ಚಿಕಿತ್ಸೆಗಾಗಿ ದಾಖಲಾಗಿದ್ದ ಅನಾಮಧೇಯ ವ್ಯಕ್ತಿ ಸಾವು | ಗುರುತು ಪತ್ತೆಗೆ ಮನವಿ
    6 days ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    4 weeks ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 month ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ನವೆಂಬರ್‌ 21 | ಯಾವ ಅಡಿಕೆಗೆ ಎಷ್ಟು ರೇಟು
    1 day ago
    arecanut price list
    ಚನ್ನಗಿರಿ, ತೀರ್ಥಹಳ್ಳಿ, ಶಿವಮೊಗ್ಗ ಸೇರಿ ರಾಜ್ಯದ ಅಡಿಕೆ ಧಾರಣೆ
    2 days ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 19 | ತೀರ್ಥಹಳ್ಳಿ, ದಾವಣಗೆರೆ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 18 | ಇಂದು ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಚನ್ನಗಿರಿ, ತೀರ್ಥಹಳ್ಳಿ, ಭದ್ರಾವತಿ ಹಾಗೂ ರಾಜ್ಯದ ಅಡಿಕೆ ಧಾರಣೆ
    5 days ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ನವೆಂಬರ್ 22 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಶುಭವಾರ್ತೆ
    15 hours ago
    today bhavishya
    ದಿನ ಭವಿಷ್ಯ | ನವೆಂಬರ್ 21 | ಉದ್ಯೋಗದಲ್ಲಿ ಬಡ್ತಿ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ನವೆಂಬರ್ 20 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪರಿಶ್ರಮಕ್ಕೆ ತಕ್ಕ ಮನ್ನಣೆ
    3 days ago
    today bhavishya
    ದಿನ ಭವಿಷ್ಯ | ನವೆಂಬರ್ 19 | ಅನಿರೀಕ್ಷಿತ ಧನಲಾಭ, ಪ್ರಯಾಣಗಳನ್ನು ಮುಂದೂಡುವುದು ಉತ್ತಮ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | 18 ನವೆಂಬರ್ | ಆರ್ಥಿಕವಾಗಿ ಅನುಕೂಲಕರ ವಾತಾವರಣ, ಕೈಗೆತ್ತಿಕೊಂಡ ಕಾರ್ಯಗಳು ಯಶಸ್ವಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…..
    1 day ago
    ಮಾರುಕಟ್ಟೆ ಧಾರಣೆ | ನವೆಂಬರ್ 20 | ರಾಗಿ, ಸೂರ್ಯಕಾಂತಿ, ಕಡಲೆಕಾಳು ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ನವೆಂಬರ್ 19 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ನವೆಂಬರ್ 18 | ಮೆಕ್ಕೆಜೋಳ, ಶೇಂಗಾ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಕರಡಿ ದಾಳಿ
    ಅಡಿಕೆ ತೋಟದಲ್ಲಿದ್ದ ರೈತನ ಮೇಲೆ ಮೂರು ಕರಡಿಗಳ ದಾಳಿ | ರೈತನ ಸ್ಥಿತಿ‌ ಚಿಂತಾಜನಕ
    3 hours ago
    ಅಧಿಕಾರವೆಂಬುದು ಸ್ವಂತಕ್ಕಲ್ಲ, ಜನಸೇವೆಗಾಗಿ | ಶಾಸಕ ಡಾ.ಎಂ.ಚಂದ್ರಪ್ಪ
    1 day ago
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 months ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ex cm Basavaraj bommai
    ಸುಳ್ಳು ಆಶ್ವಾಸನೆಗಳಿಂದ ಹಿರಿಯೂರಿನ ಅಭಿವೃದ್ಧಿ ಆಗಲ್ಲ | ಬಸವರಾಜ ಬೊಮ್ಮಾಯಿ
    2 days ago
    BJP LEADER C.T.RAVI
    ಹಿರಿಯೂರು ಉಪಚುನಾವಣೆ | ಬಿಜೆಪಿ – ಜೆಡಿಎಸ್‌ ನಡುವೆ ಗೊಂದಲ ಇಲ್ಲ | ಎನ್‌ಡಿಎ ಅಭ್ಯರ್ಥಿ ಕಣಕ್ಕೆ | ಸಿ.ಟಿ.ರವಿ
    2 days ago
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 months ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    5 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    3 weeks ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    4 weeks ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    4 weeks ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    4 weeks ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    4 weeks ago
Reading: ಎಲೆಮರೆಯ ಸಾಧಕರಿಗೆ ಗೌರವ ಸಲ್ಲಿಸುವುದು ಶ್ರೇಷ್ಠ ಕಾರ್ಯ | ಟಿ.ರಘುಮೂರ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಎಲೆಮರೆಯ ಸಾಧಕರಿಗೆ ಗೌರವ ಸಲ್ಲಿಸುವುದು ಶ್ರೇಷ್ಠ ಕಾರ್ಯ | ಟಿ.ರಘುಮೂರ್ತಿ

News Desk Chitradurga News
Last updated: 22 November 2026 19:35
News Desk Chitradurga News
2 hours ago
Share
75 ಸಾಧಕರಿಗೆ ಶಿವಸಂಚಾರ ಪುರಸ್ಕಾರ
75 ಸಾಧಕರಿಗೆ ಶಿವಸಂಚಾರ ಪುರಸ್ಕಾರ
SHARE

CHITRADURGA NEWS | 22 NOVEMBER 2026

ಚಿತ್ರದುರ್ಗ: ಮನುಷ್ಯ ಜೀವತಾಳಿ, ಬದುಕಿ ಮರಣ ಹೊಂದುವುದರ ನಡುವೆ ಸಮಾಜಕ್ಕೆ ಅನುಕೂಲವಾಗುವಂತಹ ಸಾಧನೆ ಮಾಡಬೇಕು. ಆಗ ಮಾತ್ರ ಹುಟ್ಟಿದ ಬದುಕು ಸಾರ್ಥಕವಾಗುತ್ತದೆ. ಎಲೆಮರೆಯ ಕಾಯಿಯಂತಿರುವ ಸಾಧಕರನ್ನು ಗುರುತಿಸಿ ಗೌರವಿಸುವುದು ಉತ್ತಮ ಕಾರ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಹೇಳಿದರು.

ಇದನ್ನೂ ಓದಿ: ಅಡಿಕೆ ತೋಟದಲ್ಲಿದ್ದ ರೈತನ ಮೇಲೆ ಮೂರು ಕರಡಿಗಳ ದಾಳಿ | ರೈತನ ಸ್ಥಿತಿ‌ ಚಿಂತಾಜನಕ

ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ 75 ಸಾಧಕರಿಗೆ ನಗರದ ತ.ರಾ.ಸು. ರಂಗಮಂದಿರದಲ್ಲಿ ಬಿ.ಕಾಂತರಾಜ್ ಮತ್ತು ತಂಡದವರು ಆಯೋಜಿಸಿದ್ದ ಶಿವ ಸಂಚಾರ ಪುರಸ್ಕಾರ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ಬಸವಾದಿ ಶರಣರ ತತ್ವಾದರ್ಶಗಳನ್ನು ಚಾಚೂತಪ್ಪದೆ ಪಾಲಿಸುತ್ತಾ ಬಂದಿದ್ದಾರೆ. ಶಿವ ಸಂಚಾರ ನಾಟಕಗಳ ಮೂಲಕ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಮಹತ್ವದ ಕಾರ್ಯ ಮಾಡುತ್ತಿದ್ದಾರೆ. ಮದ್ಯಪಾನದಿಂದ ಸರ್ಕಾರಕ್ಕೆ ಆದಾಯ ಬರುತ್ತದೆ ಎಂಬುದು ನಿಜ. ಆದರೆ ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಿದರೆ ಆರೋಗ್ಯಪೂರ್ಣ ಸಮಾಜ ನಿರ್ಮಿಸಲು ಸಾಧ್ಯ.

ಮದ್ಯ ಸೇವನೆಯಿಂದ ಅಪರಾಧ ಪ್ರಕರಣಗಳು ಹೆಚ್ಚುತ್ತವೆ. ನಾನು ಚಳ್ಳಕೆರೆ ಶಾಸಕನಾದಾಗಿನಿಂದ ಯಾವುದೇ ಹೊಸ ಮದ್ಯದಂಗಡಿಗಳಿಗೆ ಅನುಮತಿ ನೀಡಿಲ್ಲ. 75 ಸಾಧಕರನ್ನು ಗುರುತಿಸಿ ಪುರಸ್ಕರಿಸುತ್ತಿರುವುದು ಇತರರಿಗೂ ಪ್ರೇರಣೆಯಾಗಲಿದೆ. ಜಿಲ್ಲೆಯ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸುವುದಾಗಿ ತಿಳಿಸಿದರು.

ಸಂಸದ ಗೋವಿಂದ ಎಂ.ಕಾರಜೋಳ ಮಾತನಾಡಿ, ಹನ್ನೆರಡನೇ ಶತಮಾನದಲ್ಲಿ ಮೂಢನಂಬಿಕೆ ಹಾಗೂ ಸಾಮಾಜಿಕ ಅಸಮಾನತೆಗಳ ವಿರುದ್ಧ ಹೋರಾಡಿ ಸಮಾಜ ಸುಧಾರಣೆಗೆ ಶ್ರಮಿಸಿದ ಬಸವಣ್ಣನವರ ಕುರಿತು ಇತ್ತೀಚೆಗೆ ಇಲ್ಲಸಲ್ಲದ ಅಪಪ್ರಚಾರ ನಡೆಯುತ್ತಿರುವುದು ಖಂಡನೀಯ. ಸಮಾಜದ್ರೋಹಿ ಕೃತ್ಯಗಳಿಗೆ ಮುಂದಾಗುವ ಅಜ್ಞಾನಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. 21ನೇ ಶತಮಾನದಲ್ಲಿಯೂ ಬಸವತತ್ವ ಉಳಿದುಕೊಂಡು ಬಂದಿರುವುದಕ್ಕೆ ಅನೇಕ ಮಠಾಧೀಶರ ಕೊಡುಗೆ ಮಹತ್ವದ್ದಾಗಿದೆ. ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ದೀನದಲಿತರ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ: NPS – OPS ವಿಚಾರದಲ್ಲಿ ಸೂಕ್ತ ನಿರ್ಧಾರ | ಹಬ್ಬಕ್ಕೆ ಮುಂಗಡ 50 ಸಾವಿರ | ಡಿ.ಕೆ.ಶಿವಕುಮಾರ್

ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ಪಂಡಿತಾರಾಧ್ಯ ಶ್ರೀಗಳು ಸಮಾಜವನ್ನು ತಿದ್ದುವ ಕಾರ್ಯ ನಿರಂತರವಾಗಿ ಮುಂದುವರಿಸಲಿ. ಅವರ ಮಾರ್ಗದರ್ಶನದಲ್ಲಿ ಪ್ರತಿಯೊಬ್ಬರೂ ಶಿಸ್ತು ಮತ್ತು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಸಾಧಕರ ಸಾಧನೆಗಳು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಲಿ ಎಂದು ಆಶಿಸಿದರು.

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ, ಶಿವ ಸಂಚಾರ ನಾಟಕಗಳನ್ನು ಉತ್ತರ ಭಾರತಕ್ಕೂ ಪರಿಚಯಿಸುವ ಮೂಲಕ ಪಂಡಿತಾರಾಧ್ಯ ಶ್ರೀಗಳು ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ. ಸಮಾಜದ ತಪ್ಪುಗಳು ಮತ್ತು ನ್ಯೂನತೆಗಳನ್ನು ನಾಟಕಗಳ ಮೂಲಕ ಜನರಿಗೆ ಮನವರಿಕೆ ಮಾಡಿಕೊಡುತ್ತಿದ್ದಾರೆ. ಅವರ ನೇರ ನಿಷ್ಠುರ ನುಡಿ ಹಾಗೂ ಸಾಧನೆಗಳೇ ಅವರಿಗೆ ನಿಜವಾದ ಚಿನ್ನದ ಪದಕಗಳಾಗಿವೆ ಎಂದರು. ಹೊಸದುರ್ಗ ತಾಲ್ಲೂಕಿನ 33 ಕೆರೆಗಳು ತುಂಬಿರುವುದರ ಹಿಂದೆ ಶ್ರೀಗಳ ಕಾಳಜಿಯೂ ಇದೆ ಎಂದು ಪ್ರಶಂಸಿಸಿದರು.

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ಆರ್ಥಿಕ ಬಡತನವಿರಬಹುದು. ಆದರೆ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯಲ್ಲಿ ಜಿಲ್ಲೆ ಅತ್ಯಂತ ಶ್ರೀಮಂತವಾಗಿದೆ. ಶಿವ ಸಂಚಾರ ನಾಟಕಗಳ ಮೂಲಕ ಸಮಾಜಕ್ಕೆ ದಿಕ್ಸೂಚಿ ನೀಡಿದವರು ಪಂಡಿತಾರಾಧ್ಯ ಶ್ರೀಗಳು. ರಾಜ್ಯ ಸರ್ಕಾರ ಮದ್ಯಪಾನ ನಿಷೇಧಿಸಿದರೆ ನಮ್ಮ ಸಂಪೂರ್ಣ ಬೆಂಬಲವಿದೆ. ರಾಜಕೀಯವಾಗಿ ಬೇರೆ ಬೇರೆ ಪಕ್ಷಗಳಲ್ಲಿದ್ದರೂ ಆರೋಗ್ಯಪೂರ್ಣ ಸಮಾಜ ನಿರ್ಮಾಣದ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು ಎಂದರು.

ಇದನ್ನೂ ಓದಿ: ಅಡಿಕೆ ಧಾರಣೆ | ನವೆಂಬರ್‌ 21 | ಯಾವ ಅಡಿಕೆಗೆ ಎಷ್ಟು ರೇಟು

ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ಕಲೆ, ಸಾಹಿತ್ಯ, ಸಂಗೀತ ಮತ್ತು ನಾಟಕಗಳಿಗಷ್ಟೇ ಸೀಮಿತವಾಗದೆ ಸಮಾಜ ಸುಧಾರಣೆಯಲ್ಲಿಯೂ ಅಪಾರ ಕೊಡುಗೆ ನೀಡಿದ್ದಾರೆ. ರಂಗಭೂಮಿಯ ಮೂಲಕ ಸಾಣೆಹಳ್ಳಿಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿದ ಕೀರ್ತಿ ಸಾಣೆಹಳ್ಳಿ ಮಠಕ್ಕೆ ಸಲ್ಲುತ್ತದೆ ಎಂದರು.

ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮಾತನಾಡಿ, ಪಂಡಿತಾರಾಧ್ಯ ಶ್ರೀಗಳು ಐವತ್ತು ವರ್ಷಗಳಿಂದ ಸ್ವಾಮೀಜಿಗಳಾಗಿ ಸೇವೆ ಸಲ್ಲಿಸುತ್ತಿರುವುದು ದೊಡ್ಡ ಸಾಧನೆ. ರಾಜಕಾರಣಿಗಳು ಮತ್ತು ಅಧಿಕಾರಿಗಳಿಗೆ ನಿವೃತ್ತಿಯಿದೆ. ಆದರೆ ಸಮಾಜ ಸೇವೆಯಲ್ಲಿ ತೊಡಗಿರುವ ಸ್ವಾಮೀಜಿಗಳಿಗೆ ನಿವೃತ್ತಿಯಿಲ್ಲ. ಶ್ರೀಗಳ ವ್ಯಕ್ತಿತ್ವದ ಮೇಲೆ ಯಾವುದೇ ಕಪ್ಪುಚುಕ್ಕೆ ಇಲ್ಲದಿರುವುದು ಸಂತಸದ ವಿಚಾರ ಎಂದರು.

ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ಮಾತನಾಡಿ, ಎಲೆಮರೆಯ ಕಾಯಿಯಂತಿರುವ ಸಾಧಕರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ನನಗೆ ಅತ್ಯಂತ ಸಂತೋಷ ತಂದಿದೆ. ಈ ಸಾಧಕರನ್ನು ಗೌರವಿಸುವುದು ನನ್ನನ್ನೇ ಸನ್ಮಾನಿಸಿದಷ್ಟು ಖುಷಿ ನೀಡಿದೆ. ವಯಸ್ಸಾಗುವುದು ದೊಡ್ಡದಲ್ಲ. ಬದುಕಿನ 75 ವರ್ಷಗಳಲ್ಲಿ ಮಾಡಿದ ಸತ್ಕಾರ್ಯ ಮತ್ತು ದುಷ್ಕಾರ್ಯಗಳ ಕುರಿತು ಆತ್ಮಾವಲೋಕನ ಮಾಡಿಕೊಂಡು ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆಯಬೇಕು. ಸನ್ಮಾನವು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಹೊರತು ಜವಾಬ್ದಾರಿಯಿಂದ ನುಣುಚಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಭದ್ರಾ ಮೇಲ್ದಂಡೆಗೆ 2 ಟಿಎಂಸಿ ನೀರಿನ ವಿಚಾರ | ನೀರಾವರಿ ಸಚಿವ ಚೆಲುವರಾಯಸ್ವಾಮಿ ಏನು ಹೇಳಿದ್ರು ?

ಸಾಧಕರಲ್ಲಿ ನಿಷ್ಠೆ, ಭಕ್ತಿ ಮತ್ತು ಪ್ರಾಮಾಣಿಕತೆ ಇರಬೇಕು. ಸಮಸ್ಯೆ ಹಾಗೂ ಸವಾಲುಗಳನ್ನು ಎದುರಿಸಿ ಜೀವನೋತ್ಸಾಹದಿಂದ ಮುಂದಿನ ಹೆಜ್ಜೆ ಇಡಬೇಕು. ಹಣವಿದ್ದವರೆಲ್ಲರೂ ಒಳ್ಳೆಯ ಕೆಲಸ ಮಾಡಲು ಸಾಧ್ಯವಿಲ್ಲ. ಇಂತಹ ಕಾರ್ಯಕ್ರಮಗಳನ್ನು ಜನಬಲದಿಂದ ಮಾತ್ರ ಯಶಸ್ವಿಗೊಳಿಸಲು ಸಾಧ್ಯ. ಕಾರ್ಯಕ್ರಮಕ್ಕೂ ಮುನ್ನ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಪುಸ್ತಕಗಳ ಹಾರ ಹಾಗೂ ರಾಜವೀರ ಮದಕರಿನಾಯಕ ಅವರಿಗೆ ಶಿವ ಸಂಚಾರದ 30 ವರ್ಷಗಳ ನಾಟಕಗಳನ್ನು ನೆನಪಿಸುವ ಪುಸ್ತಕಗಳ ಹಾರ ಸಮರ್ಪಿಸಿರುವುದು ವಿಶೇಷ ಎಂದರು.

ನಗರದ ರಂಗಮಂಟಪಕ್ಕೆ ತ.ರಾ.ಸು. ರಂಗಮಂದಿರ ಎಂದು ನಾಮಕರಣ ಮಾಡಲಾಗಿದೆ. ಕನಿಷ್ಠ ವೇದಿಕೆಗಾದರೂ ನಾಟಕಕಾರ ಸಿ.ಜಿ.ಕೆ. ಅವರ ಹೆಸರನ್ನು ನಾಮಕರಣ ಮಾಡಬೇಕು. ಇರುವಷ್ಟು ಕಾಲ ಜನಮುಖಿ ಕೆಲಸ ಮಾಡಬೇಕು. ಯೋಗ್ಯ ಸ್ವಾಮೀಜಿಯಾಗುವುದು ಸುಲಭವಲ್ಲ. ಬಸವಣ್ಣ ಮತ್ತು ಅಕ್ಕಮಹಾದೇವಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಸುಂದರ ಸಮಾಜ ನಿರ್ಮಾಣ ಸಾಧ್ಯ. ಪ್ರತಿಯೊಂದು ಕ್ಷೇತ್ರದಲ್ಲಿಯೂ ಒಳ್ಳೆಯವರು ಮತ್ತು ಕೆಟ್ಟವರು ಇರುತ್ತಾರೆ. ಆದರೆ ಪ್ರತಿಯೊಬ್ಬರೂ ಒಳ್ಳೆಯತನವನ್ನು ಜೀವನದಲ್ಲಿ ಪಾಲಿಸಬೇಕು ಎಂದು ತಿಳಿಸಿದರು.

ಬಸವಣ್ಣನವರು ಲೋಕ ಮೆಚ್ಚುವಂತಹ ಸತ್ಕಾರ್ಯಗಳನ್ನು ಮಾಡಿದ ಮಹಾನ್ ಶರಣರು. ಅಂತಹವರ ಕುರಿತು ರವಿ ಹಂಜೆ ಅವಹೇಳನಕಾರಿಯಾಗಿ ಮಾತನಾಡಿರುವುದು ಶರಣರಿಗೆ ಮಾಡಿದ ಅಪಮಾನವಾಗಿದೆ. ಲೇಖಕನ ತಲೆ ತೆಗೆದರೆ ಐದು ಲಕ್ಷ ರೂ. ನೀಡುವುದಾಗಿ ಯಾರೋ ಘೋಷಿಸಿರುವ ವಿಚಾರವೂ ಸರಿಯಲ್ಲ. ತಲೆ ತೆಗೆಯುವುದು ನಮ್ಮ ಕೆಲಸವಲ್ಲ, ತಲೆಯಲ್ಲಿರುವ ಕಸವನ್ನು ತೆಗೆಯಬೇಕು. ಸರ್ಕಾರ ಇಂತಹ ಕೃತಿಯನ್ನು ಮುಟ್ಟುಗೋಲು ಹಾಕಿರುವುದಷ್ಟೇ ಸಾಕಾಗುವುದಿಲ್ಲ. ರವಿ ಹಂಜೆ ಮತ್ತು ವಿಶ್ವೇಶ್ವರ ಭಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಲಂಚ ಕೇಳಿದ ಅಧಿಕಾರಿ ಬಲಿ ಹಾಕಿ | ಜಿಲ್ಲಾಧಿಕಾರಿಗೆ ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಕಾರ್ಯಕ್ರಮದಲ್ಲಿ ಆರ್ಥಿಕ ಚಿಂತಕ ಜಿ.ಎನ್.ಮಲ್ಲಿಕಾರ್ಜುನಪ್ಪ ಉಪನ್ಯಾಸ ನೀಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಮಾಜಿ ಶಾಸಕಿ ಆರ್.ಪೂರ್ಣಿಮಾ ಶ್ರೀನಿವಾಸ್, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಕಾಂಗ್ರೆಸ್ ಮುಖಂಡರಾದ ಬಿ.ಸೋಮಶೇಖರ್, ಎಸ್.ಎಂ.ಎಲ್.ತಿಪ್ಪೇಸ್ವಾಮಿ, ಹನುಮಲಿ ಷಣ್ಮುಖಪ್ಪ, ಶಂಕರಮೂರ್ತಿ, ಮದಕರಿನಾಯಕ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ಸಂದೀಪ್, ವಿ.ಎಲ್.ಪ್ರಶಾಂತ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್, ಉದ್ಯಮಿ ಅರುಣ್, ಅಹೋಬಲಪತಿ, ದರ್ಶನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaKannada NewsPanditaradhya Shivacharya SwamijiShiva Sanchar Puraskaraಕನ್ನಡ ನ್ಯೂಸ್ಚಿತ್ರದುರ್ಗಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಶಿವ ಸಂಚಾರ ಪುರಸ್ಕಾರ
Share This Article
Facebook Email Print
Previous Article ಕರಡಿ ದಾಳಿ ಅಡಿಕೆ ತೋಟದಲ್ಲಿದ್ದ ರೈತನ ಮೇಲೆ ಮೂರು ಕರಡಿಗಳ ದಾಳಿ | ರೈತನ ಸ್ಥಿತಿ‌ ಚಿಂತಾಜನಕ
Next Article ಸಂಸದ ಗೋವಿಂದ ಕಾರಜೋಳ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಿರಿಯೂರಲ್ಲಿ ಪುಂಗಿ ಊದಿದ್ದಾರೆ | ಸಂಸದ ಗೋವಿಂದ ಕಾರಜೋಳ
Leave a Comment

Leave a Reply Cancel reply

Your email address will not be published. Required fields are marked *

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಚಾಲನೆ
ಕುಮಟ – ಕಡಮಡಿಗಿ ರಸ್ತೆ ಅಭಿವೃದ್ಧಿಗೆ 4 ಕೋಟಿ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
ಮುಖ್ಯ ಸುದ್ದಿ
ಸಂಸದ ಗೋವಿಂದ ಕಾರಜೋಳ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಿರಿಯೂರಲ್ಲಿ ಪುಂಗಿ ಊದಿದ್ದಾರೆ | ಸಂಸದ ಗೋವಿಂದ ಕಾರಜೋಳ
ಮುಖ್ಯ ಸುದ್ದಿ
ಕರಡಿ ದಾಳಿ
ಅಡಿಕೆ ತೋಟದಲ್ಲಿದ್ದ ರೈತನ ಮೇಲೆ ಮೂರು ಕರಡಿಗಳ ದಾಳಿ | ರೈತನ ಸ್ಥಿತಿ‌ ಚಿಂತಾಜನಕ
ಹೊಳಲ್ಕೆರೆ
NPS – OPS ವಿಚಾರದಲ್ಲಿ ಸೂಕ್ತ ನಿರ್ಧಾರ | ಹಬ್ಬಕ್ಕೆ ಮುಂಗಡ 50 ಸಾವಿರ | ಡಿ.ಕೆ.ಶಿವಕುಮಾರ್
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up