CHITRADURGA NEWS | 24 NOVEMBER 2026
ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ನವೆಂಬರ್ 26ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ: ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ವಾರ್ಷಿಕ ಮಹಾಸಭೆ | 75 ವರ್ಷ ಪೂರೈಸಿದ 15 ಮಂದಿಗೆ ಸನ್ಮಾನ
ಈ ಮೇಳದಲ್ಲಿ 08 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ.
ಸಂದರ್ಶನವು ನವೆಂಬರ್ 26ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3ರವರೆಗೆ ಚಿತ್ರದುರ್ಗ ನಗರದ ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರ ಇರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ.
ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೊಮಾ, ಐಟಿಐ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.
ಆಸಕ್ತ ಅಭ್ಯರ್ಥಿಗಳು 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಮತ್ತು 3 ಭಾವಚಿತ್ರಗಳೊಂದಿಗೆ ಮೇಳದಲ್ಲಿ ಪಾಲ್ಗೊಳ್ಳಬೇಕು.
ಇದನ್ನೂ ಓದಿ: ನ. 25 ರಂದು ಚಿತ್ರದುರ್ಗದಲ್ಲಿ ದಾಳಿಂಬೆ ಕೃಷಿ ವಿಚಾರ ಸಂಕಿರಣ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಅಥವಾ ದೂರವಾಣಿ ಸಂಖ್ಯೆಗಳಾದ 7022459064, 8105619020, 9945587060, 9964528212, 7019755147 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

