By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕನಕದಾಸರ ತತ್ವಗಳು ಆಡಳಿತ ವ್ಯವಸ್ಥೆಗೆ ದಾರಿದೀಪ | ಸಚಿವ ಟಿ.ರಘುಮೂರ್ತಿ
    26 minutes ago
    ಜಿಲ್ಲಾದ್ಯಂತ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ | ಜಿಲ್ಲಾಧಿಕಾರಿ ಎಸ್.ರಮ್ಯಾ
    23 hours ago
    Municipal Council
    ಚಿತ್ರದುರ್ಗ ನಗರಸಭೆ 2027-28ನೇ ಸಾಲಿನ ಬಜೆಟ್ ಸಿದ್ಧತೆಗೆ ನ.30ರಂದು ಸಭೆ
    1 day ago
    ನವೋದಯ ವಿದ್ಯಾಲಯ
    ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ನ.28ರಂದು ನವೋದಯ ಪರೀಕ್ಷೆ
    1 day ago
    ಚಿತ್ರದುರ್ಗ ರೈಲು ನಿಲ್ದಾಣದಲ್ಲಿ ನಿಲ್ದಾಣ ಮಹೋತ್ಸವ ಆಚರಣೆ
    ಚಿತ್ರದುರ್ಗ ರೈಲು ನಿಲ್ದಾಣದಲ್ಲಿ ನಿಲ್ದಾಣ ಮಹೋತ್ಸವ ಆಚರಣೆ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಅಕ್ರಮ ಸಂಬಂಧಕ್ಕೆ ಅಡ್ಡಿ | ಪತಿಯ ಹತ್ಯೆ | ಅತ್ತೆ, ಪ್ರಿಯಕರ, ಪತ್ನಿ ಬಂಧನ
    1 week ago
    ಜಿಲ್ಲಾಸ್ಪತ್ರೆ
    ಚಿಕಿತ್ಸೆಗಾಗಿ ದಾಖಲಾಗಿದ್ದ ಅನಾಮಧೇಯ ವ್ಯಕ್ತಿ ಸಾವು | ಗುರುತು ಪತ್ತೆಗೆ ಮನವಿ
    2 weeks ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    4 weeks ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 months ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ನವೆಂಬರ್‌ 24 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 23 ನವೆಂಬರ್‌ | ಚನ್ನಗಿರಿ, ಶಿವಮೊಗ್ಗ, ಸಾಗರ ಸೇರಿ ರಾಜ್ಯದ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 21 | ಯಾವ ಅಡಿಕೆಗೆ ಎಷ್ಟು ರೇಟು
    6 days ago
    arecanut price list
    ಚನ್ನಗಿರಿ, ತೀರ್ಥಹಳ್ಳಿ, ಶಿವಮೊಗ್ಗ ಸೇರಿ ರಾಜ್ಯದ ಅಡಿಕೆ ಧಾರಣೆ
    1 week ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 19 | ತೀರ್ಥಹಳ್ಳಿ, ದಾವಣಗೆರೆ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    1 week ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ನವೆಂಬರ್ 27 | ಶ್ರಮಕ್ಕೆ ತಕ್ಕ ಫಲ, ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು
    11 hours ago
    today bhavishya
    ದಿನ ಭವಿಷ್ಯ | 26 ನವೆಂಬರ್ | ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆಗಳು, ಹಠಾತ್ ಆರ್ಥಿಕ ಲಾಭ
    1 day ago
    today bhavishya
    ದಿನ ಭವಿಷ್ಯ | ನವೆಂಬರ್ 25 | ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ, ಅನಾರೋಗ್ಯದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ನವೆಂಬರ್ 24 | ವ್ಯಾಪಾರದಲ್ಲಿ ಹೊಸ ಹೂಡಿಕೆ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | 23 ನವೆಂಬರ್ | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ನವೆಂಬರ್ 26 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ನವೆಂಬರ್ 25 | ರಾಗಿ, ಮೆಕ್ಕೆಜೋಳ, ಸೂರ್ಯಕಾಂತಿ ರೇಟ್…..
    2 days ago
    ಮಾರುಕಟ್ಟೆ ಧಾರಣೆ | ನವೆಂಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…..
    6 days ago
    ಮಾರುಕಟ್ಟೆ ಧಾರಣೆ | ನವೆಂಬರ್ 20 | ರಾಗಿ, ಸೂರ್ಯಕಾಂತಿ, ಕಡಲೆಕಾಳು ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಕರಡಿ ದಾಳಿ
    ಅಡಿಕೆ ತೋಟದಲ್ಲಿದ್ದ ರೈತನ ಮೇಲೆ ಮೂರು ಕರಡಿಗಳ ದಾಳಿ | ರೈತನ ಸ್ಥಿತಿ‌ ಚಿಂತಾಜನಕ
    5 days ago
    ಅಧಿಕಾರವೆಂಬುದು ಸ್ವಂತಕ್ಕಲ್ಲ, ಜನಸೇವೆಗಾಗಿ | ಶಾಸಕ ಡಾ.ಎಂ.ಚಂದ್ರಪ್ಪ
    6 days ago
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 months ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ex cm Basavaraj bommai
    ಸುಳ್ಳು ಆಶ್ವಾಸನೆಗಳಿಂದ ಹಿರಿಯೂರಿನ ಅಭಿವೃದ್ಧಿ ಆಗಲ್ಲ | ಬಸವರಾಜ ಬೊಮ್ಮಾಯಿ
    7 days ago
    BJP LEADER C.T.RAVI
    ಹಿರಿಯೂರು ಉಪಚುನಾವಣೆ | ಬಿಜೆಪಿ – ಜೆಡಿಎಸ್‌ ನಡುವೆ ಗೊಂದಲ ಇಲ್ಲ | ಎನ್‌ಡಿಎ ಅಭ್ಯರ್ಥಿ ಕಣಕ್ಕೆ | ಸಿ.ಟಿ.ರವಿ
    7 days ago
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 months ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    5 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    4 weeks ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    4 weeks ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    4 weeks ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    1 month ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    1 month ago
Reading: ಕನಕದಾಸರ ತತ್ವಗಳು ಆಡಳಿತ ವ್ಯವಸ್ಥೆಗೆ ದಾರಿದೀಪ | ಸಚಿವ ಟಿ.ರಘುಮೂರ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕನಕದಾಸರ ತತ್ವಗಳು ಆಡಳಿತ ವ್ಯವಸ್ಥೆಗೆ ದಾರಿದೀಪ | ಸಚಿವ ಟಿ.ರಘುಮೂರ್ತಿ

News Desk Chitradurga News
Last updated: 27 November 2026 18:48
News Desk Chitradurga News
26 minutes ago
Share
SHARE

CHITRADURGA NEWS | 27 November 2026

ಚಿತ್ರದುರ್ಗ: 12ನೇ ಶತಮಾನದಲ್ಲಿ ವಚನ ಸಾಹಿತ್ಯ ಚಳವಳಿ ನಡೆದಂತೆಯೇ, 16ನೇ ಶತಮಾನದಲ್ಲಿ ಕನಕದಾಸರು ತಮ್ಮ ದಾಸ ಸಾಹಿತ್ಯ ಮತ್ತು ಕೀರ್ತನೆಗಳ ಮೂಲಕ ಸಮಾಜದ ಎಲ್ಲ ವರ್ಗದ ಜನಸಾಮಾನ್ಯರನ್ನು ತಲುಪುವ ಮಹತ್ತರ ಕಾರ್ಯ ಮಾಡಿದ್ದಾರೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಬಣ್ಣಿಸಿದರು.

ಇದನ್ನೂ ಓದಿ: ಜಿಲ್ಲಾದ್ಯಂತ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ | ಜಿಲ್ಲಾಧಿಕಾರಿ ಎಸ್.ರಮ್ಯಾ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ರಾಜರಾಗಿದ್ದ ಕನಕದಾಸರು ನಂತರ ದಾಸರಾಗಿ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಉಡುಪಿಯ ಕನಕನ ಕಿಂಡಿಯಂತಹ ಐತಿಹಾಸಿಕ ಘಟನೆಗಳ ಮೂಲಕ ಅವರು ತಮ್ಮ ಭಕ್ತಿಯ ಶ್ರೇಷ್ಠತೆಯನ್ನು ಜಗತ್ತಿಗೆ ಸಾರಿದ್ದಾರೆ. ಅವರ ವಚನಗಳು ಮತ್ತು ಕೃತಿಗಳ ಆಶಯಗಳನ್ನು ನಮ್ಮ ಆಡಳಿತ ವ್ಯವಸ್ಥೆಯಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದರು.

ಹಿಂದುಳಿದ ಸಮಾಜದಿಂದ ಬಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸುದೀರ್ಘ ಅವಧಿಗೆ ಆಡಳಿತ ನಡೆಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ದಿವಂಗತ ದೇವರಾಜ ಅರಸು ಅವರ ನಂತರ, ಬಸವಣ್ಣ ಹಾಗೂ ಕನಕದಾಸರ ತತ್ವಗಳನ್ನು ಆಡಳಿತದಲ್ಲಿ ಅಳವಡಿಸಿಕೊಂಡು ಅನೇಕ ಜನಪರ ಯೋಜನೆಗಳನ್ನು ನೀಡಿದ್ದಾರೆ. ಹಿಂದುಳಿದ ಸಮಾಜದವರಾಗಿ 17 ಬಾರಿ ರಾಜ್ಯ ಬಜೆಟ್ ಮಂಡಿಸಿರುವುದು ಹೆಮ್ಮೆಯ ಸಂಗತಿ ಎಂದು ಶ್ಲಾಘಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 26 | ಹತ್ತಿ ರೇಟ್ ಎಷ್ಟಿದೆ?

ಚಿತ್ರದುರ್ಗ ನಗರದಲ್ಲಿ ಕನಕ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಮಾಜದ ಮುಖಂಡರು ಬೇಡಿಕೆಗಳಿಗೆ ಸ್ಪಂದಿಸಿದ ಸಚಿವರು, ಕನಕ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ಬಿಡುಗಡೆ ಮಾಡಿಸಲಾಗುವುದು. ಜಿಲ್ಲಾಡಳಿತದ ಮೂಲಕ ಸಮಾಜಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಜಿಲ್ಲಾಧಿಕಾರಿ ಎಸ್.ರಮ್ಯಾ ಮಾತನಾಡಿ, ಕನಕದಾಸರು ಇಂದಿನ ಆಡಳಿತ ವ್ಯವಸ್ಥೆಗೆ ಹೇಗೆ ಪ್ರಸ್ತುತ ಎಂಬುದನ್ನು ನಾವು ಅರಿಯಬೇಕಿದೆ. ಅವರು ರಚಿಸಿರುವ ಕೀರ್ತನೆಗಳು ಕೇವಲ ಸಾಹಿತ್ಯವಲ್ಲ, ಅವು ನಮ್ಮ ದೈನಂದಿನ ಬದುಕು ಮತ್ತು ವೃತ್ತಿಜೀವನಕ್ಕೆ ಮಾರ್ಗದರ್ಶಿ ಸೂತ್ರಗಳಾಗಿವೆ ಎಂದು ಅಭಿಪ್ರಾಯಪಟ್ಟರು.

ಕನಕದಾಸರ ಕೀರ್ತನೆಗಳ ಸಾಲುಗಳನ್ನು ಉಲ್ಲೇಖಿಸಿದ ಜಿಲ್ಲಾಧಿಕಾರಿ ಎಸ್.ರಮ್ಯಾ, ‘ಕುಳಿತ ಸಭೆಯೊಳಗೆ ಕುಟಿಲ ನಡೆಸಲು ಬೇಡ’ ಎಂದು ದಾಸರು ಅಂದೇ ಹೇಳಿದ್ದಾರೆ. ನಮ್ಮ ಕಚೇರಿಗಳಲ್ಲಿ ಸಹೋದ್ಯೋಗಿಗಳ ವಿರುದ್ಧ ಪಿತೂರಿ ನಡೆಸುವುದು, ಎತ್ತಿಕಟ್ಟುವುದು ಸಲ್ಲದು. ಹಾಗೆಯೇ, “ಒಳ್ಳೆಯವನು ನಾನೆಂಬ ಬಲು ಹೆಮ್ಮೆಯಲಿ ಇರಬೇಡ” ಎಂಬಂತೆ, ನಾವು ತುಂಬಾ ಪ್ರಾಮಾಣಿಕರು, ದಕ್ಷರು ಎಂಬ ಅಹಂಕಾರವೂ ಅಧಿಕಾರಿಗಳಿಗೆ ಇರಬಾರದು’ ಎಂದರು.

ಇದನ್ನೂ ಓದಿ: ಚಿತ್ರದುರ್ಗ ನಗರಸಭೆ 2027-28ನೇ ಸಾಲಿನ ಬಜೆಟ್ ಸಿದ್ಧತೆಗೆ ನ.30ರಂದು ಸಭೆ

ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ಮನುಷ್ಯ ತನ್ನೊಳಗಿನ ‘ನಾನು’ ಎಂಬ ಅಹಂಕಾರ ತೊರೆದಾಗ ಮಾತ್ರ ಸಮಾಜದಲ್ಲಿ ಉತ್ತಮ ಸ್ಥಾನ ಹಾಗೂ ಸಾರ್ಥಕ ಬದುಕು ಕಂಡುಕೊಳ್ಳಲು ಸಾಧ್ಯ. ಕನಕದಾಸರು ಇಡೀ ಮನುಕುಲಕ್ಕೆ ನೀಡಿದ ಈ ಸಂದೇಶ ಸಾರ್ವಕಾಲಿಕ ಎಂದು ಅಭಿಪ್ರಾಯಪಟ್ಟರು.

ಅಧಿಕಾರ, ಐಶ್ವರ್ಯ, ಶಕ್ತಿ, ಕುಲದ ಬಗೆಗಿನ ಅಹಂಕಾರ ಮನುಷ್ಯನನ್ನು ದಾರಿ ತಪ್ಪಿಸುತ್ತದೆ. ಕನಕದಾಸರು ತಮ್ಮ ಕೀರ್ತನೆಗಳು ಮತ್ತು ಬದುಕಿನ ಮೂಲಕ ಅಹಂಕಾರವನ್ನು ತ್ಯಜಿಸುವ ಪಾಠ ಕಲಿಸಿದ್ದಾರೆ ಎಂದು ತಿಳಿಸಿದ ಅವರು, ಸರ್ಕಾರದ ಸೌಲಭ್ಯಗಳ ಜೊತೆಗೆ, ಸಮಾಜದ ಸ್ಥಿತಿವಂತರು ಸೇರಿ ಕನಕದಾಸರ ಹೆಸರಿನಲ್ಲಿ ‘ರಿವಾಲ್ವಿಂಗ್ ಫಂಡ್’ ಸ್ಥಾಪಿಸುವ ಮೂಲಕ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಈ ನಿಧಿಯನ್ನು ಬಳಸುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಜಿಲ್ಲಾ ಕುರುಬರ ಸಂಘದ ಕಾರ್ಯದರ್ಶಿ ಬಿ.ಟಿ.ಜಗದೀಶ್ ಮಾತನಾಡಿ, ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ, ಈ ಬಾರಿ ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಅತ್ಯಂತ ಸರಳ ಆಚರಣೆಗೆ ಸೀಮಿತಗೊಳಿಸಲಾಗಿದೆ ಎಂದರು.

ಇದನ್ನೂ ಓದಿ: ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ನ.28ರಂದು ನವೋದಯ ಪರೀಕ್ಷೆ

ಜಿಲ್ಲಾ ಕೇಂದ್ರ ಚಿತ್ರದುರ್ಗ ನಗರದಲ್ಲಿ ಕನಕ ಸಮುದಾಯ ಭವನ ನಿರ್ಮಿಸಲು ಒಂದು ಎಕರೆ ಭೂಮಿ ಮಂಜೂರು ಮಾಡುವಂತೆ ಹಿಂದಿನಿಂದಲೂ ಮನವಿ ಮಾಡಲಾಗಿತ್ತು. ಅದರಂತೆ ಸರ್ಕಾರ ಭೂಮಿ ಮಂಜೂರು ಮಾಡಿ, ರೂ.1.93 ಕೋಟಿ ಮಾರುಕಟ್ಟೆ ದರ ನಿಗದಿಪಡಿಸಿದೆ. ಆದರೆ, ಹಿಂದುಳಿದ ನಮ್ಮ ಸಮುದಾಯಕ್ಕೆ ಇಷ್ಟು ದೊಡ್ಡ ಮೊತ್ತ ಭರಿಸಲು ಆರ್ಥಿಕ ಶಕ್ತಿ ಇಲ್ಲ. ಆದ್ದರಿಂದ, ಶೇ. 10ರಷ್ಟು ರಿಯಾಯಿತಿ ದರದಲ್ಲಿ ಭೂಮಿ ಮಂಜೂರು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಸಚಿವ ಟಿ.ರಘುಮೂರ್ತಿ ಅವರಿಗೆ ಮನವಿ ಮಾಡಿದರು.

ಸರ್ಕಾರ ಈಗಾಗಲೇ ಸಮುದಾಯದ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣಕ್ಕೆ ರೂ.3 ಕೋಟಿ ಹಾಗೂ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ರೂ.50 ಲಕ್ಷ ಅನುದಾನ ಬಿಡುಗಡೆ ಮಾಡಿರುವುದಕ್ಕೆ ಅವರು ಕೃತಜ್ಞತೆ ಸಲ್ಲಿಸಿದ ಅವರು, ನಗರದ ಸಂಗೊಳ್ಳಿ ರಾಯಣ್ಣ ವೃತ್ತವು ಕಿರಿದಾಗಿದ್ದು, ಸಾಧ್ಯವಾದಷ್ಟು ವೃತ್ತವನ್ನು ಅಗಲೀಕರಣಗೊಳಿಸಿ, ಪ್ರತಿಮೆಗೆ ಸೂಕ್ತ ಭದ್ರತೆ ಒದಗಿಸಬೇಕು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಸಮುದಾಯದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕು ಹಾಗೂ ಸಾರಥಿ ಯೋಜನೆಯಡಿ ಹೆಚ್ಚಿನ ವಾಹನಗಳು ಮತ್ತು ನೇರ ಸಾಲ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ಕನ್ನಡ ವಿಷಯ ಪರಿವೀಕ್ಷಕ ಸಿ.ರಂಗನಾಯಕ್ ಉಪನ್ಯಾಸ ನೀಡಿ, ದಾಸಶ್ರೇಷ್ಠ ಕನಕದಾಸರು ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ಮಹಾ ಮಾನವತಾವಾದಿ ಹಾಗೂ ವೈಚಾರಿಕ ಚಿಂತಕರು ಎಂದು ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗ ರೈಲು ನಿಲ್ದಾಣದಲ್ಲಿ ನಿಲ್ದಾಣ ಮಹೋತ್ಸವ ಆಚರಣೆ

ಮೋಹನ ತರಂಗಿಣಿ, ಹರಿಭಕ್ತಿಸಾರ, ನಳಚರಿತ್ರೆ ಹಾಗೂ ರಾಮಧಾನ್ಯ ಚರಿತೆಯಂತಹ ಮಹೋನ್ನತ ಕೃತಿಗಳ ಜೊತೆಗೆ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳನ್ನು ರಚಿಸಿ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ಸತ್ಯವಂತರ ಸಂಗವಿರಲು ತೀರ್ಥವೇಕೆ ಎಂಬ ಕನಕದಾಸರ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು, ಜಾತಿ-ಮತ ಮೀರಿದ ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಸ್.ಶ್ರೀರಾಮ್, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಕೆ.ಓಂಕಾರಪ್ಪ ಸೇರಿದಂತೆ ಮತ್ತಿತರರು ಇದ್ದರು. ಗಂಗಾಧರ್ ಮತ್ತು ತಂಡದವರು ಗೀತಗಾಯನ ನಡೆಸಿಕೊಟ್ಟರು.

TAGGED:ChitradurgaKanakadasa JayantiKannada NewsMinister T. Raghumurthyಕನಕದಾಸ ಜಯಂತಿಕನ್ನಡ ನ್ಯೂಸ್ಚಿತ್ರದುರ್ಗಸಚಿವ ಟಿ. ರಘುಮೂರ್ತಿ
Share This Article
Facebook Email Print
Previous Article today bhavishya ದಿನ ಭವಿಷ್ಯ | ನವೆಂಬರ್ 27 | ಶ್ರಮಕ್ಕೆ ತಕ್ಕ ಫಲ, ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು
Leave a Comment

Leave a Reply Cancel reply

Your email address will not be published. Required fields are marked *

Gravatar profile

today bhavishya
ದಿನ ಭವಿಷ್ಯ | ನವೆಂಬರ್ 27 | ಶ್ರಮಕ್ಕೆ ತಕ್ಕ ಫಲ, ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು
Dina Bhavishya
ಜಿಲ್ಲಾದ್ಯಂತ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ | ಜಿಲ್ಲಾಧಿಕಾರಿ ಎಸ್.ರಮ್ಯಾ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ನವೆಂಬರ್ 26 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Municipal Council
ಚಿತ್ರದುರ್ಗ ನಗರಸಭೆ 2027-28ನೇ ಸಾಲಿನ ಬಜೆಟ್ ಸಿದ್ಧತೆಗೆ ನ.30ರಂದು ಸಭೆ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ

© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up