
CHITRADURGA NEWS | 04 JANUARY 2026
ಚಿತ್ರದುರ್ಗ: ಮುಂದಿನ ತಿಂಗಳ ಒಳಗಾಗಿ ಚಿತ್ರದುರ್ಗ ತಾಲೂಕಿನ ಗೋನೂರು ವರೆಗೆ ಭದ್ರಾ ನೀರು ಹರಿಸುವುದು ನಮ್ಮ ಗುರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.
ಇಂದು ಬೆಳಗ್ಗೆ ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗೀನ ಅರ್ಪಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಾಯೋಗಿಕವಾಗಿ ಗೋನೂರು ಮೇಲ್ಗಾಲುವೆ ವರೆಗೆ ನೀರು ಹರಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 03 | ಹತ್ತಿ ರೇಟ್ ಎಷ್ಟಿದೆ?
ಕಳೆದ ವರ್ಷ ಜನವರಿಯಲ್ಲಿ ಇದೇ ರೀತಿಯಲ್ಲಿ ಬಾಗೀನ ಅರ್ಪಿಸಲಾಗಿತ್ತು. ಈ ವರ್ಷ ಕಾರಣಾಂತರಗಳಿಂದ ಜಿಲ್ಲೆಯ ಎಲ್ಲ ಶಾಸಕರು ಸೇರಿ ಬಾಗೀನ ಅರ್ಪಿಸಿದ್ದವು.
ಇವತ್ತಿಗೂ ಕೋಡಿಯಲ್ಲಿ ಸಣ್ಣದಾಗಿ ನೀರು ಹರಿಯುತ್ತಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಹ್ವಾನಿಸಬೇಕು ಎನ್ನುವ ಕಾರಣಕ್ಕೆ ಬಾಗೀನ ತಡವಾಗಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಭೀಮಸಮುದ್ರ, ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್
ವಿವಿ ಸಾಗರದ ಹಿನ್ನೀರು ಭಾಗದ ಹೊಸದುರ್ಗದ ರೈತರಿಗೆ ಪರಿಹಾರ ವಿತರಣೆಗೆ ತಯಾರಿ ಮಾಡಿಕೊಳ್ಳಲಾಗಿದೆ.
ಹೊಸದುರ್ಗ ತಾಲೂಕಿನ 920 ರೈತರಿಗೆ ಪರಿಹಾರ ವಿತರಣೆ ಮಾಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಹಿಂಭಾಗದ ರಸ್ತೆ, ಸೇತುವೆ ರಿಪೇರಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಚಿತ್ರದುರ್ಗ ಮೆಡಿಕಲ್ ಕಾಲೇಜು | ಅಲೈಡ್ ಹೆಲ್ತ್ ಸೈನ್ಸ್, ಫಿಜಿಯೋಥೆರಪಿ ಕೋರ್ಸ್ | ಮೆರಿಟ್ ಅಧಾರದ ಮೇಲೆ ಸೀಟುಗಳ ಭರ್ತಿ
ಈ ವೇಳೆ ಶಾಸಕರಾದ ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಸಫಾಯು ಕರ್ಮಚಾರಿ ಆಯೋಗದ ಸದಸ್ಯ ಪಿ.ರಘು, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಸಿಇಓ ಡಾ.ಎಸ್.ಆಕಾಶ್, ಭದ್ರಾ ಮೇಲ್ದಂಡೆ ಯೋಜನೆ ಅಧಿಕಾರಿಗಳು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
