ಹೊಸದುರ್ಗ
ಜಮೀನಿಗೆ ತೆರಳಿದ್ದ ರೈತನ ಮೇಲೆ ಕರಡಿ ದಾಳಿ | ಮುಖ ಕಣ್ಣು, ಕಿವಿ ಭಾಗಕ್ಕೆ ಪರಚಿ ಗಾಯ

CHITRADURGA NEWS | 10 JUNE 2024
ಹೊಸದುರ್ಗ: ಹೊಸದುರ್ಗ ತಾಲೂಕಿನಲ್ಲಿ ದಿನೇ ದಿನೇ ಕರಡಿಗಳ ಉಪಟಳ ಹೆಚ್ಚಾಗಿದ್ದು ಹಾಡ ಹಗಲೇ ಪಟ್ಟಣ, ಗ್ರಾಮ, ಮಠಗಳ ಬಳಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿವೆ.
ಇಂದು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದು, ಜಮೀನಿಗೆ ತೆರಳಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿದ್ದು, ಮುಖ, ಕಣ್ಣು, ಕಿವಿ, ಎದೆ ಭಾಗಕ್ಕೆ ಪರಚಿ ಗಂಭೀರ ಗಾಯಗೊಳಿಸಿದೆ.
ಇದನ್ನೂ ಓದಿ: ಕೆರೆ ಏರಿ ಮೇಲೆ ಲಾರಿ ಪಲ್ಟಿ | ಮದ್ಯದ ಬಾಟಲ್‌ಗಳು ಚೆಲ್ಲಾಪಿಲ್ಲಿ
ಯಲಕ್ಕಪ್ಪನಹಟ್ಟಿ ಸಮೀಪದ ಸಿದ್ದಪ್ಪನಬೆಟ್ಟದ ಬಳಿಯಿರುವ ಜಮೀನಿಗೆ ತೆರಳಿದ್ದ ವೇಳೆ ಕರಡಿ ಏಕಾಏಕಿ ದಾಳಿ ಮಾಡಿದೆ.
ಹೆರೂರು ಮೂಲದ ದಿನೇಶ್ ಎಂಬುವವರ ಮೇಲೆ ಹೊಸದುರ್ಗ ಪಟ್ಟಣಕ್ಕೆ ಸಮೀಪದ ಯಲಕ್ಕಪ್ಪನಹಟ್ಟಿ ಬಳಿ ಕರಡಿ ದಾಳಿ ನಡೆಸಿ ಗಾಯಗೊಳಿಸಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಮಾಣವಚನ | ಕೋಟೆನಾಡಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಆದರೆ, ಹೆಚ್ಚಿನ ಚಿಕಿತ್ಸೆಗಾಗಿ ಗಂಭೀರವಾಗಿ ಗಾಯಗೊಂಡಿರುವ ದಿನೇಶ್ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆಯಿಂದ ತಾಲೂಕಿನ ಜನತೆ ಬೆಚ್ಚಿ ಬಿದ್ದಿದ್ದಾರೆ.
ಹೊಸದುರ್ಗ ತಾಲೂಕಿನ ಬಹುತೇಕ ಗ್ರಾಮೀಣ ಭಾಗದಲ್ಲಿ ಆಗಾಗ ಕರಡಿಗಳು ಕಾಣಿಸಿಕೊಳ್ಳುವುದು, ರೈತರಿಗೆ ತೊಂದರೆ ಮಾಡುವುದು ನಡೆಯುತ್ತಲೇ ಇದೆ.
ಇದನ್ನೂ ಓದಿ: ಗಿಡ ನೆಟ್ಟರೆ ತಾಪಮಾನ ಇಳೆಯುತ್ತೆ, ಮಳೆ ಹೆಚ್ಚಾಗುತ್ತೆ | ಎಂ.ಸಿ.ರಘುಚಂದನ್
ಈ ಬಗ್ಗೆ ಸಾರ್ವಜನಿಕರು ಅರಣ್ಯ ಇಲಾಖೆಗೆ ಅನೇಕ ಸಲ ದೂರು ನೀಡಿ, ಕರಡಿಗಳು ಬಂದಾಗ ಮಾಹಿತಿ ನೀಡಿದರೂ, ಹಿಡಿದು ದೂರ ಸಾಗಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಲೇ ಇಂದು ದಿನೇಶ್ ಎಂಬುವವರ ಮೇಲೆ ಕರಡಿಯಿಂದ ದಾಳಿಯಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಇದನ್ನೂ ಓದಿ: ದೇಸಿ ಪ್ರಮಾಣ ಪತ್ರ ವಿತರಣೆ | ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಭಾಗಿ
ಹೊಸದುರ್ಗ ಪಟ್ಟಣದಲ್ಲಿರುವ ಕುಂಚಿಟಿಗ ಮಹಾಸಂಸ್ಥಾನ ಮಠದ ಆವರಣದಲ್ಲಿ ವಾರಕ್ಕೊಮ್ಮೆಯಾದರೂ ಕರಡಿ ಕಾಣಿಸಿಕೊಳ್ಳುತ್ತಿವೆ. ಇಲ್ಲಿ ನಿತ್ಯ ಬೆಳಗ್ಗೆ ಮತ್ತು ಸಂಜೆ ವಾಯು ವಿಹಾರ ಮಾಡುವ ನಾಗರೀಕರು, ಮಠದ ಶ್ರೀ ಶಾಂತವೀರ ಸ್ವಾಮೀಜಿ ಅರಣ್ಯ ಇಲಾಖೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.
