CHITRADURGA NEWS | 05 MAY 2026
ಚಿತ್ರದುರ್ಗ: ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮವನ್ನು ನಾಡಿನ ಮೂಲೆ ಮೂಲೆಗೂ ತಲುಪಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ಅಭಿಮಾನಿ ಛಲವಾದಿ ಕರಿಯಪ್ಪ ಬೈಕ್ ಯಾತ್ರೆ ಹೊರಟಿದ್ದಾರೆ.
ಇದನ್ನೂ ಓದಿ: ಮೆದೇಹಳ್ಳಿಯ ಎಚ್.ಎಂ.ಶರಣೇಂದ್ರಪ್ಪ ನಿಧನ
ಮೇ. 9 ರಂದು ಚಿತ್ರದುರ್ಗ ನಗರದ ಹೊರವಲಯದ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ನಡೆಯಲಿರುವ ಅಭಿಮಾನೋತ್ಸವ ಸಂದೇಶವನ್ನು ಬೈಕಿನಲ್ಲಿ ಸಂಚರಿಸಿ ಪ್ರತಿ ಜಿಲ್ಲೆಗೂ ತಲುಪಿಸಲು ಯಳನಾಡು ಮೂಲದ ವಕೀಲಿ ವೃತ್ತಿ ಮಾಡುತ್ತಿರುವ ಕರಿಯಣ್ಣ ಹೊರಟಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ನಾನು ವಿದ್ಯಾರ್ಥಿ ಆಗಿದ್ದೆ. ಆಗ ಅವರು ನೀಡಿದ್ದ ಸೈಕಲ್ ಪಡೆದುಕೊಂಡಿದ್ದೆ. ಇದೇ ವೇಳೆ ಹೆಣ್ಣು ಮಕ್ಕಳು ಪೋಷಕರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕೆ ಭಾಗ್ಯಲಕ್ಷ್ಮೀ ಯೋಜನೆ ರೂಪಿಸಿದ್ದರು. ಕುಡಿಯವ ನೀರಿನ ಸಮಸ್ಯೆಯಿಂದ ಬಳಲುತ್ತಿರುವ ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆ ಮಂಜೂರು ಮಾಡಿದವರು ಎಂಬ ಅಭಿಮಾನ ಹಾಗೂ ಪ್ರೀತಿಯಿಂದ ಈ ಯಾತ್ರೆ ಹೊರಟಿದ್ದೇನೆ ಎಂದು ತಿಳಿಸಿದ್ದಾರೆ.
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಯೋಜನೆ ಜಾರಿ ಮಾಡುವಲ್ಲೂ ಯಡಿಯೂರಪ್ಪ ಅವರ ಪಾತ್ರವಿದೆ. ರೈತರಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ ಎಂದು ಕರಿಯಣ್ಣ ತಿಳಿಸಿದ್ದಾರೆ.
ಇದನ್ನೂ ಓದಿ: ಬೆಳೆ ವಿಮೆ ಬಿಡುಗಡೆ ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ | ರೈತ ಸಂಘ ಎಚ್ಚರಿಕೆ
ಈ ಹಿನ್ನೆಲೆಯಲ್ಲಿ ರಾಜ್ಯದ 31 ಜಿಲ್ಲೆಗಳನ್ನು ಸುಮಾರು 4500 ಕಿ,ಮೀನ್ನು ಎಂಟು ದಿನಗಳಲ್ಲಿ ಪೂರ್ಣಗೊಳಿಸಿ ಮೇ.9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಯಡಿಯೂರಪ್ಪನವರ ಅಭಿಮಾನೋತ್ಸವಕ್ಕೆ ಆಗಮಿಸುವಂತೆ ಜನರಿಗೆ ಮನವಿ ಮಾಡಲಾಗುವುದು ಎಂದರು.
ಮೇ.2 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಯೇಂದ್ರ ಅವರು ಮೈಸೂರಿನ ಸುತ್ತೂರು ಮಠದಲ್ಲಿ ನನ್ನ ಯಾತ್ರೆಗೆ ಚಾಲನೆಯನ್ನು ನೀಡಿದ್ದಾರೆ.
ಈಗಾಗಲೇ ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮಾರ್ಗವಾಗಿ ಇಂದು ಚಿತ್ರದುರ್ಗ ತಲುಪಿದ್ದೇನೆ. ಮುಂದೆ ದಾವಣಗೆರೆ, ಹಾವೇರಿ ಮೂಲಕ ಉಳಿದ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಮೇ.9ಕ್ಕೆ ಚಿತ್ರದುರ್ಗಕ್ಕೆ ಮರಳಿದ್ದೇನೆ. ನಾನು ಹೋದ ಎಲ್ಲ ಜಿಲ್ಲೆಗಳಲ್ಲೂ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನಿಗಳು ಪ್ರೀತಿಯಿಂದ ಸ್ವಾಗತಿಸಿದ್ದಾರೆ ಕರಿಯಪ್ಪ ತಿಳಿಸಿದರು.
ಇದನ್ನೂ ಓದಿ: ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘಕ್ಕೆ ಚುನಾವಣೆ | ಮೇ.8ಕ್ಕೆ ಮತಪಟ್ಟಿ ಪ್ರಕಟ
ಈ ವೇಳೆ ಬಿಜೆಪಿ ಜಿಲ್ಲಾ ಮಾಧ್ಯಮ ವಕ್ತಾರ ನಾಗರಾಜ್ ಬೇದ್ರೇ, ಕಾರ್ಯಕರ್ತ ಯಶವಂತ ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
