ಮುಖ್ಯ ಸುದ್ದಿ
ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ದಿಟ್ಟ ಹೆಜ್ಜೆ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
CHITRADURGA NEWS | 03 MARCH 2024
ಚಿತ್ರದುರ್ಗ : ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಾಣ ಮಾಡಲು ದಿಟ್ಟ ಹೆಜ್ಜೆ ಇಡುತ್ತಿದೆ ಭಾರತ, 2009 ರಿಂದ ಇಲ್ಲಿಯವರೆಗೂ ನಮ್ಮ ರಾಜ್ಯದಲ್ಲಿ ಯಾವುದೇ ಪೋಲಿಯೋ ಪ್ರಕರಣಗಳು ಕಂಡು ಬಂದಿಲ್ಲ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ರಾಜ್ಯ ಸರ್ಕಾರದ ಆದೇಶದಂತೆ 0 ಯಿಂದ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇದನ್ನೂ ಓದಿ: ವರ್ಷಾಂತ್ಯಕ್ಕೆ ಮನೆ ಮನೆಗೆ ಮಾರಿಕಣಿವೆ ನೀರು | ಕಾಮಗಾರಿಗೆ ಚಾಲನೆ ನೀಡಿದ ಸಚಿವ ಡಿ.ಸುಧಾಕರ್
ನಮ್ಮ ವೈದ್ಯರು ದೊಡ್ಡ ಸಾಧನೆ ಮಾಡಿದ್ದಾರೆ, ಅಕ್ಕ ಪಕ್ಕದ ರಾಷ್ಟ್ರಗಳಲ್ಲಿ ಇನ್ನೂ ಪೋಲಿಯೋ ಪ್ರಕರಣಗಳು ಪತ್ತೆ ಆಗುತ್ತಿದ್ದು, ಸದೃಢ ಆರೋಗ್ಯವಂತ ಮಕ್ಕಳು ಇರಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಈ ಕಾರ್ಯಕ್ರಮ ಮಾಡುತ್ತಿದ್ದು, ಕಳೆದ ಹಲವು ದಿನಗಳಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದಕ್ಕೆ ಶ್ರಮಿಸುತ್ತಿದ್ದು ಪೋಷಕರು ಸಹಕರಿಸಬೇಕೆಂದು ಕೆ. ಸಿ.ವೀರೇಂದ್ರ ಪಪ್ಪಿ ತಿಳಿಸಿದರು.
ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಮಾತನಾಡಿ, ಪೋಲಿಯೋ ಮುಕ್ತ ರಾಷ್ಟ್ರ ಮಾಡುವ ಉದ್ದೇಶದಿಂದ ಸರ್ಕಾರಗಳು ಪೋಲಿಯೋ ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿದೆ, ಪ್ರಸ್ತುತ ಜಿಲ್ಲೆಯಲ್ಲಿ ಪೋಲಿಯೋ ಪ್ರಕರಣಗಳು ಇರುವುದಿಲ್ಲ ಆದರೂ ಕೂಡ ಅಕ್ಕಪಕ್ಕದ ಅನೇಕ ದೇಶಗಳಲ್ಲಿ ಈಗಲೂ ಕೂಡ ಪೋಲಿಯೋ ಪ್ರಕರಣಗಳು ಚಾಲ್ತಿಯಲ್ಲಿರುವ ಕಾರಣ ನಮ್ಮ ದೇಶದಲ್ಲಿ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗಿದೆ, ಪ್ರಸ್ತುತ ಜಿಲ್ಲೆಯಲ್ಲಿ 1,35,105 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿ ಹೊಂದಿದ್ದು, ಒಟ್ಟು 1084 ಬೂತ್ ಗಳನ್ನು ನಿರ್ಮಾಣ ಮಾಡಲಾಗಿದೆ.
ಇದನ್ನೂ ಓದಿ: ಬಡವರ ಆರ್ಥಿಕ ಸಬಲೀಕರಣ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು
ಮಾರ್ಚ್ 4 ರಿಂದ 6ರ ವರೆಗೆ ಮನೆ ಮನೆ ಭೇಟಿ ನೀಡಿ ಪೋಲಿಯೋ ಲಸಿಕೆ ನೀಡಲಾಗುವುದು, ಸಾರ್ವಜನಿಕರು ಇದಕ್ಕೆ ಸಹಕಾರ ಕೊಟ್ಟು ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಾಣ ಮಾಡಲು ಸಹಕರಿಸಬೇಕೆಂದು ಹೇಳಿದರು.
ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಆಗಮಿಸಿ ಖುದ್ದು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ವೇಳೆ ಸ್ವಾಸ್ತ್ಯ ಫೌಂಡೇಷನ್ ನ ಸಂಸ್ಥಾಪಕರಾದ ಡಾ.ತೋಜಾಕ್ಷಿ ಭಾಯಿ ಅವರಿಂದ ಆಶಾ ಕಾರ್ಯಕರ್ತೆಯರಿಗೆ ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಬಿಳಿ ಛತ್ರಿಗಳನ್ನ ಉಚಿತವಾಗಿ ವಿತರಣೆ ಮಾಡಲಾಯಿತು.
ಇದನ್ನೂ ಓದಿ: ಬಿಜೆಪಿ ಮಹತ್ವದ ಸಭೆ | ಜಿಲ್ಲಾ ಪದಾಧಿಕಾರಿಗಳು, ಆಕಾಂಕ್ಷಿಗಳಿಂದ ಅಭಿಪ್ರಾಯ ಸಂಗ್ರಹ
ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಿ.ಎಂ.ಅಭಿನವ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಜಿಲ್ಲಾ ಸರ್ಜನ್ ರವೀಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಮೂಗಪ್ಪ, ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಯುವರಾಜ್ ಹಾಗೂ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಸಿಬ್ಬಂದಿಗಳು ಮತ್ತು ಆಶಾ-ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.