Connect with us

    ರಾಜ್ಯದ ಅಭಿವೃದ್ಧಿಯನ್ನು 10 ವರ್ಷ ಹಿಂದಕ್ಕೆ ತಳ್ಳಿದ ಬಜೆಟ್ | ಗೋವಿಂದ ಕಾರಜೋಳ

    Govinda karajola

    ಮುಖ್ಯ ಸುದ್ದಿ

    ರಾಜ್ಯದ ಅಭಿವೃದ್ಧಿಯನ್ನು 10 ವರ್ಷ ಹಿಂದಕ್ಕೆ ತಳ್ಳಿದ ಬಜೆಟ್ | ಗೋವಿಂದ ಕಾರಜೋಳ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 07 MARCH 2025

    ಚಿತ್ರದುರ್ಗ: ಗ್ಯಾರಂಟೀ ಯೋಜನೆಗಳಿಗೆ ಹಣ ಹೊಂದಿಸುವ ಭರದಲ್ಲಿ ರಾಜ್ಯವನ್ನು ಅಭಿವೃದ್ಧಿಯ ದೃಷ್ಟಿಯಲ್ಲಿ ಈ ಬಜೆಟ್ 10 ವರ್ಷದಷ್ಟು ಹಿಂದಕ್ಕೆ ತಳ್ಳಿದೆ ಎಂದು ಲೋಕಸಭಾ ಸದಸ್ಯರಾದ ಗೋವಿಂದ ಎಂ.ಕಾರಜೋಳ ಅಭಿಪ್ರಾಯಪಟ್ಟಿದ್ದಾರೆ.

    ಬಜೆಟ್ ಕುರಿತು ಹೇಳಿಕೆ ನೀಡಿರುವ ಅವರು, ಇಂದು ಕರ್ನಾಟಕ ವಿಧಾನ ಸಭೆಯಲ್ಲಿ 2025-26ನೇ ಸಾಲಿನ ಆಯವ್ಯಯ ಮಂಡಿಸಿರುವ ಸಿದ್ದರಾಮಯ್ಯನವರು ಸರ್ವೋದಯದ ಸಿದ್ದಾಂತಕ್ಕೆ ತಿಲಾಂಜಲಿ ಇಡುವ ಮೂಲಕ ಸಮಾಜದಲ್ಲಿ ಅಸಮಾನತೆ ಮತ್ತು ದ್ವೇಷದ ರಾಜಕಾರಣಕ್ಕೆ ಅವಕಾಶ ಮಾಡಿಕೊಟ್ಟಿರುತ್ತಾರೆ ಎಂದಿದ್ದಾರೆ.

    ಇದನ್ನೂ ಓದಿ: ಬಜೆಟ್‌ನಲ್ಲಿ ಚಿತ್ರದುರ್ಗಕ್ಕೆ ದಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

    ನಾನು ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರನ್ನು ಕೇಳಲು ಬಯಸುತ್ತಾಯಿದ್ದೇನೆ, ಮಧ್ಯ ಕರ್ನಾಟಕದಲ್ಲಿ ಬಹಳ ಪ್ರಮುಖವಾದ ನೀರಾವರಿ ಯೋಜನೆಗಳಾದ ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಒಂದೂ ರೂಪಾಯಿ ಕೂಡ ಮೀಸಲಿರಿಸಿಲ್ಲ ಹಾಗೂ ನವಲಿ ಮತ್ತು ತುಂಗಾ ಭದ್ರಾ ನದಿಗೆ ಸಮಾನಾಂತರ ಜಲಾಶಯ ನಿರ್ಮಿಸಲು ಕೂಡ ಹಣ ಇಟ್ಟಿಲ್ಲ.

    ಕೇವಲ ಹಿಂದಿನ ಸರ್ಕಾರದಲ್ಲಿ ಮಂಜೂರಾಗಿ ನಡೆಯುತ್ತಾ ಇರುವ ಕಾಮಗಾರಿಗಳ ಪಟ್ಟಿಯನ್ನ ಇವತ್ತು ಆವವ್ಯಯ ಪುಸ್ತಕದಲ್ಲಿ ಮುದ್ರಿಸಿ ಜನರ ಕಲ್ಯಾಣವನ್ನು ಬಯಸದೆ ಜನರಿಗೆ ಮೋಸ ಮಾಡುವಂತಹ ನಿರಾಸಾದಾಯಕ ಬಜೆಟ್ ಆಗಿದೆ.

    ಇದನ್ನೂ ಓದಿ: ಕೃಷಿ ಹೊಂಡಕ್ಕೆ ಬಿದ್ದು ಡಾ.ಜಯರಾಂ ಸಾವು

    ಮುಂಬರುವ ದಿನಗಳಲ್ಲಿ ಅಲ್ಪ ಸಂಖ್ಯಾತರ ಓಲೈಕೆಗಾಗಿ ಸಿದ್ದರಾಮಯ್ಯನವರು ಅಲ್ಪ ಸಂಖ್ಯಾತರಿಗಾಗಿಯೇ ಪ್ರತ್ಯೇಕ ಬಜೆಟ್ ಮಂಡಿಸಿದರೂ ಆಶ್ಚರ್ಯ ಪಡಬೇಕಿಲ್ಲ ಎಂದು ಗೋವಿಂದ ಕಾರಜೋಳ ಕಟುವಾಗಿ ಟೀಕಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top