
ಚಿತ್ರದುರ್ಗ ನ್ಯೂಸ್.ಕಾಂ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರೊಂದು ಧಗಧಗನೆ ಹೊತ್ತಿ ಉರಿದ ಘಟನೆ ಹಿರಿಯೂರು ಬಳಿ ನಡೆದಿದೆ.
ಹಿರಿಯೂರಿನಿಂದ ವಿವಿ ಸಾಗರಕ್ಕೆ ಹೋಗುವ ಮಾರ್ಗದ ಮೇಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ.
ಇದನ್ನೂ ಓದಿ: ಸಚಿವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಹೊನ್ನಾಳಿ ಮೂಲದ ರಮೇಶಾಚಾರಿ ಎಂಬುವವರ ಕಾರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಪೂರ್ಣ ಸುಟ್ಟು ಹೋಗಿದೆ.
ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣ ಮಾತ್ರದಲ್ಲಿ ಮುಗಿಲು ಮುಟ್ಟುವಂತೆ ಹೊತ್ತಿ ಉರಿದ ದೃಶು ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿದೆ.
ವೀಡಿಯೋ ನೋಡಿ: ಕಾರು ಧಗಧಗಿಸಿದ ವೀಡಿಯೋ ನೋಡಲು ಈ ಲಿಂಕ್ ಕ್ಲಿಕ್ ಮಾಡಿ
ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಹಿರಿಯೂರು ನಗರ ಠಾಣೆ ಪಿಎಸ್‍ಐ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
