
CHITRADURGA NEWS | 22 July 2026
ಚಿತ್ರದುರ್ಗ: ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರ ಮೇಲೆ ಕಾರು ಹರಿದು ಒಬ್ಬರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ
ಚಿತ್ರದುರ್ಗ – ಶಿವಮೊಗ್ಗ ರಸ್ತೆಯಲ್ಲಿ ಟಿ.ನುಲೇನೂರು ಗೇಟ್ ಬಳಿ ಇಂದು ಬೆಳಗ್ಗೆ ಅಪಘಾತ ನಡೆದಿದೆ.
ಹೊಳಲ್ಕೆರೆ ಕಡೆಯಿಂದ ಚಿತ್ರದುರ್ಗದ ಕಡೆಗೆ ಬರುತ್ತಿದ್ದ ಕಾರು ರಸ್ತೆ ಬದಿ ನಿಂತಿದ್ದ ಯುವಕನ ಮೇಲೆ ಹರಿದಿದೆ.
ಅಪಘಾತದಲ್ಲಿ ಮೃತಪಟ್ಟ ಯುವಕ ದಗ್ಗೆ ಮೂಲದ ಪ್ರದೀಪ(38) ಎಂದು ಗುರುತಿಸಲಾಗಿದೆ. ಇದೇ ವೇಳೆ ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಮಳೆ ಕೊರತೆ | ಅಡಿಕೆ, ತೆಂಗು ಬೆಳೆ ಉಳಿಸಿಕೊಳ್ಳುವ ಕುರಿತು ರೈತರಿಗೆ ತರಬೇತಿ
ಅತಿಯಾದ ವೇಗದಲ್ಲಿದ್ದ ಕಾರು ಚಾಲಕನ ನಿಯಂತ್ರಣಕ್ಕೆ ಸಿಗದೆ ಎಡ ಭಾಗಕ್ಕೆ ರಭಸವಾಗಿ ನುಗ್ಗಿದೆ. ಈ ವೇಳೆ ರಸ್ತೆಯಿಂದ ದೂರ ಇದ್ದವರಿಗೂ ತೊಂದರೆಯಾಗಿದೆ.
ಘಟನಾ ಸ್ಥಳಕ್ಕೆ ಚಿತ್ರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

