ಮುಖ್ಯ ಸುದ್ದಿ
Lok Adalat; ನ್ಯಾಯಾಲಯದಲ್ಲಿ ಒಂದಾದ ದಂಪತಿಗಳು | ನಾವು ಒಂದಾಗಿ ಬಾಳುತ್ತೇವೆ

Published on
CHITRADURGA NEWS | 14 SEPTEMBER 2024
ಚಿತ್ರದುರ್ಗ: ಚಿತ್ರದುರ್ಗದ ನ್ಯಾಯಾಲಯ(court)ಗಳಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ್ ಅದಾಲತ್(Lok Adalat) ನಲ್ಲಿ ಮುೂರು ಪ್ರತ್ಯೇಕ ಪ್ರಕರಣಗಳಲ್ಲಿ ದಂಪತಿಗಳು ಒಂದಾಗಿರುತ್ತಾರೆ.
ಕ್ಲಿಕ್ ಮಾಡಿ ಓದಿ: murugha math; ಶರಣ ಸಂಸ್ಕೃತಿ ಉತ್ಸವ | ಅ.5 ರಿಂದ ವಿದ್ಯುಕ್ತ ಚಾಲನೆ
ವೈವಾಹಿಕ ವಿವಾದಗಳಿಗೆ ಸಂಬಂಧಿಸಿದಂತೆ ಕಾರಣಾಂತರಗಳಿಂದ ನ್ಯಾಯಾಲಯಗಳಲ್ಲಿ ದಾಖಲಾಗಿದ್ದ ಪ್ರಕರಣಗಳು ರಾಜೀ ಮುಖಾಂತರ ಸುಖಾಂತ್ಯವಾಗಿರುತ್ತದೆ.
ವಿಶೇಷವಾಗಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ಇವರ ನ್ಯಾಯಾಲಯದಲ್ಲಿ ವೈವಾಹಿಕ ಜೀವನಕ್ಕೆ ಸಂಬಂಧಿಸಿದ 2022ನೇ ಸಾಲಿನಲ್ಲಿ ದಾಖಲಾದ ಒಂದು ಪ್ರಕರಣ ಹಾಗೂ 2023ನೇ ಸಾಲಿನ ದಾಖಲಾದ ಒಂದು ಪ್ರಕರಣ ಹಾಗೂ ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು, ನ್ಯಾಯಾಲಯದಲ್ಲಿ 2021ನೇ ಸಾಲಿನಲ್ಲಿ ದಾಖಲಾದ ಒಂದು ಪ್ರಕರಣವು ನ್ಯಾಯಾಧೀಶರು ಹಾಗೂ ವಕೀಲರ ಮನವೊಲಿಕೆಯಿಂದ ಈ ದಂಪತಿಗಳು ಮನಸ್ತಾಪ ಮರೆತು ರಾಜೀಯಾಗಿ ಜೀವನದಲ್ಲಿ ಒಂದಾಗಿ ಬಾಳುತ್ತೇವೆ ಎಂದು ಒಂದಾಗಿರುತ್ತಾರೆ.
ಈ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೋಣ ವಾಸುದೇವ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ಡಿ.ಮಮತ, ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎಂ.ಚೈತ್ರ, ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಸೇರಿದಂತೆ ಲೋಕ್ ಅದಾಲತ್ ನಲ್ಲಿ ವಕೀಲರು, ಸಾರ್ವಜನಿಕರು ಭಾಗವಹಿಸಿದ್ದರು.
Continue Reading
Related Topics:Chitradurga, Chitradurga news, Chitradurga Updates, Couple, Court, Kannada Latest News, Lok Adalat, ಕನ್ನಡ ಲೇಟೆಸ್ಟ್ ನ್ಯೂಸ್, ಚಿತ್ರದುರ್ಗ, ಚಿತ್ರದುರ್ಗ ಅಪ್ಡೇಟ್ಸ್, ಚಿತ್ರದುರ್ಗ ನ್ಯೂಸ್, ದಂಪತಿ, ನ್ಯಾಯಾಲಯ, ಲೋಕ್ ಅದಾಲತ್

Click to comment