ಚಿತ್ರದುರ್ಗ ನ್ಯೂಸ್.ಕಾಂ: ರಾಜ್ಯದ ವಿವಿಧ ಮಠಗಳ ಮಠಾಧೀಶರು ಶುಕ್ರವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಯಾ ಸಮುದಾಯಗಳಿಗೆ ಹಾಗೂ ಮಠಗಳಿಗೆ ಆಗಬೇಕಾದ ಕಾರ್ಯಕ್ರಮಗಳ ಕುರಿತು ಗಮನ ಸೆಳೆದರು.
ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ನೇತೃತ್ವದಲ್ಲಿ ಮುಖ್ಯಮಂತ್ರಿ ಭೇಟಿಯಾಗಿದ್ದು, ಸಮುದಾಯವಾರು ಬೇಡಿಕೆಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದಾರೆ. ಇದರೊಟ್ಟಿಗೆ ರಾಜ್ಯದ ಬರ ಪರಿಸ್ಥಿತಿ, ರೈತರು, ಜನಸಾಮಾನ್ಯರಿಗೆ ತಕ್ಷಣಕ್ಕೆ ಆಗಬೇಕಾದ ಕೆ
ಲಸಗಳು ಸೇರಿದಂತೆ ಹಲವು ಮಹತ್ವದ ವಿಚಾರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಮಠಾಧೀಶರು ವಿನಿಮಯ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಗೆ ಓಂಕಾರ | ಗೋ ಪೂಜೆ, ಧ್ವಜ ಪೂಜೆ
ಮಠಾಧೀಶರು ನಿಯೋಗದಲ್ಲಿ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಶಿವಶರಣ ಮಾದಾರ ಚನ್ನಯ್ಯ ಸ್ವಾಮೀಜಿ, ಹೊಸದುರ್ಗ ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಹರಿಹರ ರಾಜಾನಹಳ್ಳಿಯ ಶ್ರೀ ವಾಲ್ಮೀಕಿ ಪ್ರಸನ್ನನಂದ ಸ್ವಾಮಿಜಿ, ಹೊಸದುರ್ಗ ಭಗೀರಥ ಮಠದ ಶ್ರೀ ಪುರುಷೊತ್ತಮನಂದಪುರಿ ಸ್ವಾಮೀಜಿ, ಹೊಸದುರ್ಗ ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಯಾದವ ಗುರುಪೀಠದ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಶಿವಮೊಗ್ಗ ನಾರಾಯಣ ಗುರುಪೀಠದ ಶ್ರೀ ರೇಣುಕಾನಂದ ಸ್ವಾಮೀಜಿ, ತಂಗಡಗಿ ಹಡಪದ ಅಪ್ಪಣ್ಣ ಪೀಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಬಂಜಾರ ಗುರುಪೀಠದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಛಲವಾದಿ ಗುರುಪೀಠದ ಶ್ರೀ ಬಸವನಾಗೀದೇವ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಿದ್ದರು. ಈ ವೇಳೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹಾಜರಿದ್ದರು.
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
