ಮುಖ್ಯ ಸುದ್ದಿ
ಕಲ್ಲು ತೂರಿದ ಕಳ್ಳರ ಗ್ಯಾಂಗ್ | ಗಾಳಿಯಲ್ಲಿ ಗುಂಡು ಹಾರಿಸಿದ ಪೊಲೀಸರು | ಸ್ಥಳಕ್ಕೆ SP ಭೇಟಿ
CHITRADURGA NEWS | 21 JULY 2024
ಚಿತ್ರದುರ್ಗ: ನಾಯಕನಹಟ್ಟಿ ಸಮೀಪದ ಕುದಾಪುರ ಬಳಿ ಕಳ್ಳರ ಗ್ಯಾಂಗ್ ಹಿಡಿಯಲು ಮುಂದಾದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.
ನಾಯಕನಹಟ್ಟಿ ಪೊಲೀಸ್ ಠಾಣೆ ಪಿಎಸ್ಐ ಶಿವಕುಮಾರ್ ನೇತೃತ್ವದಲ್ಲಿ ಪೊಲೀಸರು ರಾತ್ರಿ ಗಸ್ತಿನಲ್ಲಿದ್ದಾಗ ಈ ಘಟನೆ ನಡೆದಿದೆ.
ಇದನ್ನೂ ಓದಿ: 2027ರ ವರ್ಷಾಂತ್ಯಕ್ಕೆ ನೇರ ರೈಲ್ವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ
ಆಂಧ್ರಪ್ರದೇಶದ ನೊಂದಣಿ ಸಂಖ್ಯೆ ಹೊಂದಿದ್ದ ಬೊಲೆರೊ ವಾಹನ ಕುದಾಪುರ DRDO ಬಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ನಿಲ್ಲಿಸಿ ಪರಿಶೀಲಿಸಲು ಮುಂದಾಗಿದ್ದಾರೆ.
ಈ ವೇಳೆ ಪೊಲೀಸ್ ಜೀಪ್ ಮೇಲೆ ಕಲ್ಲು ತೂರಾಟ ನಡೆಸಿ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.
ಕಲ್ಲು ತೂರಾಟ ನಡೆಸುತ್ತಿದ್ದಂತೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಬಗ್ಗದ ಡೆಡ್ಲಿ ಕಳ್ಳರ ಗ್ಯಾಂಗ್ ತಪ್ಪಿಸಿಕೊಂಡಿದೆ.
ಕಳ್ಳರು ಕಲ್ಲು ತೂರಿದ್ದರಿಂದ ಪಲೀಸರ ಜೀಪಿನ ಗ್ಲಾಸ್ ಡ್ಯಾಮೇಜ್ ಆಗಿದೆ.
ಕಳ್ಳರ ಗ್ಯಾಂಗಿನ ಬೊಲೆರೊದಲ್ಲಿ ಎಳು ಜನರಿದ್ದರು ಎನ್ನಲಾಗಿದೆ. ಕಳ್ಳರು ಅಥವಾ ದರೋಡೆಕೋರರು ಎಂಬ ಅನುಮಾನದಿಂದ ಪೊಲೀಸರು ಅಲರ್ಟ್ ಆಗಿದ್ದಾರೆ. ಈ ವೇಳೆ ಅವರ ವಾಹನ ಹಿಂಬಾಲಿಸಿ ಹಿಡಿಯಲು ಪೊಲೀಸರು ಹರಸಾಹಸ ಮಾಡಿದ್ದಾರೆ.
ಇದನ್ನೂ ಓದಿ: Rain: ಕೋಟೆನಾಡಿನಲ್ಲಿ ಚುರುಕಾಯ್ತು ಮಳೆ | ಶೀತಗಾಳಿಗೆ ಜನ ಹೈರಾಣು
ನಾಯಕನಹಟ್ಟಿಯಿಂದ ಬೋಸೇ ದೇವರಹಟ್ಟಿ ಕಡೆಗೆ ಹೋಗಿದ್ದ ಬರುವುದನ್ನು ಕಾದು ಪೊಲೀಸರು ನಾಯಕನಹಟ್ಟಿಯಿಂದ DRDO ಮುಂಭಾಗದಿಂದ ಕುದಾಪುರ ಮಾರ್ಗದಲ್ಲಿ ತೆರಳಿದ್ದರು.
ಹಿರೇಹಳ್ಳಿ, ಬೇಡರೆಡ್ಡಿಹಳ್ಳಿ, ಬುಕ್ಕಂಬೂದಿ ಮಾರ್ಗದಲ್ಲಿ ಕಳ್ಳರು ಎಸ್ಕೇಪ್ ಆಗಿದ್ದಾರೆ.
ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ ಭೇಟಿ:
ಘಟನೆಯ ಮಾಹಿತಿ ತಿಳಿಯುತ್ತಿಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾತ್ರಿ ನಡೆದ ಘಟನೆ ಕುರಿತು ಸ್ಥಳಿರು, ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಕಳ್ಳರು ಪೊಲೀಸರ ಮೇಲೆಯೇ ದಾಳಿ ನಡೆಸಿರುವ ಸುದ್ದಿ ತಿಳಿದು ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.