
ಚಿತ್ರದುರ್ಗ ನ್ಯೂಸ್.ಕಾಂ
ಯುವಕನ ಪ್ರೇಮ ವಂಚನೆಗೆ ಬಲಿಯಾದ ಬಾಲಕಿ ಇದೀಗ ಹೆಣ್ಣು ಮಗುವಿನ ತಾಯಿಯಾಗಿದ್ದಾಳೆ. ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಜಿಲ್ಲಾ– ತಾಲ್ಲೂಕು ಪಂಚಾಯಿತಿಗೆ ಸದ್ಯದಲ್ಲೇ ಚುನಾವಣೆ
ಮದುವೆಯಾಗುವುದಾಗಿ ನಂಬಿಸಿ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ಇದರಿಂದಾಗಿ ಬಾಲಕಿ ಗರ್ಭೀಣಿಯಾಗಿದ್ದು, ಡಿ.19 ರಂದು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ಕಳೆದ ಒಂದು ವರ್ಷದಿಂದ ಬಾಲಕಿ ಹಾಗೂ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಯಾರೂ ಇಲ್ಲದ ಸಮಯದಲ್ಲಿ ಬಾಲಕಿಯ ಮನೆಗೆ ಆಗಾಗ್ಗೆ ಭೇಟಿ ನೀಡುತ್ತಿದ್ದ ಯುವಕ, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. ಇದೀಗ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿ ವಿರುದ್ಧ ಬಾಲಕಿಯ ತಾಯಿ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಬುಧವಾರ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
