CHITRADURGA NEWS | 07 MAY 2025
ಚಿತ್ರದುರ್ಗ: 1962ರಲ್ಲಿ ನಡೆದ ಭಾರತ–ಚೀನಾ ಯುದ್ಧದ ಸಂದರ್ಭದಲ್ಲಿ ಚಿತ್ರದುರ್ಗ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಲಿ0. ಶ್ರೀ ಜಯವಿಭವ ಮುರುಘರಾಜೇಂದ್ರ ಮಹಾಸ್ವಾಮಿಗಳು, ತಾವು ಧರಿಸುತ್ತಿದ್ದ ಚಿನ್ನದ ಕಿರೀಟ, ಆಭರಣ ಹಾಗೂ ಧನವನ್ನು ರಾಷ್ಟ್ರ ರಕ್ಷಣಾ ನಿಧಿಗೆ ಸರ್ಮಪಿಸಿ ದೇಶಭಕ್ತಿ ಮೆರೆದಿದ್ದರು ಎಂದು ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಸ್ಮರಿಸಿದರು.
Also Read: ಕುರಿ ಮೈ ತೊಳೆಯಲು ಹಳ್ಳಕ್ಕೆ ಇಳಿದಿದ್ದ ದಂಪತಿ ಸಾವು | ಕಾನಿಹಳ್ಳದಲ್ಲಿ ಘಟನೆ
ಶ್ರೀ ಮಠದಲ್ಲಿರುವ ಶ್ರೀ ಜಯವಿಭವ ಮುರುಘರಾಜೇಂದ್ರ ಶ್ರೀಗಳ ಲೀಲಾ ವಿಶ್ರಾಂತಿ ತಾಣದಲ್ಲಿ ಬುಧವಾರ ನಡೆದ 61ನೇ ಸ್ಮರಣೋತ್ಸವದಲ್ಲಿ ಶ್ರೀಗಳ ಗದ್ದುಗೆಗೆ ಪುಷ್ಪವೃಷ್ಟಿ ಮತ್ತು ವಚನಾಭಿಷೇಕದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶ್ರೀಗಳು,
ಮುರುಘಾಮಠ ಪರಂಪರೆಯಲ್ಲಿ ಆಗಿಹೋಗಿರುವ ಎಲ್ಲಾ ಜಗದ್ಗುರುಗಳು ದೂರದೃಷ್ಟಿಯುಳ್ಳವರಾಗಿದ್ದರು. ನಮ್ಮ ದೇಶ ಉಳಿದರೆ ನಾವು ಉಳಿವೆವು ಎಂಬುದು ಮಲ್ಲಿಕಾರ್ಜುನ ಶ್ರೀಗಳವರ ವಾಣಿಯಾಗಿತ್ತು. ಜಯವಿಭವ ಶ್ರೀಗಳು ಯುದ್ಧದ ಸಂದರ್ಭದಲ್ಲಿ ದೇಶಕ್ಕಾಗಿ ಏನಾದರೂ ನೀಡಬೇಕು ಎಂಬ ಚಿಂತನೆಯೊ0ದಿಗೆ ಚಿನ್ನಾಭರಣ ಮತ್ತು ಧನವನ್ನು ದೇಶದ ರಕ್ಷಣಾ ನಿಧಿಗೆ ಅರ್ಪಿಸಿ ಶ್ರೀಮಠದ ಗೌರವ-ಘನತೆಯನ್ನು ಹೆಚ್ಚಿಸಿದ್ದರು ಎಂದರು.
ಅವರು ತಮ್ಮ ಗುರುಗಳಾದ ಜಯದೇವ ಶ್ರೀಗಳೊಂದಿಗೆ ಹಾಗೂ ಕಿರಿಯರಾದ ಮಲ್ಲಿಕಾರ್ಜುನ ಶ್ರೀಗಳೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ಬಹುಬಾಷಾ ಪಂಡಿತರಾಗಿದ್ದರು. ಕೃಷಿಯ ಕಡೆ ಹೆಚ್ಚಿನ ಒಲವು ಹೊಂದಿ ಶ್ರೀಮಠದ ಪಕ್ಕದ ತೋಟವನ್ನು ಮಾಡಿದ್ದಾರೆ. ತಮ್ಮ ಅಲ್ಪ ಕಾಲಾವಧಿಯಲ್ಲಿ ಶ್ರೀಮಠವನ್ನು ಅಭಿವೃದ್ಧಿಪಡಿಸಿದರು.
Also Read: ನಾಕೀಕೆರೆ ಶ್ರೀ ಕಲ್ಲೇಶ್ವರ ಸ್ವಾಮಿ ಅಗ್ನಿಕುಂಡ ಮಹೋತ್ಸವ | ವಿಜೃಂಭಣೆಯ ಅಡ್ಡಪಲ್ಲಕ್ಕಿ ಉತ್ಸವ
ಬೆಂಗಳೂರಿನಲ್ಲಿ ಸರ್ಪಭೂಷಣ ಮಠ ಸ್ಥಾಪನೆ ಮಾಡಿದರು. ಹಾಸನ, ಚಿಕ್ಕಜಾಜೂರಿನಲ್ಲಿ ವಿದ್ಯಾರ್ಥಿ ನಿಲಯಕ್ಕಾಗಿ ಜಾಗಗಳನ್ನು ಖರೀದಿ ಮಾಡಿದ್ದರು ಎಂದು ಹೇಳಿದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಆಧ್ಯಕ್ಷ ಎಂ.ಕೆ. ತಾಜ್‌ಪೀರ್, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಂ.ವೀರೇಶ್, ಹಿರಿಯ ಪತ್ರಕರ್ತ ಜಿ.ಎಸ್. ಉಜ್ಜಿನಪ್ಪ, ಚಂದ್ರವಳ್ಳಿಯ ಎಸ್.ಜೆ.ಎಂ. ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಹೆಚ್.ಎಸ್. ಪಂಚಾಕ್ಷರಿ ಮಾತನಾಡಿದರು.
ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಸಿ. ನಿರಂಜನಮೂರ್ತಿ, ವೀರಶೈವ ಸಮಾಜದ ನಿರ್ದೇಶಕ ಎಸ್. ಪರಮೇಶ್ ವೇದಿಕೆಯಲ್ಲಿದ್ದರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಕಾರ್ಯಕ್ರಮದಲ್ಲಿ ಬಸವರಾಜ ಕಟ್ಟಿ, ಪೈಲ್ವಾನ್ ತಿಪ್ಪೇಸ್ವಾಮಿ, ಹರಗುರು ಚರಮೂರ್ತಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಎಸ್.ಜೆ.ಎಂ. ವಿದ್ಯಾಪೀಠದ ಸಿಬ್ಬಂದಿ, ಭಕ್ತರು ಹಾಗೂ ಶ್ರೀಮಠದ ಅಭಿಮಾನಿಗಳು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
